Jobs
oi-Gururaj S
ಬೆಂಗಳೂರು, ಜೂನ್ 25; ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇಲ್ಲಿನ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 22/7/2023ರ ಸಂಜೆ 5.30.
ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ, ಬೆಂಗಳೂರು ಇಲ್ಲಿ ಖಾಲಿ ಇರುವ ಮಿಕ್ಕುಳಿದ ವೃಂದ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ (ಸ್ಥಳೀಯ) ವೃಂದದ ವಿವಿಧ ಹುದ್ದೆಗಳ ನೇರ ನೇಮಕಾತಿ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾಗಬೇಕು. 23/6/2023 ರಿಂದ 22/7/2023ರ ತನಕ ಅರ್ಜಿ ಸಲ್ಲಿಸಬೇಕು. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 25/72023 ಕೊನೆಯ ದಿನವಾಗಿದೆ.
ಹುದ್ದೆ, ಶೈಕ್ಷಣಿಕ ವಿದ್ಯಾರ್ಹತೆ ವಿವರ; ಕಲ್ಯಾಣ ಅಧಿಕಾರಿ (ಗ್ರೂಪ್ ಸಿ) ಒಟ್ಟು ಹುದ್ದೆಗಳು 12. ವೇತನ ಶ್ರೇಣಿ 37,900-70,850. ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು.
ಕ್ಷೇತ್ರ ನಿರೀಕ್ಷಕರು (ಗ್ರೂಪ್ ಸಿ) ಒಟ್ಟು ಹುದ್ದೆಗಳು 60. ವೇತನ ಶ್ರೇಣಿ 33,540-62,600 ರೂ.ಗಳು. ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಎಂದು ವಿದ್ಯಾರ್ಹತೆ ನಿಗದಿ ಮಾಡಲಾಗಿದೆ.
ಪ್ರಥಮ ದರ್ಜೆ ಸಹಾಯಕ ಹುದ್ದೆ (ಗ್ರೂಪ್ ಸಿ) ಒಟ್ಟು ಹುದ್ದೆಗಳು 12. ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು. ವೇತನ ಶ್ರೇಣಿ 27,650-52,650 ರೂ.ಗಳು.
ಆಪ್ತ ಸಹಾಯಕರು (ಗ್ರೂಪ್ ಸಿ) ಒಟ್ಟು ಹುದ್ದೆಗಳು 2. ಅಭ್ಯರ್ಥಿಯು ಭಾರತದಲ್ಲಿ ಕಾನೂನು ರೀತ್ಯ ಸ್ಥಾಪಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪದವಿ ಪರೀಕ್ಷೆಯಲ್ಲಿ ತೇರ್ಗಡೆಯಾಗಿರಬೇಕು ಜೊತೆಗೆ ಡಿಪ್ಲೊಮ ಇನ್ ಕಂಪ್ಯೂಟರ್ ಅಪ್ಲಿಕೇಶನ್ಸ್ ಹೊಂದಿರಬೇಕು ಮತ್ತು ಟೈಪಿಂಗ್ ಜ್ಞಾನ ಇರಬೇಕು. ವೇತನ ಶ್ರೇಣಿ 27,650-52,650. ಒಟ್ಟು ಹುದ್ದೆಗಳು 2.
ದ್ವಿತೀಯ ದರ್ಜೆ ಸಹಾಯಕರು (ಗ್ರೂಪ್ ಸಿ) 100 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಯು ಪಿಯುಸಿ ಅಥವಾ ತತ್ಸಮಾನ ಅರ್ಹತೆಯನ್ನು ಪಡೆದಿರಬೇಕು. ವೇತನ ಶ್ರೇಣಿ 21,400-42,000 ರೂ.ಗಳು.
ವಯೋಮಿತಿ ವಿವರ; ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಟ 18 ವರ್ಷಗಳು ತುಂಬಿರತಕ್ಕದ್ದು ಹಾಗೂ ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35 ವರ್ಷ, ಪ್ರವರ್ಗ 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳಿಗೆ 38 ವರ್ಷಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷಗಳು.
ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ಮಾಡುವ ಮೊದಲು ಎಲ್ಲಾ ಸೂಚನೆ, ನೇಮಕಾತಿ ಆದೇಶವನ್ನು ಸ್ಪಷ್ಟವಾಗಿ ಓದಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ. ತಪ್ಪು, ಸುಳ್ಳು ಮಾಹಿತಿ ನೀಡಿದರೆ ಅಭ್ಯರ್ಥಿ ಅರ್ಜಿ ರದ್ದುಗೊಳಿಸಲಾಗುತ್ತದೆ ಮತ್ತು ಅಂತಹವರ ವಿರುದ್ಧ ಸರ್ಕಾರ/ ಪ್ರಾಧಿಕಾರ ಕಾನೂನಿನ ಅನ್ವಯ ಕ್ರಮ ಕೈಗೊಳ್ಳಲಾಗಿದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು/ ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1000 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಅಂಗವಿಕಲ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 250 ರೂ. ಶುಲ್ಕವನ್ನು ಪಾವತಿ ಮಾಡಬೇಕಿದೆ. ಅರ್ಜಿ ಶುಲ್ಕವನ್ನು ಕಂಪ್ಯೂಟರೈಸ್ಡ್ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿ ಮಾಡಬೇಕು. ಒಮ್ಮೆ ಪಾವತಿ ಮಾಡಿದ ಶುಲ್ಕವನ್ನು ವಾಪಸ್ ನೀಡಲಾಗುವುದಿಲ್ಲ.
ಆಸಕ್ತ ಮತ್ತು ಅರ್ಹರು ಪ್ರಾಧಿಕಾರದ ವೆಬ್‌ಸೈಟ್ http://kea.kar.nic.in ನಲ್ಲಿ ತೋರಿಸುವ ಲಿಂಕ್ ಅನ್ನು ಆಯ್ಕೆ ಮಾಡಿ ಆನ್‌ಲೈನ್ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು. ಅಭ್ಯರ್ಥಿಗಳು ಒಂದಕ್ಕಿಂತ ಹೆಚ್ಚಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಛಿಸಿದ್ದಲ್ಲಿ, ಪ್ರತ್ಯೇಕ ಅರ್ಜಿ ಸಲ್ಲಿಸಬೇಕು ಹಾಗೂ ಅಂತಹ ಅಭ್ಯರ್ಥಿಗಳು ಪ್ರತಿ ಹುದ್ದೆಗೆ ಪ್ರತ್ಯೇಕವಾಗಿ ಶುಲ್ಕವನ್ನು ಪಾವತಿಸಬೇಕು.
English summary
Karnataka Building and Other Construction Workers’ Welfare Board (KBOCWWB) invited applications for the various post. Candidates can apply til 22/7/2023.
Story first published: Sunday, June 25, 2023, 11:59 [IST]