ಉತ್ತರ ಪ್ರದೇಶದಲ್ಲಿ ಅಕ್ರಮವಾಗಿ ಅಂಬೇಡ್ಕರ್ ವಿಗ್ರಹ ಸ್ಥಾಪನೆ: ತೆರವಿಗೆ ಬಂದ ಪೊಲೀಸರ ಮೇಲೆ ಕಲ್ಲುತೂರಾಟ, 11 ಮಂದಿ ಬಂಧನ | Clashes erupt in Uttar pradesh over removal of BR Ambedkar statue, 11 arrested

India

oi-Mamatha M

|

Google Oneindia Kannada News

ಲಕ್ನೋ, ಜೂನ್. 25: ಶನಿವಾರ ರಾತ್ರಿ ಅಕ್ರಮವಾಗಿ ಪ್ರತಿಷ್ಠಾಪಿಸಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯನ್ನು ತೆಗೆದುಹಾಕಲು ಯತ್ನಿಸಿದಾಗ ಜನರ ಗುಂಪೊಂದು ಪೊಲೀಸ್ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಉತ್ತರ ಪ್ರದೇಶದ ಭದೋಹಿಯಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದೋಹಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಹಿಂಸಾತ್ಮಕ ಗುಂಪನ್ನು ಚದುರಿಸಲು ಪೊಲೀಸರು ಚಿ್ಕಕದಾಗಿ ಲಾಠಿ ಚಾರ್ಜ್ ಮಾಡಿದ್ದಾರೆ ಎಂದು ಸರ್ಕಲ್ ಆಫೀಸರ್ (ಸಿಒ) ಭುವನೇಶ್ವರ್ ಕುಮಾರ್ ಪಾಂಡೆ ಹೇಳಿದ್ದಾರೆ. ಮೂವರು ಮಹಿಳೆಯರು ಸೇರಿದಂತೆ ಒಟ್ಟು 11 ಜನರನ್ನು ಸ್ಥಳದಲ್ಲೇ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Clashes erupt in Uttar pradesh over removal of BR Ambedkar statue, 11 arrested

ಈ ಸಂಬಂಧ ಕಲಂ 186 (ಸಾರ್ವಜನಿಕ ಕಾರ್ಯಗಳಿಗೆ ಅಡ್ಡಿಪಡಿಸುವುದು), 353 (ಆಕ್ರಮಣ ಅಥವಾ ಕ್ರಿಮಿನಲ್ ಬಲ) IPC ಯ 332 (ಸಾರ್ವಜನಿಕ ಸೇವಕನನ್ನು ತನ್ನ ಕರ್ತವ್ಯದಿಂದ ಹಿಮ್ಮೆಟ್ಟಿಸಲು ಸ್ವಯಂಪ್ರೇರಣೆಯಿಂದ ನೋವುಂಟುಮಾಡುವುದು), 336 (ಇತರರ ಜೀವ ಅಥವಾ ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಕ್ರಿಯೆ) ಮತ್ತು 504 (ಶಾಂತಿ ಭಂಗವನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ 21 ಹೆಸರಿಸಲಾದ ವ್ಯಕ್ತಿಗಳು ಸೇರಿದಂತೆ 51 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ (ಎಸ್‌ಎಚ್‌ಒ) ಅಜಯ್ ಸೇಠ್ ತಿಳಿಸಿದ್ದಾರೆ.

ಬಸ್‌ ಹತ್ತುವಾಗ ಹುಡುಗಿ ಪಕ್ಕ ನಿಂತಿದ್ದ ವ್ಯಕ್ತಿಗೆ ಮನಬಂದಂತೆ ಥಳಿಸಿದ ಯುವಕರು: ದೂರು ದಾಖಲುಬಸ್‌ ಹತ್ತುವಾಗ ಹುಡುಗಿ ಪಕ್ಕ ನಿಂತಿದ್ದ ವ್ಯಕ್ತಿಗೆ ಮನಬಂದಂತೆ ಥಳಿಸಿದ ಯುವಕರು: ದೂರು ದಾಖಲು

ಭದೋಹಿ ನಗರದ ಕೊತ್ವಾಲಿ ಪ್ರದೇಶದ ಮುಶಿಲಾತ್‌ಪುರ ಗ್ರಾಮದಲ್ಲಿ ಕೊಳಕ್ಕಾಗಿ ನಿಗದಿಪಡಿಸಿದ ಜಮೀನಿನಲ್ಲಿ ಶುಕ್ರವಾರ ರಾತ್ರಿ ಅಂಬೇಡ್ಕರ್ ಪ್ರತಿಮೆಯನ್ನು ವೇದಿಕೆಯಲ್ಲಿ ಸ್ಥಾಪಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ಭುವನೇಶ್ವರ್ ಕುಮಾರ್ ಪಾಂಡೆ ಹೇಳಿದ್ದಾರೆ. ದೂರನ್ನು ಸ್ವೀಕರಿಸಿದ ಸಿಒ, ಹಿರಿಯ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪ್ರತಿಮೆಯನ್ನು ತೆಗೆಯುವಂತೆ ಸ್ಥಳೀಯರನ್ನು ಕೇಳಿದ್ದಾರೆ. ಆದರೆ ಅವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು ಪ್ರತಿಮೆಯನ್ನು ತೆಗೆಯಲು ಪ್ರಯತ್ನಿಸಿದಾಗ, ಗುಂಪು ಕಲ್ಲು ತೂರಾಟದಲ್ಲಿ ತೊಡಗಿತು, ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಪ್ರದೇಶದಲ್ಲಿ ಉದ್ವಿಗ್ನತೆ ಉಂಟಾಗಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹೆಚ್ಚುವರಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿದೆ. ಘಟನೆಯಲ್ಲಿ ಭಾಗಿಯಾಗಿರುವ ಇತರರನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ. ಇದಲ್ಲದೆ ಪೊಲೀಸ್ ಅಧಿಕಾರಿಗಳು ಪ್ರತಿಮೆಯನ್ನು ಪೊಲೀಸ್ ಠಾಣೆಯಲ್ಲಿ ಇರಿಸಿದ್ದಾರೆ.

English summary

A group of people pelted stones at police personnel in Uttar pradesh’s Bhadohi over removal of illegal B R Ambedkar idol, 11 arrested. know more.

Story first published: Sunday, June 25, 2023, 12:41 [IST]

Source link