ಜೂನ್ 2ರ ಶುಕ್ರವಾರ ಒಡಿಶಾದ ಬಾಲಾಸೋರ್ನಲ್ಲಿ ಶಾಲಿಮಾರ್-ಚೆನ್ನೈ ಸೆಂಟ್ರಲ್ ಕೋರಮಂಡಲ್ ಎಕ್ಸ್‌ಪ್ರೆಸ್, ಗೂಡ್ಸ್ ರೈಲು ಮತ್ತು ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ನಡುವೆ ಅಪಘಾತ ಸಂಭವಿಸಿತ್ತು. ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ಡಿಕ್ಕಿ ಹೊಡೆದಿತ್ತು. ಭೀಕರ ರೈಲು ಅಪಘಾತದಲ್ಲಿ 288 ಜನರು ಬಲಿಯಾಗಿದ್ದು, 1000ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.