ಆರ್‌ಆರ್ ಬ್ಯಾಟರ್ಗಳ ವೈಫಲ್ಯ
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್‌ಗೆ 151 ರನ್ ಗಳಿಸಿತು. ಆರ್‌ಆರ್ ಪರ ವಿಕೆಟ್ ಕೀಪರ್ ಧ್ರುವ್ ಜುರೆಲ್ ಅತಿ ಹೆಚ್ಚು ರನ್ ಗಳಿಸಿದರು. 28 ಎಸೆತಗಳಲ್ಲಿ 5 ಬೌಂಡರಿಗಳ ಸಹಾಯದಿಂದ 33 ರನ್, ಯಶಸ್ವಿ ಜೈಸ್ವಾಲ್ 24 ಎಸೆತಗಳಲ್ಲಿ 2 ಬೌಂಡರಿ, 2 ಸಿಕ್ಸರ್ ನೆರವಿನಿಂದ 29 ರನ್, ಹಂಗಾಮಿ ನಾಯಕ ರಿಯಾನ್ ಪರಾಗ್ 15 ಎಸೆತಗಳಲ್ಲಿ 3 ಸಿಕ್ಸರ್ ಸಹಾಯದಿಂದ 25 ರನ್ ಗಳಿಸಿ ನಿರಾಸೆ ಮೂಡಿಸಿದರು. ಅಂತಿಮ ಹಂತದಲ್ಲಿ ಜೋಫ್ರಾ ಆರ್ಚರ್ 16 ರನ್ ಗಳಿಸಿ ಔಟಾದರು. ಸಂಜು ಸ್ಯಾಮ್ಸನ್ (13), ನಿತೀಶ್ ರಾಣಾ (8), ವನಿಂದು ಹಸರಂಗ (4), ಶುಭಂ ದುಬೆ (9) ಮತ್ತು ಶಿಮ್ರಾನ್ ಹೆಟ್ಮೆಯರ್ (7) ತೀವ್ರ ನಿರಾಸೆ ಮೂಡಿಸಿದರು. ಕೆಕೆಆರ್ ಪರ ವರುಣ್ ಚಕ್ರವರ್ತಿ, ಮೋಯಿನ್ ಅಲಿ, ಹರ್ಷಿತ್ ರಾಣಾ ಮತ್ತು ವೈಭವ್ ಅರೋರಾ ತಲಾ ಎರಡು ವಿಕೆಟ್ ಪಡೆದರೆ, ಸ್ಪೆನ್ಸರ್ ಜಾನ್ಸನ್ ಒಂದು ವಿಕೆಟ್ ಪಡೆದರು.