ಐಪಿಎಲ್ 2025ರ ಆವೃತ್ತಿಯಲ್ಲಿ ಏಪ್ರಿಲ್ 8ರ ಮಂಗಳವಾರ ಅಪರೂಪವೆಂಬಂತೆ ಎರಡು ಪಂದ್ಯಗಳು ನಡೆಯುತ್ತಿವೆ. ಟೂರ್ನಿಯ 21ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಮತ್ತು ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ತಂಡಗಳು (Kolkata Knight Riders vs Lucknow Super Giants) ಮುಖಾಮುಖಿಯಾಗಲಿವೆ. ದಿನದ ಎರಡನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ (Punjab Kings vs Chennai Super Kings) ತಂಡಗಳು ಎದುರಾಗಲಿವೆ. ಪಂದ್ಯಕ್ಕೆ ಸಂಬಂಧಿಸಿದ ಪ್ರಮುಖ 10 ಅಂಶಗಳನ್ನು ನೋಡೋಣ.