ನೂತನ ವಿಶ್ವ ಚಾಂಪಿಯನ್ ಗುಕೇಶ್ ದೊಮ್ಮರಾಜು, ಡಿಸೆಂಬರ್ 16ರ ಸೋಮವಾರ ಭಾರತಕ್ಕೆ ಮರಳಿದ್ದಾರೆ. ಡಿಸೆಂಬರ್ 12ರಂದು ಸಿಂಗಾಪುರದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಚೀನಾದ ಡಿಂಗ್ ಲಿರೆನ್ ಅವರನ್ನು ಸೋಲಿಸಿದ ಗುಕೇಶ್, ಫಿಡೆ ವಿಶ್ವ ಚಾಂಪಿಯನ್‌ಶಿಪ್ ಗೆದ್ದರು. ಆ ಮೂಲಕ ವಿಶ್ವ ಚಾಂಪಿಯನ್ ಆದ ವಿಶ್ವದ ಅತ್ಯಂತ ಕಿರಿಯ ಚೆಸ್ ಗ್ರ್ಯಾಂಡ್ ಮಾಸ್ಟರ್ ಎನಿಸಿಕೊಂಡರು. ಚಾಂಪಿಯನ್ ಆಗುವುದರೊಂದಿಗೆ 18 ವರ್ಷದ ಭಾರತೀಯ ಚೆಸ್ ಗ್ರ್ಯಾಂಡ್ ಮಾಸ್ಟರ್, ಕೋಟ್ಯಾಧಿಪತಿಯಾಗಿದ್ದಾರೆ. ಅಂತಾರಾಷ್ಟ್ರೀಯ ಚೆಸ್ ಫೆಡರೇಶನ್ ಅವರಿಗೆ 11.45 ಕೋಟಿ ರೂ. ಬಹುಮಾನ ನೀಡಿದೆ. ಹಾಗಂತಾ ಈ ಎಲ್ಲಾ ಹಣವನ್ನು ಚೆಸ್ ಗ್ರ್ಯಾಂಡ್ ಮಾಸ್ಟರ್ ಉಳಿಸಿಕೊಳ್ಳುವಂತಿಲ್ಲ. ತನ್ನ ಬಹುಮಾನದ ಮೊತ್ತದ ಮೇಲೆ ಭಾರಿ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.