Udupi
lekhaka-Kishan Kumar
ಉಡುಪಿ, ಜುಲೈ 27: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ಉಡುಪಿಯ ನೇತ್ರಾ ಜ್ಯೋತಿ ಪ್ಯಾರಾ ಮೆಡಿಕಲ್ ಕಾಲೇಜಿನ ಮೊಬೈಲ್ ವಿಡಿಯೋ ಪ್ರಕರಣ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿ ಕಾಲೇಜಿನಲ್ಲಿ ಸತತ ಐದು ಗಂಟೆಗಳ ಸುಧೀರ್ಘ ಸಭೆ ನಡೆಸಿದ್ದಾರೆ.
#WATCH | Udupi Video Incident: NCW (National Commission for Women) member Khushbu Sundar says, “There are rumours that there were hidden cameras in toilets. There is no truth in it. False videos are going around. It is an institution so there can’t be any hidden cameras. We are… pic.twitter.com/zhDDSevgIX
— ANI (@ANI) July 27, 2023
ಸತತ 5 ಗಂಟೆಗಳ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಖುಷ್ಬು ಸುಂದರ್ ಶೌಚಾಲಯದಲ್ಲಿ ಯಾವುದೇ ಹಿಡನ್ ಕ್ಯಾಮೆರಾ ಇರಲಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
ಈ ಬಗ್ಗೆ ವಿವರವಾಗಿ ಮಾತನಾಡಿದ ಅವರು, ಈಗಷ್ಟೇ ನಾನು ತನಿಖೆ ಆರಂಭ ಮಾಡಿದ್ದೇನೆ. ಯಾವುದೇ ಮಾಹಿತಿಗಳನ್ನು ಹೊರಗೆ ಹೇಳಲು ಸಾಧ್ಯವಿಲ್ಲ. ಒಳಗಡೆ ಏನು ಚರ್ಚೆ ಆಯ್ತು ಎಂದು ಬಹಿರಂಗಪಡಿಸಲು ಸಾಧ್ಯವಿಲ್ಲ. ಈಗಲೇ ಯಾವುದೇ ಅಂತಿಮ ನಿರ್ಧಾರಕ್ಕೆ ಬರಲು ಸಾಧ್ಯವಿಲ್ಲ. ಈಗಷ್ಟೇ ತನಿಖೆ ಆರಂಭಿಸಿದ್ದೇವೆ, ಈ ವಿಚಾರದಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಬೇಡಿ. ಸಾಕ್ಷಿ ಸಿಕ್ಕಿದೆಯಾ ಎನ್ನುವ ಬಗ್ಗೆ ಹೇಳಲು ಸಾಧ್ಯವಿಲ್ಲ. ಪೊಲೀಸರ ಹೇಳಿಕೆ ಹೊರತಾಗಿ ಸದ್ಯ ಜನರು ಬೇರೆ ಯಾವುದೇ ಊಹಾಪೋಹಗಳಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದ್ದಾರೆ.
ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಕ್ಕೆ ನಮಗೆ ಇನ್ನೂ ಸ್ವಲ್ಪ ಸಮಯ ಬೇಕು. ಎಲ್ಲರೂ ಜವಾಬ್ದಾರಿಯುತ ನಾಗರಿಕರಾಗಿ ವರ್ತಿಸಬೇಕೆಂದು ಪ್ರಾಮಾಣಿಕವಾಗಿ ಕೋರುತ್ತೇನೆ. ಯಾವುದೇ ರೂಮರ್ಗಳಿಗೆ, ವಾಟ್ಸಪ್ ಮೆಸೇಜ್ಗಳಿಗೆ ಗಮನ ಕೊಡಬೇಡಿ. ನಾವೇ ಸರಿಯಾದ ಮಾಹಿತಿಯನ್ನು ನೀಡುತ್ತೇವೆ ಎಂದರು.
ಸಂಬಂಧಪಟ್ಟ ಫೋನ್ಗಳು ವಿಧಿ ವಿಜ್ಞಾನ ಪ್ರಯೋಗಕ್ಕೆ ಕಳುಹಿಸಲಾಗಿದೆ. ಇದಕ್ಕೆ ಹೊರತಾಗಿ ಯಾವುದೇ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ. ನಮಗೆ ನಮ್ಮ ಕೆಲಸ ಮಾಡಲು ಬಿಡಿ. ನಾವು ಯಾರನ್ನು ಮಾತನಾಡಿಸುತ್ತೇವೆ ಎಲ್ಲಿಗೆ ಹೋಗುತ್ತೇವೆ ಎಂದು ಹಿಂಬಾಲಿಸಬೇಡಿ. ರಾಷ್ಟ್ರೀಯ ಮಹಿಳಾ ಆಯೋಗದ ಪರವಾಗಿ ನಾನು ಸ್ಥಳದಲ್ಲಿ ಇದ್ದೇನೆ. ನಮಗೆ ನಮ್ಮ ಕೆಲಸ ಮಾಡಲು ಬಿಡಿ. ಸದ್ಯ ನಿಮಗೆ ಯಾವುದೇ ಮಾಹಿತಿ ನೀಡಲು ಸಾಧ್ಯವಿಲ್ಲ. ಮಹಿಳಾ ಆಯೋಗಕ್ಕೆ ದೂರು ಬಂದ ಕಾರಣ ನಾನು ಇಲ್ಲಿ ಇದ್ದೇನೆ ಎಂದು ಖುಷ್ಬು ಹೇಳಿದ್ದಾರೆ.
ಆರೋಪಗಳು ಅನೇಕ ಇರಬಹುದು, ಅದರ ಆಧಾರದಲ್ಲಿ ತೀರ್ಮಾನಕ್ಕೆ ಬರಲು ಸಾಧ್ಯವಿಲ್ಲ. ನಾನು ಯಾವುದೇ ಬ್ರೇಕಿಂಗ್ ನ್ಯೂಸ್ ಕೊಡಲು ಇಲ್ಲಿ ಇಲ್ಲ. ಇದು ವಿದ್ಯಾರ್ಥಿನಿಯರಿಗೆ ಸಂಬಂಧಿಸಿದ ವಿಚಾರ. ಇದು ಮಹಿಳೆಯರಿಗೆ ಸಂಬಂಧಿಸಿದ ವಿಚಾರ, ಕಾಯಬೇಕು. ಇದು ಎರಡು ನಿಮಿಷದ ನೂಡಲ್ಸ್ ಥರ ಅಲ್ಲ. ಟಾಯ್ಲೆಟ್ನಲ್ಲಿ ಹಿಡನ್ ಕ್ಯಾಮೆರಾ ಇರಿಸಲಾಗಿದೆ ಎನ್ನುವ ರೂಮರ್ ನಂಬಬೇಡಿ. ಹರಿದಾಡುತ್ತಿರುವ ಸುಳ್ಳು ವಿಡಿಯೋಗಳನ್ನು ನಂಬಬೇಡಿ. ಇದೊಂದು ಶೈಕ್ಷಣಿಕ ಕೇಂದ್ರ ಎಲ್ಲಿ ಹಿಡನ್ ಕ್ಯಾಮೆರಾ ಇರಲು ಸಾಧ್ಯವಿಲ್ಲ. ಪೊಲೀಸರ ಜೊತೆಗೆ ನಾವು ಮಾಹಿತಿ ಸಂಗ್ರಹ ಮಾಡುತ್ತಿದ್ದೇವೆ. ಪೊಲೀಸರ ಸಹಕಾರದೊಂದಿಗೆ ನಮ್ಮ ತನಿಖೆ ಮುಂದುವರಿಯಲಿದೆ ಎಂದು ಖುಷ್ಬು ಸಭೆಯ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
English summary
There is no hidden camera in Udupi Netra Jyothi college washroom says National Commission for Women Member Kushboo Sundar. Know more.
Story first published: Thursday, July 27, 2023, 16:49 [IST]