Last Updated:
ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯುದ್ಧ ಮಾಡುವ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ನಿಗದಿಗೊಳಿಸಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ.
ಲಕ್ನೋ (ಅ.25): ವಿಜಯ ದಶಮಿಯಂದು ಚೀನಾ ಗಡಿ ಸಂಘರ್ಷದ ಕುರಿತು ಮಾತನಾಡಿದ ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಚೀನಾ ಆಕ್ರಮಣತೆ ಜಗತ್ತಿಗೆ ಗೊತ್ತಾಗಿದೆ. ಇದಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಇಂದು ಎಚ್ಚರಿಕೆ ನೀಡಿದ್ದಾರೆ. ಇದರ ಬೆನ್ನಲ್ಲೇ ಚೀನಾ ಸಂಘರ್ಷ ಕುರಿತು ಮಾತನಾಡಿರುವ ಉತ್ತರ ಪ್ರದೇಶ ಬಿಜೆಪಿ ಘಟಕದ ಮುಖ್ಯಸ್ಥ ಸ್ವತಂತ್ರ ದೇವ್ ಸಿಂಗ್ ಪಾಕಿಸ್ತಾನ ಮತ್ತು ಚೀನಾದೊಂದಿಗೆ ಯುದ್ಧ ಮಾಡುವ ಕುರಿತು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರು ದಿನಾಂಕ ನಿಗದಿಗೊಳಿಸಿದ್ದಾರೆ ಎಂದು ವಿವಾದಾತ್ಮಕ ಹೇಳಿಕೆ ನೀಡಿ ಗಮನಸೆಳೆದಿದ್ದಾರೆ. ಭಾರತ ಮತ್ತು ಚೀನಾ ಗಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗುತ್ತಿರುವ ಸಮಯದಲ್ಲಿ ಬಿಜೆಪಿ ನಾಯಕರು ಈ ರೀತಿ ಹೇಳಿಕೆ ನೀಡಿದ್ದಾರೆ.
ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಆರಂಬ ಮತ್ತು ಸಂವಿಧಾನದ 370ನೇ ವಿಧಿ ಅನ್ವಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ರದ್ದತಿ ಕುರಿತು ಹೇಳಿಕೆ ಜೊತೆ ಈ ಸಂಘರ್ಷದ ಕುರಿತು ಅವರು ಮಾತನಾಡಿದರು.
ವಿಧಿ 370 ಹಾಗೂ ರಾಮ ಮಂದಿರ ನಿರ್ಮಾಣ ಕುರಿತಂತಎ ಪ್ರಧಾನಿಗಳು ನಿರ್ಧಾರ ತೆಗೆದುಕೊಂಡ ರೀತಿಯಲ್ಲಿಯೇ ಈ ಪಾಕಿಸ್ತಾನ ಮತ್ತು ಚೀನಾ ನಡುವೆ ಯುದ್ಧದ ಕುರಿತು ನಿರ್ಧಾರಿಸಿದ್ದಾರೆ ಎಂಬ ತಿಳಿಸಿದ್ದಾರೆ . ಈ ಕುರಿತು ದಿನಾಂಕವನ್ನು ನಿರ್ಧಾರಿಸಲಾಗಿದೆ ಎಂಬ ವಿಡಿಯೋ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಬಿಜೆಪಿ ಶಾಸಕ ಸಂಜಯ್ ಯಾದವ್ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಸಿಂಗ್ ಈ ರೀತಿ ಹೇಳಿಕೆ ನೀಡಿರುವ ವಿಡಿಯೋ ಕಂಡು ಬಂದಿದೆ, ಇದೇ ವೇಳೆ ಸಮಾಜವಾದಿ ಮತ್ತು ಬಹುಜನ ಸಮಾಜ ಪಕ್ಷದ ಕಾರ್ಯಕರ್ತರನ್ನು ಭಯೋತ್ಪಾದಕರಿಗೆ ಹೋಲಿಕೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಸಂಸದ ರವೀಂದ್ರ ಕುಶ್ವಾಹ , ಪಕ್ಷದ ಅಧ್ಯಕ್ಷರು ಕಾರ್ಯಕರ್ತರ ಸ್ಥೈರ್ಯವನ್ನು ಹೆಚ್ಚಿಸಲು ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಸಮಾಜಾಯಿಷಿ ನೀಡಿದ್ದಾರೆ.













