India
oi-Ravindra Gangal
ಮುಂಬೈ, ಜುಲೈ 03: ರಿಲಯನ್ಸ್ ಎಡಿಎ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಸೋಮವಾರ ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಗಳ ಮುಂದೆ ಹಾಜರಾದರು. ವಿದೇಶಿ ವಿನಿಮಯ ಕಾನೂನಿನ ಉಲ್ಲಂಘನೆಗೆ ಸಂಬಂಧಿಸಿದಂತೆ ಅವರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಅನಿಲ್ ಅಂಬಾನಿ ಅವರನ್ನು ದಕ್ಷಿಣ ಮುಂಬೈನಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ತೀವ್ರ ವಿಚಾರಣೆಗೆ ಒಳಪಡಿಸಿಕೊಳ್ಳಲಾಯಿತು.
ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆಯ (ಫೆಮಾ) ವಿವಿಧ ಸೆಕ್ಷನ್ಗಳ ಅಡಿಯಲ್ಲಿ ದಾಖಲಿಸಲಾದ ಹೊಸ ಪ್ರಕರಣದ ಭಾಗವಾಗಿ ಅಂಬಾನಿ ಹೇಳಿಕೆಯನ್ನು ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅನ್ನಭಾಗ್ಯ; ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ಹಣ ಪಾವತಿಗೆ ಆದೇಶ
ಯೆಸ್ ಬ್ಯಾಂಕ್ನ ರಾಣಾ ಕಪೂರ್ ಮತ್ತು ಇತರರ ವಿರುದ್ಧ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರು 2020 ರಲ್ಲಿ ಇಡಿ ಮುಂದೆ ಹಾಜರಾಗಿದ್ದರು.
ಎರಡು ಸ್ವಿಸ್ ಬ್ಯಾಂಕ್ ಖಾತೆಗಳಲ್ಲಿ 814 ಕೋಟಿ ರೂ.ಗೂ ಅಧಿಕ ಮೊತ್ತದ ಅಘೋಷಿತ ಹಣದ ಬಗ್ಗೆಯೂ ವಿಚಾರಣೆ ನಡೆದಿತ್ತು. ಅದರ ಮೇಲಿನ 420 ಕೋಟಿ ತೆರಿಗೆ ವಂಚನೆ ಆರೋಪದ ಮೇಲೆ ಆದಾಯ ತೆರಿಗೆ ಇಲಾಖೆ ಅಂಬಾನಿಗೆ ಕಪ್ಪುಹಣ ತಡೆ ಕಾನೂನಿನಡಿ ನೋಟಿಸ್ ಜಾರಿ ಮಾಡಿತ್ತು.
ಮಾರ್ಚ್ನಲ್ಲಿ ಐ-ಟಿ ಶೋಕಾಸ್ ನೋಟಿಸ್ ಮತ್ತು ದಂಡದ ಬೇಡಿಕೆಗೆ ಬಾಂಬೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿತು.
English summary
ED questions Anil Ambani in fresh FEMA case,
Story first published: Monday, July 3, 2023, 18:32 [IST]