English Tamil Hindi Telugu Kannada Malayalam Android App
Mon. Oct 3rd, 2022

PTI

ಗುವಾಹಟಿ: ಅಸ್ಸಾಂನ ಮದರಸಾಗಳಲ್ಲಿ ಭಯೋತ್ಪಾದನಾ ಚಟುವಟಿಕೆಗಳು ಕಂಡುಬಂದ ಬೆನ್ನಲ್ಲೇ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದೆ.

ಈ ಕುರಿತು ಸ್ವತಃ ಅಸ್ಸಾಂ ಶಿಕ್ಷಣ ಸಚಿವ ರನೋಜ್‌ ಪೆಗು ಬುಧವಾರ ಮಾಹಿತಿ ನೀಡಿದ್ದು, ಅಸ್ಸಾಂ ಸರ್ಕಾರವು ರಾಜ್ಯದಲ್ಲಿರುವ ಎಲ್ಲ ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉಗ್ರರ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಹಲವು ಮದರಸಾಗಳ ಬೋಧಕರನ್ನು ಬಂಧಿಸಿರುವ ಹಿನ್ನೆಲೆ ಈ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಅಸ್ಸಾಂ: ವೀಸಾ ನಿಯಮ ಉಲ್ಲಂಘನೆ ಹಿನ್ನಲೆ 17 ಬಾಂಗ್ಲಾದೇಶಿಗರ ಬಂಧನ!

ಅಸ್ಸಾಂ ಸರ್ಕಾರೇತರ ಶಿಕ್ಷಣ ಸಂಸ್ಥೆಗಳ (ನಿಯಂತ್ರಣ ಮತ್ತು ನಿರ್ವಹಣೆ) ಕಾಯ್ದೆ, 2006ರ ಅಡಿ ಮದರಸಾಗಳನ್ನು ನಿಯಂತ್ರಣಕ್ಕೆ ಸಾಧ್ಯತೆ ಇದೆ. ಆದರೆ ಇದಕ್ಕೆ ಸಂಬಂಧಿಸಿ ಯಾವುದೇ ನಿರ್ದಿಷ್ಟ ಹೆಜ್ಜೆಯನ್ನು ಇಟ್ಟಿಲ್ಲ. ಖಾಸಗಿ ಸೆಮಿನರಿಗಳನ್ನು ಅಸ್ಸಾಂ ಸರ್ಕಾರೇತರ ಶಿಕ್ಷಣ ಸಂಸ್ಥೆಗಳ (ನಿಯಂತ್ರಣ ಮತ್ತು ನಿರ್ವಹಣೆ) ಕಾಯಿದೆ, 2006 ರ ನಿಯಂತ್ರಣಕ್ಕೆ ತರಬಹುದೇ ಎಂದು ಸರ್ಕಾರ ಪರಿಗಣಿಸುತ್ತಿದೆ ಎಂದು ಪೆಗು ತಿಳಿಸಿದ್ದಾರೆ.

ಇದನ್ನೂ ಓದಿ: ಮದರಸಾದಲ್ಲಿ ಭಯೋತ್ಪಾದನಾ ಚಟುವಟಿಕೆ; ಸ್ಥಳೀಯರಿಂದಲೇ ನೆಲಸಮ!

ಖಾಸಗಿ ಮದರಸಾಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ‘ಈ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸುವ ಕಾನೂನು ಈಗಾಗಲೇ ಚಾಲ್ತಿಯಲ್ಲಿದೆ. ಆದರೆ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳು ಈ ಕಾನೂನಿನಡಿ ಕಾರ್ಯ ನಿರ್ವಹಿಸುತ್ತಿಲ್ಲ. ಚಾಲ್ತಿಯಲ್ಲಿರುವ ಈ ಕಾಯ್ದೆ ಅಡಿ ಎಲ್ಲ ಸರ್ಕಾರೇತರ ಶಿಕ್ಷಣ ಸಂಸ್ಥೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಲಿದೆ. ಆದರೆ ಖಾಸಗಿ ಮದರಸಾಗಳು ಈ ವಿಭಾಗದಲ್ಲಿ ಬರುತ್ತವೆಯೋ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುವುದು. ನಿಯಂತ್ರಣಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ‘ಬುಲ್ಡೋಜರ್ ರಾಜ್’ ನಿಲ್ಲಿಸಿ, ದೇಶ ವಿರೋಧಿಗಳನ್ನು ಕಾನೂನಾತ್ಮಕವಾಗಿ ಎದುರಿಸಿ: ಅಸ್ಸಾಂ ಸಂಸದ

ಅಸ್ಸಾಂನಲ್ಲಿ 4 ಪ್ರಮುಖ ಮುಸ್ಲಿಂ ಸಂಘಟನೆಗಳು ಸುಮಾರು 3,000 ನೋಂದಾಯಿತ ಮತ್ತು ನೋಂದಾಯಿಸಲಾಗದ ಮದರಸಾಗಳು ಚಾಲ್ತಿಯಲ್ಲಿವೆ ಎಂದು ಪೊಲೀಸ್‌ ಮಹಾನಿರ್ದೇಶಕ ಭಾಸ್ಕರ್‌ ಜ್ಯೋತಿ ಮಹಾಂತ ಇತ್ತೀಚೆಗೆ ಹೇಳಿದ್ದರು.

ಇದನ್ನೂ ಓದಿ: ಅಸ್ಸಾಂ: ಅಲ್-ಖೈದಾ ಉಗ್ರ ಸಂಘಟನೆಯೊಂದಿಗೆ ನಟು ಆರೋಪ; ಮದರಸಾ ನೆಲಸಮ

ಕಳೆದ ವರ್ಷ ಏಪ್ರಿಲ್‌ 1ರಂದು ಸರ್ಕಾರದಡಿ ನಡೆಸಲಾಗುತ್ತಿದ್ದ 610 ಮದರಸಾಗಳನ್ನು ಪ್ರಾಥಮಿಕ, ಪ್ರೌಢ ಶಾಲೆಗಳನ್ನಾಗಿ ಪರಿವರ್ತಿಸಲಾಗಿತ್ತು. ಉಗ್ರಗಾಮಿ ಸಂಘಟನೆಗಳ ಜೊತೆ ಸಂಪರ್ಕ ಹೊಂದಿರುವ ಆರೋಪದಡಿ ಅಸ್ಸಾಂನಲ್ಲಿ ಮಾರ್ಚ್‌ ತಿಂಗಳಿನಿಂದ ಇಲ್ಲಿಯವರೆಗೆ ಮದರಸಾಗಳಲ್ಲಿ ಪಾಠ ಮಾಡುತ್ತಿದ್ದ 42 ಶಿಕ್ಷಕರನ್ನು ಬಂಧಿಸಲಾಗಿದೆ.
 

Source link

For more news update stay with actp news

Android App

Facebook

Twitter

Dailyhunt

Share Chat

Telegram

Koo App

Leave a Reply

Your email address will not be published.