ಕಾಂಗ್ರೆಸ್ ವೈಫಲ್ಯ ಮುಚ್ಚಿಕೊಳ್ಳಲು ರಾಜಕೀಯ ಪ್ರೇರಿತ ಪ್ರತಿಭಟನೆ ನಡೆಸುತ್ತಿದೆ, ಈಗೆಲ್ಲಿದ್ದೀರಿ ಕೆಂಪಣ್ಣ: ಬೊಮ್ಮಾಯಿ ಗರಂ | Congress Is Conducting Politically Motivated Protests To Cover Up Their Failure, Basavaraj Bommai.

Bengaluru

oi-Shankrappa Parangi

|

Google Oneindia Kannada News

ಬೆಂಗಳೂರು, ಜೂನ್ 19: ಕಾಂಗ್ರೆಸ್ ಸರ್ಕಾರ ಅಕ್ಕಿ ನೀಡಲು ಪೂರ್ವ ಸಿದ್ದತೆ ಮಾಡಿಕೊಳ್ಳದ ಕರ್ನಾಟಕ ಕಾಂಗ್ರೆಸ್ ಸರ್ಕಾರ ಇದೀಗ ತಮ್ಮ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದರು.

ಸೋಮವಾರ ಬೆಂಗಳೂರಿನ ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ‌ ಬಂದ ದಿನದಿಂದ ಗೊಂದಲದ ಗೂಡಾಗಿದೆ. ಉಚಿತ ಬಸ್ ಪ್ರಯಾಣ ಗ್ಯಾರಂಟಿ ಯೋಜನೆಗಳು ಎಲ್ಲವು ಅದ್ವಾನ ಆಗಿದೆ. ರಾಜ್ಯದಲ್ಲಿ ಸರಿಯಾಗಿ‌ ಬಸ್ ಗಳ ವ್ಯವಸ್ಥೆ ಮಾಡದೇ ಫ್ರೀ ಬಸ್ ಯೋಜನೆ ಅಂದರೆ ಹೇಗೆ? ಎಂದು ಅವರು ಸರ್ಕಾರವನ್ನು ಪ್ರಶ್ನಿಸಿದರು.

Congress Is Conducting Politically Motivated Protests To Cover Up Their Failure, Basavaraj Bommai.

ಸರಿಯಾದ ಬಸ್ ಸೇವೆ ಒದಗಿಸದೇ ಇರುವುದರಿಂದ ಸಾರ್ವಜನಿಕರು ಬಾಯಿಗೆ ಬಂದಹಾಗೆ ಬೈಯುತ್ತಿದ್ದಾರೆ. ಕೆಲಸ ಮಾಡಲು ಆಗುತ್ತಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ತೋಡಿಕೊಳ್ಳುತ್ತಿದ್ದಾರೆ. ಯೋಜನೆ ಬಳಿಕ ಪರಸ್ಥಿತಿ ಹೀಗಿದೆ.

Shakti Scheme Effect: ಬೆಂಗಳೂರು-ಮೈಸೂರು ಪ್ರೀಮಿಯಂ ಬಸ್‌ಗಳಿಗೆ ಪ್ರಯಾಣಿಕರ ನಷ್ಟ ಎಷ್ಟು ಗೊತ್ತೇ?Shakti Scheme Effect: ಬೆಂಗಳೂರು-ಮೈಸೂರು ಪ್ರೀಮಿಯಂ ಬಸ್‌ಗಳಿಗೆ ಪ್ರಯಾಣಿಕರ ನಷ್ಟ ಎಷ್ಟು ಗೊತ್ತೇ?

ಅಕ್ಕಿ FCI ನಿಂದಲೇ ತರಬೇಕು ಎಂದೇನಿಲ್ಲ

ಇನ್ನೂ ಕಾಂಗ್ರೆಸ್ ರಾಜ್ಯದ ಅರ್ಹರಿಗೆ ತಲಾ 10 ಕೆ.ಜಿ. ಅಕ್ಕಿ ನೀಡುವ ವಿಚಾರದಲ್ಲೂ ಮುಂಚೆಯೇ ವ್ಯವಸ್ಥೆ ಮಾಡಿಕೊಳ್ಳದೇ ಈಗ ಕೇಂದ್ರದ ಮೇಲೆ‌ ಗೂಬೆ ಕೂರಿಸುತ್ತಿದ್ದಾರೆ. ಸರ್ಕಾರ‌ ನಡೆಸುವವರು ಕೊಟ್ಟ ಮಾತಿನಂತೆ‌ ನಡೆಸುಕೊಳ್ಳಲು ಆಗುತ್ತಿಲ್ಲ. ಅಕ್ಕಿಯನ್ನು ಕೇವಲ ‘ಭಾರತದ ಆಹಾರ ನಿಗಮ’ (FCI)ನಿಂದಲೇ ತರಬೇಕು ಎಂದೇನಿಲ್ಲ, ಅದರ ಹೊರತು ಇನ್ನಿತರ ಬೇರೆ ಏಜೆನ್ಸಿಗಳು ಇವೆ ಎಂದರು.

ಕಾಂಗ್ರೆಸ್ ಸರ್ಕಾರ ಯಾವುದನ್ನು ಪೂರ್ವ ಸಿದ್ಧತೆ ಮಾಡಿಕೊಳದೇ ಪ್ರತಿಭಟನೆ ‌ಮಾಡುತ್ತಿದಾರೆ. ಇವರಿಗೆ ಕೊಟ್ಟ ಮಾತು ಉಳಿಸಿಕೊಳ್ಳುವ ಯೋಗ್ಯತೆ ಇಲ್ಲ ಎಂದು ಜನರು ಉಗಿಯುತ್ತಾರೆ ಎಂದು ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Congress Is Conducting Politically Motivated Protests To Cover Up Their Failure, Basavaraj Bommai.

ಹಲವಾರು ಸಚಿವರು ಹಿಂದಿನ ಅವಧಿಯ‌ ಕಾಮಗಾರಿ, ಮನೆ ನಿರ್ಮಾಣ ಎಲ್ಲವನ್ನೂ‌ ನಿಲ್ಲಿಸಿದ್ದಾರೆ. ಸರ್ಕಾರ ಬಂದು ತಿಂಗಳು ಕಳೆದರೂ ಸಚಿವರು ತಮ್ಮ ಇಲಾಖೆಗಳ ಮಾತನಾಡುತ್ತಿಲ್ಲ. ಇನ್ನು ಮಳೆಗಾಲ ಆರಂಭವಾಗುತ್ತದೆ. ಯಾವುದೇ ಕಾಮಗಾರಿ ನಡೆಯುವುದಿಲ್ಲ. ಇಡೀ‌ ಒಂದು ವರ್ಷದ ಕಾರ್ಯಕ್ರಮಗಳನ್ನು ಅಲ್ಲೋಲ‌-ಕಲ್ಲೋಲ ಮಾಡುತ್ತಿದ್ದಾರೆ ಎಂದು ಅವರು ತಿಳಿಸಿದರು.

ಎಲ್ಲಿದ್ದೀರಿ ಕೆಂಪಣ್ಣ?: ಮಾಜಿ ಸಿಎಂ ಪ್ರಶ್ನೆ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ಜೊತೆ ಸೇರಿಕೊಂಡು ಆರೋಪ ಮಾಡುತ್ತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಈಗೆಲ್ಲಿದ್ದಾರೆ. ಸಚಿವರುಗಳು ರೇಟ್ ಫಿಕ್ಸ್ ಮಾಡಿಕೊಳ್ಳುತ್ತಿದ್ದಾರೆ. ನಮ್ಮ ಸರ್ಕಾರದ ಮೇಲೆ ಆರೋಪ ಮಾಡಿದವರು. ಈಗ ಎಲ್ಲಿದ್ದಾರೆ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಸರ್ಕಾರ 5 ವರ್ಷ ಇರುವುದು ಅನುಮಾನ

ಸಚಿವ‌ ಸಂಪುಟದ ಸದಸ್ಯರಿಗೆ ‌ಈ ಸರ್ಕಾರ 5 ವರ್ಷ ಇರುವುದು ಅನುಮಾನ ಇದೆ. ಸಚಿವರುಗಳೇ ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಇರುತ್ತಾರೆ ಎಂದು ಅನುಮಾನದಿಂದ ಮಾತನಾಡುತ್ತಿದ್ದಾರೆ. ಹಲ್ಲು ನೋವು ಬಂದು ಅಲುಗಾಡುತ್ತಿದ್ದರೆ, ಅದನ್ನು ಮತ್ತಷ್ಟು ಅಲುಗಾಡಿಸಿ ಸಡಿಲು ಮಾಡಿ ಹಲ್ಲು ಕಿತ್ತು ಹೋಗುವಂತೆ ಆಂತರಿಕವಾಗಿ ಸರ್ಕಾರದ ಒಳಗಿರುವ ಬೇಗುದಿಯಿಂದ ಅವರಿಗೆ ಈ ಸರ್ಕಾರ ಐದು ವರ್ಷ ಪೂರೈಸುವುದಿಲ್ಲ ಎನ್ನುವುದು ಖಾತ್ರಿಯಾದಂತಿದೆ ಎಂದು ಬೊಮ್ಮಾಯಿ ಭವಿಷ್ಯ ನುಡಿದರು.

English summary

Congress is conducting politically motivated protests to cover up its failure, Basavaraj bommai slams on State govt.

Story first published: Monday, June 19, 2023, 20:04 [IST]

Source link