India
oi-Reshma P
ನವದೆಹಲಿ, ಜೂನ್ 23: ಕಾಂಗ್ರೆಸ್ ನ ಗ್ಯಾರಂಟಿ ಘೋಷಣೆಗಳಲ್ಲಿ ಒಂದಾಗಿರುವ ಅನ್ನಭಾಗ್ಯ ಯೋಜನೆ ವಿಚಾರವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಧ್ಯೆ ಸಂಘರ್ಷ ಶುರುವಾಗಿದೆ. ನೀ ಕೊಡೆ, ನಾ ಬಿಡೆ ಎಂಬಂತೆ ಅಕ್ಕಿಗಾಗಿ ತಿಕ್ಕಾಟ ನಡೆಯುತ್ತಲೇ ಇದೆ. ಅಕ್ಕಿ ಖರೀದಿಗೆ ಸಿದ್ದರಾಮಯ್ಯ ಸರ್ಕಾರ ಸರ್ಕಸ್ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ದ ವಾಕ್ಸಮರ ನಡೆಸುತ್ತಿದ್ದಾರೆ.
ಹೌದು, ಅಕ್ಕಿ ವಿತರಣೆ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ದಿನಗಳ ಹಿಂದೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಇಂದು (ಶುಕ್ರವಾರ) ಕರ್ನಾಟಕ ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಅವರು ದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯೆಲ್ ಅವರನ್ನು ಭೇಟಿ ಮಾಡಿದ್ದು, ಅಕ್ಕಿ ಪೂರೈಕೆ ಸಂಬಂಧ ಮಾತುಕತೆ ನಡೆಸಿದ್ದಾರೆ.
ಪಿಯೂಷ್ ಗೋಯೆಲ್ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಕೆ. ಹೆಚ್. ಮುನಿಯಪ್ಪ ಮಾತನಾಡಿ, ಹೆಚ್ಚುವರಿ ಅಕ್ಕಿ ಪೂರೈಕೆಗೆ ಕೇಂದ್ರ ಸಚಿವರು ನಿರಾಕರಿಸಿದ್ದು, ಹಾರಿಕೆಯ ಉತ್ತರ ನೀಡಿದ್ದಾರೆ. ಭಾರತೀಯ ಆಹಾರ ನಿಗಮ ಬಳಿ ದಾಸ್ತಾನು ಇದ್ದರೂ ಅಕ್ಕಿ ಕೊಡಲು ಆಗುವುದಿಲ್ಲ ಎಂದಿದ್ದಾರೆ. ಇದರಲ್ಲಿ ರಾಜಕೀಯ ದುರುದ್ದೇಶ ಎದ್ದು ಕಾಣುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ದ ಆರೋಪಿಸಿದ್ದಾರೆ. ನಾವು ಕೊಟ್ಟ ಮಾತಿನಂತೆ ನಾವು ನಡೆದುಕೊಳ್ಳುತ್ತೇವೆ. ಎಷ್ಟೇ ಕಷ್ಟವಾದರೀೂ ಉಚಿತವಾಗಿ ಅಕ್ಕಿ ಕೊಡುತ್ತೇವೆ, ವಿಳಂಬ ಆದ್ರೂ ಅಕ್ಕಿ ಕೊಟ್ಟೇ ಕೊಡುತ್ತೇವೆ ಎಂದು ಮುನಿಯಪ್ಪ ಹೇಳಿದರು.
English summary
KH Muniyappa Meet Minister Piyush Goyal: Minister KH Muniyappa Said That Centre playing ‘dirty politics’ by denying rice supply
Story first published: Friday, June 23, 2023, 14:32 [IST]