ಲಖನೌ ಸೂಪರ್ ಜೈಂಟ್ಸ್ ಫ್ರಾಂಚೈಸಿಯ ಮೆಂಟರ್ ಗೌತಮ್ ಗಂಭೀರ್, ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಹಾಗೂ ಹರ್ಭಜನ್ ಸಿಂಗ್ ಅವರ ಹೆಸರುಗಳು ಈ ಸ್ಥಾನಕ್ಕೆ ಕೇಳಿಬರುತ್ತಿವೆ. ಈ ನಡುವೆ ಸೆಹ್ವಾಗ್ ಅವರನ್ನು ಬಿಸಿಸಿಐ ಸಂಪರ್ಕಿಸಿದೆ ಎಂಬ ವದಂತಿಗಳಿವೆ. ಈ ಎಲ್ಲಾ ಊಹಾಪೋಹಗಳ ಬಗ್ಗೆ ಟೈಮ್ಸ್ ಆಫ್ ಇಂಡಿಯಾದೊಂದಿಗೆ ಮಾತನಾಡಿದ ಸೆಹ್ವಾಗ್, “ಇಲ್ಲ” ಎಂದು ಉತ್ತರಿಸಿದ್ದಾರೆ.