English Tamil Hindi Telugu Kannada Malayalam Android App
Wed. Oct 5th, 2022

Online Desk

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತೆ ಹೆಚ್ಚಳವಾಗಿದ್ದು, ಕಳೆದ 24 ಗಂಟೆಯಲ್ಲಿ 2032 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,28,117ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಮಹಾಮಾರಿ ಕೊರೋನಾದಿಂದ ಇಂದು ಐವರು ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 40139ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1202 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 1850049ಕ್ಕೆ ಏರಿಕೆಯಾಗಿದೆ. ಆದರೆ ಇಂದು ರಾಜಧಾನಿಯಲ್ಲಿ ಕೊರೋನಾದಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ಇದನ್ನು ಓದಿ: ಪ್ರಸಕ್ತ ಓಮಿಕ್ರಾನ್ ತಳಿಗಳು ಶೇ.20-30 ರಷ್ಟು ಹೆಚ್ಚು ಸೋಂಕು ಹರಡಿಸಲು ಸಮರ್ಥ: ಎನ್ ಟಿಎಜಿಐ ವೈದ್ಯ ಎನ್ ಕೆ ಅರೋರ

ರಾಜ್ಯದಲ್ಲಿ ಇಂದು 1686 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 3977541ಕ್ಕೆ ಏರಿಕೆಯಾಗಿದೆ. ಇನ್ನು 10395 ಸಕ್ರಿಯ ಪ್ರಕರಣಗಳಿವೆ.

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published.