ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭಿಸಲು ಸಿಎಂ ಸಿದ್ದರಾಮಯ್ಯ ಭರವಸೆ | Resumption of programs designed for minorities: CM Siddaramaiah

Bengaluru

oi-Sunitha B

|

Google Oneindia Kannada News

ಬೆಂಗಳೂರು ಜೂನ್ 30: ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಅಲ್ಪಸಂಖ್ಯಾತರಿಗೆ ರೂಪಿಸಿದ್ದ ಕಾರ್ಯಕ್ರಮಗಳನ್ನು ಪುನರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಮುಸ್ಲಿಂ ಚಿಂತಕರ ಚಾವಡಿಯ ಕೇಂದ್ರ ಮಂಡಳಿಯ ನಿಯೋಗವು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ ಸಂಧರ್ಭದಲ್ಲಿ ಮಾತನಾಡುತ್ತಿದ್ದರು. ಸರ್ಕಾರ ಘೋಷಿಸಿದ್ದಂತೆ ಐದು ಗ್ಯಾರಂಟಿಗಳನ್ನು ಈಗಲೇ ಅನುಷ್ಠಾನಕ್ಕೆ ತರುತ್ತಿದ್ದು, ಮುಂದಿನ ವರ್ಷದಿಂದ ಅಲ್ಪಸಂಖ್ಯಾತರಿಗೆ ಹೆಚ್ಚಿನ ಅನುದಾನ ನಿಗದಿಪಡಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Resumption of minorities programs

ಚಾವಡಿಯು ಒಂದು ದಶಕದಿಂದ ಕರ್ನಾಟಕದ ಜನಪರ ಚಳವಳಿಗಳೊಂದಿಗೆ ಗುರುತಿಸಿಕೊಂಡಿದೆ. ಸಾಹಿತ್ಯ ಕ್ಷೇತ್ರ, ಕಲ್ಯಾಣ ಕರ್ನಾಟಕದ ಅಭಿವೃದ್ಧಿ , ವಿದ್ಯಾರ್ಥಿ, ಹಾಗೂ ದಲಿತ ಚಳವಳಿಗಳು ಹಾಗೂ ಜನಪರವಾದ ಇತರೆ ಹೋರಾಟಗಳೊಂದಿಗೆ ಗುರುತಿಸಿಕೊಂಡಿದೆ.

ಮುಸ್ಲಿಂ ಸಮುದಾಯದ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಚಾವಡಿ ಒತ್ತು ನೀಡಿದೆ. ತನ್ನ ಧರ್ಮದ ಕೋಮುವಾದವನ್ನು ವಿರೋಧಿಸುತ್ತಲೇ ಇನ್ನೊಂದರ ಕೋಮುವಾದವನ್ನು ವಿರೋಧಿಸುವ ಕೆಲಸ ಮಾಡುತ್ತಿದೆ ಎಂದು ಸಭೆಗೆ ತಿಳಿಸಲಾಯಿತು.

Government employee; ಸಿದ್ದರಾಮಯ್ಯ ಬಜೆಟ್‌, ನೌಕರರ ಬೇಡಿಕೆಗಳು Government employee; ಸಿದ್ದರಾಮಯ್ಯ ಬಜೆಟ್‌, ನೌಕರರ ಬೇಡಿಕೆಗಳು

ಕಳೆದ ಐದು ವರ್ಷಗಳಿಂದ ಸರ್ಕಾರದ ಯೋಜನೆಗಳಿಂದ ಸಮುದಾಯ ವಂಚಿತವಾಗಿದ್ದು, ಈ ನಿಟ್ಟಿನಲ್ಲಿ ಅಲ್ಪಸಂಖ್ಯಾತರ ಇಲಾಖೆ ಹಾಗೂ ನಿಗಮಗಳಲ್ಲಿ ಅನುದಾನ ಹೆಚ್ಚಳ, ವಸತಿಶಾಲೆ, ಜಿಲ್ಲೆಗೊಂದು ಅಲ್ಪಸಂಖ್ಯಾತರ ಪಾಲಿಟೆಕ್ನಿಕ್ ಕಾಲೇಜು ಸ್ಥಾಪಿಸುವ ಕುರಿತು ಬೇಡಿಕೆಗಳನ್ನು ಸಲ್ಲಿಸಲಾಯಿತು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಚಾವಡಿಯ ಅಧ್ಯಕ್ಷ ಮುಜಾಫರ್ ಅಸಾದಿ, ಮಸ್ತಾನ್ ಬಿರಾದರ್, ಬಾನು ಮುಷ್ತಾಖ್, ರಹಮತ್ ತರೀಕೆರೆ ಮೊದಲಾದವರು ಉಪಸ್ಥಿತರಿದ್ದರು.

Resumption of minorities programs

ರಾಜ್ಯದಲ್ಲಿ ಕ್ರೈಸ್ತರು ಸೇರಿ ಎಲ್ಲ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳ ರಕ್ಷಣೆ: ಸಿಎಂ ಅಭಯ

ರಾಜ್ಯದಲ್ಲಿ ಕ್ರೈಸ್ತರು ಸೇರಿದಂತೆ ಎಲ್ಲಾ ಸಮುದಾಯಗಳ ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸಿ ಅಗತ್ಯ ರಕ್ಷಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಯ ನೀಡಿದರು. ಗೃಹಕಚೇರಿ ಕೃಷ್ಣಾದಲ್ಲಿ ಇಂಡಿಯನ್ ಕ್ರಿಶ್ಚಿಯನ್ ಯೂನಿಟಿ ಫೋರಂ ವತಿಯಿಂದ ಕ್ರೈಸ್ತ ಪಾದ್ರಿಗಳು ಮತ್ತು ಕ್ರೈಸ್ತ ಸಂಘಟನೆಗಳ ನಾಯಕರು ಇಂದು ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

ಮತಾಂತರ ನಿಷೇಧ ಕಾಯ್ದೆಗೆ ತರಲಾಗಿದ್ದ ಸಂವಿಧಾನ ವಿರೋಧಿ ತಿದ್ದುಪಡಿಯನ್ನು ರದ್ದುಮಾಡಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಮತಾಂತರ ನಿಷೇಧ ಕಾಯ್ದೆಯಡಿ ಪಾದ್ರಿಗಳ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದರು. ಹಾಗೂ ಮುಂದಿನ ಆಯವ್ಯಯದಲ್ಲಿ ಹೆಚ್ಚಿನ ಅನುದಾನವನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು, ನಸೀರ್ ಅಹ್ಮದ್, ಹಾಗೂ ಕ್ರೈಸ್ತರ 14 ಪಂಗಡಗಳ ಪ್ರತಿನಿಧಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

English summary

Chief Minister Siddaramaiah assured that the programs designed for minorities will be resumed during our previous government.

Story first published: Friday, June 30, 2023, 18:18 [IST]

Source link