ಜಾಮೀನು ಕೋರಿ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲಿರುವ ಸುಪ್ರೀಂ ಕೋರ್ಟ್ | Supreme Court will Hear AAP leader Manish Sisodia’s Bail plea Tomorrow

India

oi-Mamatha M

|

Google Oneindia Kannada News

ನವದೆಹಲಿ, ಜುಲೈ. 13: ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರ ಜಾಮೀನು ಅರ್ಜಿ ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಅಬಕಾರಿ ನೀತಿ ಹಗರಣದಲ್ಲಿ ಫೆಬ್ರವರಿಯಲ್ಲಿ ಬಂಧಿಸಲಾಗಿರುವ ಮನೀಶ್ ಸಿಸೋಡಿಯಾ ಅವರ ಹಲವು ಜಾಮೀನು ಅರ್ಜಿಗಳನ್ನು ಇದುವರೆಗೆ ನ್ಯಾಯಾಲಯಗಳು ತಿರಸ್ಕರಿಸಿವೆ.

ಸೋಮವಾರ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಪಿ ಎಸ್ ನರಸಿಂಹ ಅವರ ಪೀಠವು ಅವರ ಮೇಲ್ಮನವಿಯ ವಿಚಾರಣೆಗೆ ಒಪ್ಪಿಗೆ ನೀಡಿತ್ತು. ಮನೀಶ್ ಸಿಸೋಡಿಯಾ ಅವರು ತಮ್ಮ ಪತ್ನಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಇದರ ಜೊತೆಗೆ ಜಾಮೀನು ನಿರಾಕರಿಸಿರುವ ಎರಡು ಹೈಕೋರ್ಟ್ ಆದೇಶಗಳನ್ನು ಪ್ರಶ್ನಿಸಿದ್ದಾರೆ.

Manish Sisodias Bail plea Tomorrow

ಕಳೆದ ವಾರ, ಮಾಜಿ ಸಚಿವ ಮನೀಶ್ ಸಿಸೋಡಿಯಾ ಅವರ ವಿರುದ್ಧ ಕೇಂದ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯವು ದಾಖಲಿಸಿರುವ ಪ್ರಕರಣಗಳಲ್ಲಿ ಜಾಮೀನು ಕೋರಿ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿದ್ದರು. ದೆಹಲಿ ಸರ್ಕಾರದ 2021 ರ ಮದ್ಯ ನೀತಿಗೆ ಸಂಬಂಧಿಸಿದಂತೆ ದಾಖಲಿಸಲಾದ ಪ್ರಕರಣದಲ್ಲಿ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಅವರನ್ನು ಆರೋಪಿ ಎಂದು ಹೆಸರಿಸಲಾಗಿದೆ.

ಆರ್ಟಿಕಲ್ 370 ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಜ್ಜು: ಈ ಬಗ್ಗೆ ಪ್ರಮುಖ ಪಕ್ಷಗಳ ನಿಲುವು ಏನಿದೆ ಗೊತ್ತಾ..?ಆರ್ಟಿಕಲ್ 370 ಅರ್ಜಿಗಳ ವಿಚಾರಣೆಗೆ ಸುಪ್ರೀಂ ಸಜ್ಜು: ಈ ಬಗ್ಗೆ ಪ್ರಮುಖ ಪಕ್ಷಗಳ ನಿಲುವು ಏನಿದೆ ಗೊತ್ತಾ..?

ಈ ಅಬಕಾರಿ ನೀರಿಯನ್ನು ಬಳಿಕ ರದ್ದುಗೊಳಿಸಲಾಗಿದೆ. 51 ವರ್ಷದ ಮನೀಶ್ ಸಿಸೋಡಿಯಾ ಅವರು ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದಾರೆ. ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮದ್ಯದ ಕಂಪನಿಗಳು ಭಾಗಿಯಾಗಿವೆ ಎಂದು ಸಿಬಿಐ ಆರೋಪಿಸಿದೆ. ಇದರಿಂದ ಈ ಮದ್ಯದ ಸಂಸ್ಥೆಗಳಿಗೆ ಶೇಕಡಾ 12 ರಷ್ಟು ಲಾಭವನ್ನು ನೀಡುತ್ತದೆ. “ಸೌತ್ ಗ್ರೂಪ್” ಎಂದು ಕರೆಯಲ್ಪಡುವ ಮದ್ಯದ ಲಾಬಿ ಅದಕ್ಕಾಗಿ ಕಿಕ್‌ಬ್ಯಾಕ್ ಪಾವತಿಸಿದೆ ಎಂದು ಸಂಸ್ಥೆ ಆರೋಪಿಸಿದೆ.

Manish Sisodias Bail plea Tomorrow

ಈ ಶೇಕಡಾ 12 ರಷ್ಟು ಲಾಭದಲ್ಲಿ, ಆರು ಶೇಕಡಾವನ್ನು ಮಧ್ಯವರ್ತಿಗಳ ಮೂಲಕ ಸಾರ್ವಜನಿಕ ಸೇವಕರಿಗೆ ರವಾನಿಸಲಾಗಿದೆ ಎಂದು ಸಂಸ್ಥೆ ಹೇಳಿಕೊಂಡಿದೆ. ಈ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯವೂ ತನಿಖೆ ಆರಂಭಿಸಿದೆ. ಅಬಕಾರಿ ನೀತಿಯನ್ನು ರದ್ದುಗೊಳಿಸಿದ ನಂತರ, ಭ್ರಷ್ಟಾಚಾರವನ್ನು ಮುಚ್ಚಿಹಾಕಲು ದೆಹಲಿ ಸರ್ಕಾರವು ಹಳೆಯ ಮದ್ಯದ ನೀತಿಗೆ ಮರಳಿದೆ ಎಂದು ಬಿಜೆಪಿ ಹೇಳಿದೆ. ಆದರೆ, ಮನೀಶ್ ಸಿಸೋಡಿಯಾ ಅವರು ಆರೋಪವನ್ನು ನಿರಾಕರಿಸಿದ್ದಾರೆ. ಮನೀಶ್ ಸಿಸೋಡಿಯಾ ಬಂಧನವು “ದೆಹಲಿ ಆಡಳಿತದ ಮಾದರಿಯ ಮೇಲಿನ ದಾಳಿ” ಎಂದು ಆಮ್ ಆದ್ಮಿ ಪಕ್ಷ ಹೇಳಿದೆ.

English summary

Liquor policy scam: Supreme Court will hear Senior Aam Aadmi Paty leader Manish Sisodia’s bail plea tomorrow. know more.

Story first published: Thursday, July 13, 2023, 21:13 [IST]

Source link