ಟೆಸ್ಟ್​ ಕ್ರಿಕೆಟ್​​ನಲ್ಲಿ ಭಾರತದ ಟಾಪ್​-5 ಅತ್ಯಂತ ಯಶಸ್ವಿ ನಾಯಕರು; ಕೊಹ್ಲಿಗಿಲ್ಲ ಯಾರೂ ಸರಿಸಾಟಿ

ವಿರಾಟ್ ಕೊಹ್ಲಿ ಬ್ಯಾಟ್ಸ್​ಮನ್​​ ಆಗಿ ಮಾತ್ರವಲ್ಲದೆ ನಾಯಕನಾಗಿಯೂ ಉತ್ತಮ ದಾಖಲೆ ಹೊಂದಿದ್ದಾರೆ. ಭಾರತದ ಪರ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಗೆದ್ದ ನಾಯಕರ ಪಟ್ಟಿಯಲ್ಲಿ ಕಿಂಗ್ ಕೊಹ್ಲಿ ಅಗ್ರಸ್ಥಾನ ಪಡೆದಿದ್ದಾರೆ. 2014 ರಿಂದ 2022 ರವರೆಗೆ 68 ಟೆಸ್ಟ್ ಪಂದ್ಯಗಳಲ್ಲಿ ಭಾರತವನ್ನು ಮುನ್ನಡೆಸಿರುವ ವಿರಾಟ್, 40 ಪಂದ್ಯಗಳನ್ನು ಗೆದ್ದಿದ್ದಾರೆ. ಅವರ ನಾಯಕತ್ವದಲ್ಲಿ ಭಾರತ 17 ಟೆಸ್ಟ್ ಪಂದ್ಯಗಳನ್ನು ಸೋತಿದೆ, 11 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ.

(AFP)

Source link