Jobs
oi-Gururaj S

ಕೊಪ್ಪಳ, ಜೂನ್ 20; ಕೊಪ್ಪಳದಲ್ಲಿ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆ (ಸಿಬಿಎಸ್ಇ ಪಠ್ಯಕ್ರಮ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಲಾಗುತ್ತಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಸಲ್ಲಿಸಬೇಕು.
ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿರುವ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗೆ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತಿದೆ.
ಗ್ರಾಮ ಪಂಚಾಯಿತಿ ಸದಸ್ಯ ಅತಿಥಿ ಶಿಕ್ಷಕನಾಗಿ ನೇಮಕವಾಗಬಹುದೇ?

ವಸತಿ ಶಾಲೆಯಲ್ಲಿ ಜೀವಶಾಸ್ತ್ರ ವಿಷಯದ ಎರಡು ಹುದ್ದೆ, ರಸಾಯನಶಾಸ್ತ್ರ ಒಂದು, ಭೌತಶಾಸ್ತ್ರ ಎರಡು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಎಂ.ಎಸ್ಸಿ, ಬಿಎಡ್ ವಿದ್ಯಾರ್ಹತೆ ಹೊಂದಿರುವವರು ಅರ್ಜಿ ಹಾಕಬೇಕು.
4055 ಅತಿಥಿ ಉಪನ್ಯಾಸಕರ ನೇಮಕಾತಿ; ಯಾವ ಜಿಲ್ಲೆಗೆ ಎಷ್ಟು ಹುದ್ದೆಗಳು?
ಗಣಕ ಯಂತ್ರ ವಿಜ್ಞಾನ ವಿಷಯದ ಒಂದು ಹುದ್ದೆಗೆ ಎಂ-ಟೆಕ್ & ಎಂ.ಸಿ.ಎ ವಿದ್ಯಾರ್ಹತೆ ಹೊಂದಿರುವವರು, ಸಮಾಜ ವಿಜ್ಞಾನ ವಿಷಯದ ಎರಡು ಹುದ್ದೆಗಳಿಗೆ ಎಂಎ, ಬಿಎಡ್, ಒಂದು ಪ್ರಯೋಗಾಲಯ ಸಹಾಯ ಹುದ್ದೆಗೆ ಬಿಎಸ್ಸಿ (ಪಿಸಿಎಂಬಿ) ವಿದ್ಯಾರ್ಹತೆ, ಒಂದು ಆರ್ಟ್ & ಕ್ರಾಫ್ಟ್ ಹುದ್ದೆಗೆ ಡಿಪ್ಲೋಮಾ ಇನ್-ಆರ್ಟ್ & ಕ್ರಾಫ್ಟ್ ವಿದ್ಯಾರ್ಹತೆಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Guest Teacher Recruitment: ಶಿವಮೊಗ್ಗ ಜಿಲ್ಲೆಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಜೂನ್ 26ರ ಸಂಜೆ 5ಗಂಟೆಯೊಳಗಾಗಿ ಡಾ. ಎ. ಪಿ. ಜೆ. ಅಬ್ದುಲ್ ಕಲಾಂ ವಸತಿ ಶಾಲೆಯ ಹಿರೇಸಿಂದೋಗಿ ಅಥವಾ ಹೊಸಪೇಟೆ ರಸ್ತೆ ಮೌಲಾನಾ ಆಜಾದ್ ಭವನದಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ತರಬೇತಿಗಾಗಿ ಅರ್ಜಿ ಆಹ್ವಾನ; ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ವೆಬ್‌ಸೈಟ್ www.sw.kar.nic.in ಮೂಲಕ ಜುಲೈ 15ರೊಳಗಾಗಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ವೆಬ್‌ಸೈಟ್ www.tw.kar.nic.in ಮೂಲಕ ಜುಲೈ 24ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಬಳಿಕ ಆನ್‌ಲೈನ್ ಅರ್ಜಿ ಪ್ರತಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ತಮ್ಮ ತಾಲೂಕಿನ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಅಥವಾ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು.
English summary
Apply for guest teacher post at Koppal district Hiresindogi APJ Abdul Kalam residential school. Candidates can apply till June 26.