ಕಾರ್ಕಳ: ಟಿವಿ ಚಾನೆಲ್ ಬದಲಿಸುವ ವಿಚಾರಕ್ಕೆ ಜಗಳ; ಗಂಡ, ಹೆಂಡತಿ ಸಾವು, ಅನಾಥರಾದ ಮಕ್ಕಳು | Clash for changing TV channel; husband and wife Death in Nalluru village

Mangaluru

oi-Kishan Kumar

By ಪ್ರತಿನಿಧಿ ಪ್ರತಿನಿಧಿ

|

Google Oneindia Kannada News

ಮಂಗಳೂರು, ಜೂನ್‌, 25: ರಿಮೋಟ್‌ನಲ್ಲಿ ಚಾನೆಲ್ ಬದಲಿಸುವ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಆರಂಭವಾದ ಜಗಳ ಕೊನೆಗೆ ಸಾವಿನಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಈ ಘಟನೆ ನಡೆದಿದ್ದು ಎಲ್ಲಿ ಅಂತೀರಾ ಇಲ್ಲಿದೆ ನೋಡಿ ವಿವರ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದಲ್ಲಿ ರಿಮೋಟ್‌ನಲ್ಲಿ ಚಾನೆಲ್ ಬದಲಿಸುವ ವಿಚಾರಕ್ಕೆ ಗಂಡ-ಹೆಂಡತಿ ಪರಸ್ಪರ ಹೊಡೆದಾಡಿಕೊಂಡು ಸಾವನ್ನಪ್ಪಿದ್ದಾರೆ. ಇನ್ನು ದಂಪತಿಗಳ ದುರಂತ ಸಾವಿನಿಂದ ಇಬ್ಬರು ಪುಟ್ಟ ಮಕ್ಕಳು ಅನಾಥರಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಮೂಲದ ದಂಪತಿ ಯಶೋಧ ಮತ್ತು ಇಮ್ಯಾನುಲ್ ತೋಟದ ಕೆಲಸಕ್ಕೆ ಬಂದು ಕಾರ್ಕಳದಲ್ಲಿ ನೆಲೆಸಿದ್ದರು. ಮಧ್ಯಾಹ್ನ ಊಟದ ಬಳಿಕ ದಂಪತಿಗಳು ಇಬ್ಬರು ಮಕ್ಕಳೊಂದಿಗೆ ಟಿವಿ ನೋಡುತ್ತಾ ಮನೆಯಲ್ಲಿ ಕುಳಿತಿದ್ದರು.

Clash for changing TV channel; husband and wife Death in Nalluru village

ಈ ನಡುವೆ ಚಾನೆಲ್ ಚೇಂಜ್ ಮಾಡಲು ದಂಪತಿ ನಡುವೆ ಕಿರಿಕಿರಿ ನಡೆದಿದೆ. ಇನ್ನು ಜಗಳದಿಂದ ಮನನೊಂದು ಪತ್ನಿ ಮನೆ ಸಮೀಪದಲ್ಲಿದ್ದ ನೀರು ತುಂಬಿದ್ದ ಗುಂಡಿಗೆ ಹಾರಿದ್ದಾರೆ. ಇನ್ನು ಪತ್ನಿಯನ್ನು ರಕ್ಷಿಸಲು ಪತಿ ಕೂಡ ನೀರಿಗೆ ಧುಮುಕಿದ್ದಾನೆ. ಬಳಿಕ ಗುಂಡಿಯಿಂದ ಹೊರಬರಲಾರದೇ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಂಪತಿಗಳ ಮೃತದೇಹವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯ ಸುಮಿತ್ ನಲ್ಲೂರು ಮತ್ತು ಗೆಳೆಯರು ಮೇಲೆತ್ತಿದ್ದಾರೆ. ಸದ್ಯ ಈ ಪ್ರಕರಣ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

ಸೌಜನ್ಯ ಕೊಲೆ ಪ್ರಕರಣ, ತೀರ್ಪು ಪ್ರಕಟ

ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿದ್ದ ಉಜಿರೆ ಎಸ್‌ಡಿಎಂ ಕಾಲೇಜು ವಿದ್ಯಾರ್ಥಿನಿ ಸೌಜನ್ಯ ಆತ್ಯಾಚಾರ ಹಾಗೂ ಕೊಲೆ ಪ್ರಕರಣದ ತೀರ್ಪು ಇಂದು ಪ್ರಕಟವಾಗಿದೆ. ಪ್ರಕರಣ ಸಂಬಂಧ ಇತ್ತೀಚೆಗಷ್ಟೇ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದ್ದು, ಆರೋಪಿ ಸಂತೋಷ್ ರಾವ್‌ನನ್ನು ದೋಷ ಮುಕ್ತ ಎಂದು ಆದೇಶ ಹೊರಡಿಸಿತ್ತು.

Clash for changing TV channel; husband and wife Death in Nalluru village

ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಸಿ.ಬಿ ಪ್ರಕರಣದ ವಿಚಾರಣೆ ನಡೆಸಿದ್ದು, ಸಾಕ್ಷ್ಯಾಧಾರಗಳ ಕೊರತೆಯಿಂದ ಆರೋಪಿ ಸಂತೋಷ್ ರಾವ್‌ನನ್ನು ಬಿಡುಗಡೆ ಮಾಡಲಾಗಿತ್ತು

ಧರ್ಮಸ್ಥಳದ ಚಂದಪ್ಪ ಗೌಡ ಹಾಗೂ ಕುಸುಮಾವತಿ ದಂಪತಿಯ 17 ವರ್ಷದ ಎರಡನೇ ಪುತ್ರಿ ಸೌಜನ್ಯ ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಅಕ್ಟೋಬರ್ 9, 2012ರಂದು ಕಾಲೇಜು ಮುಗಿಸಿ ಮನೆಗೆ ತೆರಳುತ್ತಿದ್ದ ದಾರಿ ಮಧ್ಯದ ಕಾಡಿನಲ್ಲಿ ಸೌಜನ್ಯಾಳ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈಯಲಾಗಿತ್ತು.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ರಾಷ್ಟ್ರ ಮಟ್ಟದಲ್ಲಿ ಭಾರೀ ಸುದ್ದಿಯಾಗಿತ್ತು. ಆರೋಪಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ಸಾಲು ಸಾಲು ಹೋರಾಟಗಳು ನಡೆದಿದ್ದವು. ಈ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಕೊಲೆ ಪ್ರಕರಣ ಸಂಬಂಧ ಆರೋಪಿ ಸಂತೋಷ್ ರಾವ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಆರೋಪಿ ಮಾನಸಿಕ ಸ್ಥಿಮಿತ ಕಳೆದುಕೊಂಡು ಕೃತ್ಯ ನಡೆಸಿದ್ದ ಎನ್ನಲಾಗಿತ್ತು.

ಬಳಿಕ ಜಾಮೀನಿನ ಮೇಲೆ ಆರೋಪಿಯನ್ನು ಬಿಡುಗಡೆಗೊಳಿಸಲಾಗಿತ್ತು. ಹಲವು ಹೋರಾಟದ ಬಳಿಕ ಪ್ರಕರಣವನ್ನು ಸಿಬಿಐಗೆ ವಹಿಸಲಾಗಿತ್ತು. ಹನ್ನೊಂದು ವರ್ಷಗಳ ಬಳಿಕ ಸಿಬಿಐ ವಿಶೇಷ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಿದ್ದು, ಆರೋಪಿ ಸಂತೋಷ್ ರಾವ್ ದೋಷ ಮುಕ್ತ ಎಂದು ಆದೇಶ ಹೊರಡಿಸಿತ್ತು.

English summary

Clash for changing TV channel; husband and wife Death in Nalluru village of Karkala taluk,

Story first published: Sunday, June 25, 2023, 18:13 [IST]

Source link