ಅನ್ನಭಾಗ್ಯ ಅನುಷ್ಠಾನ ವಿಳಂಬವಾದರೆ ಕೇಂದ್ರವೇ ಹೊಣೆ: ಸಲೀಂ ಅಹಮದ್ | If the implementation of Annabhagya is delayed, the Center will be responsible: Salim Ahmed

Karnataka

oi-Punith BU

|

Google Oneindia Kannada News

ಬೆಂಗಳೂರು, ಜೂನ್‌ 24: ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ತಿಂಗಳಿಗೆ 10 ಕೆಜಿ ಅಕ್ಕಿ ನೀಡುವ ಅನ್ನ ಭಾಗ್ಯ ಯೋಜನೆ ಜಾರಿ ವಿಳಂಬವಾದರೆ ಕೇಂದ್ರ ಸರ್ಕಾರವೇ ನೇರ ಹೊಣೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಕಾರ್ಯಾಧ್ಯಕ್ಷ ಸಲೀಂ ಅಹಮದ್ ಶನಿವಾರ ಹೇಳಿದ್ದಾರೆ.

ರಾಜ್ಯ ಸರ್ಕಾರ ಅಕ್ಕಿ ಬೆಲೆ ನೀಡಲು ಸಿದ್ಧವಿದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡದೆ ಇದರಲ್ಲಿ ರಾಜಕೀಯ ಮಾಡುತ್ತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಹಿನ್ನಡೆಯಾಗುವ ಭೀತಿಯಿಂದ ಕೇಂದ್ರದ ಬಿಜೆಪಿ ಸರ್ಕಾರ ಈ ರೀತಿ ಮಾಡುತ್ತಿದೆ. ಹೀಗಾಗಿ ಅನ್ನಭಾಗ್ಯ ಯೋಜನೆ ಜಾರಿ ವಿಳಂಬವಾದರೆ ಕೇಂದ್ರ ಸರ್ಕಾರವೇ ನೇರವಾಗಿ ಹೊಣೆ ಎಂದು ಹೇಳಿದರು.

working president Salim Ahmed

ಈ ಯೋಜನೆಯನ್ನು ಚುನಾವಣೆಗಾಗಿ ಜಾರಿಗೊಳಿಸುತ್ತಿಲ್ಲ. ಬದಲಾಗಿ ಬಡವರ ಕಲ್ಯಾಣಕ್ಕಾಗಿ ಜಾರಿ ಮಾಡಲಾಗುತ್ತಿದೆ. ರಾಜ್ಯಕ್ಕೆ ಅಕ್ಕಿ ನೀಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವಂತೆ ರಾಜ್ಯದ ಬಿಜೆಪಿ ಸಂಸದರು ಮತ್ತು ಕೇಂದ್ರ ಸಚಿವರನ್ನು ಸಲೀಂ ಅಹಮದ್‌ ಒತ್ತಾಯಿಸಿದರು.

ಭಾರತೀಯ ಆಹಾರ ನಿಗಮವು ಅಕ್ಕಿ ನೀಡಲು ಒಪ್ಪಿಗೆ ನೀಡಿತ್ತು, ಆದರೆ ರಾಜ್ಯ ಸರ್ಕಾರವು ಪಾವತಿಸಲು ಸಿದ್ಧವಾಗಿದ್ದರೂ ಅದು ನಿಲುವನ್ನು ಬದಲಾಯಿಸಿತು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡುವ ಮೊದಲು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ ಎಚ್ ಮುನಿಯಪ್ಪ ಅವರನ್ನು ಮೂರು ದಿನಗಳ ಕಾಲ ಕಾಯುವಂತೆ ಮಾಡಲಾಯಿತು ಎಂದು ಅವರು ಹೇಳಿದರು. .

ಕಾಂಗ್ರೆಸ್ ಸರ್ಕಾರವು ಚುನಾವಣೆಗೆ ಮೊದಲು ಭರವಸೆ ನೀಡಿದ ಎಲ್ಲಾ 5 ಭರವಸೆಗಳನ್ನು ಜಾರಿಗೊಳಿಸುತ್ತದೆ ಮತ್ತು ಪಕ್ಷವು ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಚುನಾವಣೆಯಲ್ಲಿ ಗೆಲ್ಲುತ್ತದೆ ಮತ್ತು ರಾಜ್ಯದಲ್ಲಿ ಲೋಕಸಭೆ ಚುನಾವಣೆಯಲ್ಲಿ 20 ಸ್ಥಾನಗಳನ್ನು ಪಡೆಯುತ್ತದೆ ಎಂದು ಅವರು ಹೇಳಿದರು.

working president Salim Ahmed

ಈ ಮಧ್ಯೆ ರಾಜ್ಯ ಕಾಂಗ್ರೆಸ್‌ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಅಡಿಯಲ್ಲಿ 10 ಕೆಜಿ ಅಕ್ಕಿಯನ್ನು ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲವಾದ್ದರಿಂದ ಸರ್ಕಾರವು ಜುಲೈ ಬದಲಿಗೆ ಆಗಸ್ಟ್‌ನಿಂದ ಯೋಜನೆಯನ್ನು ಜಾರಿಗೆ ತರಲು ಯೋಜಿಸುತ್ತಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಜುಲೈ 1ರಂದು ಅನ್ನಭಾಗ್ಯ ಜಾರಿಗೆ ತರಲು ಯೋಜಿಸಿದ್ದರೂ ಭಾರತೀಯ ಆಹಾರ ನಿಗಮ ಸೇರಿದಂತೆ ಇತರ ಯಾವುದೇ ಮೂಲಗಳಿಂದ ಅಕ್ಕಿ ಪಡೆದುಕೊಳ್ಳಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ. ಛತ್ತೀಸ್‌ಗಢ, ತೆಲಂಗಾಣ ಮತ್ತು ಪಂಜಾಬ್‌ನಂತಹ ಕೆಲವು ರಾಜ್ಯಗಳು ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದರೂ, ರಾಜ್ಯವು ಇನ್ನೂ ಬೆಲೆಗಳ ಮಾತುಕತೆ ನಡೆಸುತ್ತಿದೆ.

ಕೆಲವು ರಾಜ್ಯಗಳು ಭತ್ತವನ್ನು ಮಾತ್ರ ನೀಡುವುದಾಗಿ ಭರವಸೆ ನೀಡಿದ್ದು, ಇದಕ್ಕಾಗಿ ರಾಜ್ಯವು ಮಿಲ್ಲಿಂಗ್ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಜುಲೈ ಅಂತ್ಯದಲ್ಲಿ ನಮಗೆ ಅಕ್ಕಿ ಬಂದರೆ, ಆಗಸ್ಟ್‌ನಲ್ಲಿ ಮಾತ್ರ ನಾವು ಯೋಜನೆಯನ್ನು ಜಾರಿಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

 ಅನ್ನಭಾಗ್ಯ ಸಂಘರ್ಷ: ಮುನಿಯಪ್ಪ ಭೇಟಿಗೆ ಮೂರು ದಿನ ಸತಾಯಿಸಿದ ಕೇಂದ್ರ ಸಚಿವ- ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದ ಕಾಂಗ್ರೆಸ್‌ ಅನ್ನಭಾಗ್ಯ ಸಂಘರ್ಷ: ಮುನಿಯಪ್ಪ ಭೇಟಿಗೆ ಮೂರು ದಿನ ಸತಾಯಿಸಿದ ಕೇಂದ್ರ ಸಚಿವ- ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದ ಕಾಂಗ್ರೆಸ್‌

ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿದ್ದ ಕೆಎಚ್‌ ಮುನಿಯಪ್ಪ ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್​ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದ್ದರು.

ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ‌ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್​ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ? ಅಕ್ಕಿ ವಿಚಾರವಾಗಿ ನಮ್ಮ ದಾರಿಯನ್ನು ನಾವು ಕಂಡುಕೊಳ್ಳಬೇಕಿದೆ. ರಾಜಕೀಯ ದುರುದ್ದೇಶ ಇದೆ ಎನ್ನುವ ಭಾವನೆ ಬರುತ್ತಿದೆ. ಈ ವಾರದಲ್ಲಿ ಅಂತಿಮ ತೀರ್ಮಾನ ಆಗಲಿದೆ ಎಂದು ಹೇಳಿದ್ದರು.

English summary

Karnataka Pradesh Congress Committee (KPCC) working president Salim Ahmed said on Saturday that if the implementation of the Anna Bhagya scheme, which provides 10 kg of rice per month to each member of the BPL family, is delayed, the central government will be directly responsible.

Story first published: Saturday, June 24, 2023, 15:31 [IST]

Source link