ತಜಿಂದರ್ ಪಾಲ್ಗೆ ಸತತ 2ನೇ ಚಿನ್ನ
ತಜಿಂದರ್ ಪಾಲ್ ಸಿಂಗ್ ತೂರ್ ಸತತ 2ನೇ ಚಿನ್ನ ಗೆಲ್ಲುವ ಮೂಲಕ ತಮ್ಮ ಪ್ರಶಸ್ತಿಯನ್ನು ಉಳಿಸಿಕೊಂಡಿದ್ದಾರೆ. ಅಲ್ಲದೆ, ಭಾರತದ ಪದಕಗಳ ಸಂಖ್ಯೆಯನ್ನೂ ಏರಿಸಿದರು. ಪುರುಷರ ಫೈನಲ್ನಲ್ಲಿ ತೂರ್, ಸೌದಿ ಅರೇಬಿಯಾದ ಪ್ರತಿಸ್ಪರ್ಧಿಯನ್ನು ಮಣಿಸಿದರು. 2018ರಲ್ಲಿ ಜಕಾರ್ತಾದಲ್ಲಿ ನಡೆದಿದ್ದ ಏಷ್ಯನ್ ಗೇಮ್ಸ್ನಲ್ಲಿ ಚಿನ್ನ ಗೆದ್ದಿದ್ದ ತಜಿಂದರ್, ಮೊದಲ ಎರಡು ಪ್ರಯತ್ನಗಳಲ್ಲಿ ಫೌಲ್ ಮಾಡಿದ್ದರು. ಇದರ ಹೊರತಾಗಿಯೂ ಅತ್ಯುತ್ತಮ ಪ್ರದರ್ಶನ ನೀಡಿದ ಅವರು, 20.36 ಮೀಟರ್ ದೂರ ಎಸೆದು ಚಿನ್ನದ ಪದಕ ತಮ್ಮದಾಗಿಸಿಕೊಂಡರು. ಮೊಹಮ್ಮದ್ ದಾವುಡಾ ಟೊಲೊ ಎರಡನೇ ಸ್ಥಾನಕ್ಕೆ ತೃಪ್ತಿಪಟ್ಟರು.