Karnataka
oi-Malathesha M
ಬೆಂಗಳೂರು: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಮಹತ್ವದ ಯೋಜನೆ ಜಾರಿಗಾಗಿ ಮುಹೂರ್ತ ಫಿಕ್ಸ್ ಆಗಿದೆ. ಇಷ್ಟುದಿನ ರಾಜ್ಯದ ಮಹಿಳೆಯರು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭಿಸಲು ರಾಜ್ಯ ಸರ್ಕಾರ ಡೇಟ್ ಫಿಕ್ಸ್ ಮಾಡಿದೆ. ಜೂನ್ 27ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗುವ ಬಗ್ಗೆ ಖುದ್ದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.
ಹೌದು, ಇಂದು ಮೈಸೂರಿಗೆ ಭೇಟಿ ನೀಡಿ ಚಾಮುಂಡಿ ದೇವಿ ದರ್ಶನ ಪಡೆದ ನಂತರ ಈ ವಿಚಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು. ಜೂನ್ 27 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಆರಂಭವಾಗುತ್ತೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದರು. ಈ ಮಾಹಿತಿ ಜೊತೆಗೆ, ಆಗಸ್ಟ್ 17 ಅಥವಾ 18 ರಂದು ಮನೆ ಒಡತಿಯರ ಖಾತೆಗೆ 2 ಸಾವಿರ ರೂ. ಹಣ ಡೆಪಾಸಿಟ್ ಮಾಡಲಾಗುತ್ತೆ ಎಂದು ಕೂಡ ಸ್ಪಷ್ಟಪಡಿಸಿದರು. ಹಾಗಾದರೆ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡಲು, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳು ಏನೆಲ್ಲ ದಾಖಲೆಗಳನ್ನ ಸಲ್ಲಿಸಬೇಕು? ಯಾರಿಗೆಲ್ಲಾ ಅರ್ಜಿ ಸಲ್ಲಿಸಲು ಅವಕಾಶ ಇರುತ್ತೆ? ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.
ಯೋಜನೆ ಜಾರಿಗೆ ಸರ್ಕಾರದ ಮುಹೂರ್ತ!
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ವಿರೋಧ ಪಕ್ಷಗಳು 5 ಗ್ಯಾರಂಟಿ ವಿಚಾರ ಹಿಡಿದು ವಾಗ್ದಾಳಿ ನಡೆಸುತ್ತಿವೆ. ಅದರಲ್ಲೂ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆ ಸೇರಿ ಶಕ್ತಿ ಯೋಜನೆ ವಿಚಾರದಲ್ಲೂ ಸಾಕಷ್ಟು ಜಟಾಪಟಿ ನಡೆದಿದೆ. ಅದೇ ರೀತಿ ಗೃಹಲಕ್ಷ್ಮಿ ಯೋಜನೆ ವಿಚಾರಕ್ಕೂ ವಿರೋಧ ಪಕ್ಷಗಳು ಫೈಟ್ ಮಾಡುತ್ತಿವೆ. ಈ ಹೊತ್ತಲ್ಲೇ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿ ನೀಡಿದ್ದಾರೆ.
ಹಾಗಾದರೆ ರಾಜ್ಯ ಸರ್ಕಾರದ 5 ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ನೀವು ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು ಗೊತ್ತಾ? ದಾಖಲೆಗಳು ಇದ್ದರೆ ಅದನ್ನ ಆನ್‌ಲೈನ್ ಮೂಲಕ ಸಲ್ಲಿಕೆ ಮಾಡುವುದು ಹೇಗೆ? ಅರ್ಜಿ ಸಲ್ಲಿಕೆಯ ವಿಧಾನ ಹೇಗೆ? ಅದರ ಸಂಪೂರ್ಣ ಮಾಹಿತಿಯನ್ನ ಮುಂದೆ ತಿಳಿಯಿರಿ.
ಯಾವೆಲ್ಲಾ ದಾಖಲೆಗಳು ಬೇಕು?
1) ರೇಷನ್ ಕಾರ್ಡ್
2) ಬ್ಯಾಂಕ್ ಪಾಸ್‌ಬುಕ್
3) ಆಧಾರ್ ಕಾರ್ಡ್
4) ವೋಟರ್ ಐಡಿ
ಗೃಹ ಜ್ಯೋತಿ ಅಲ್ಲ, ಸುಡುವ ಜ್ಯೋತಿ ಎಂದ ಹೆಚ್ಡಿಕೆ; ಕುಮಾರಣ್ಣ ಪಾಪ ಎಂದು ಡಿ ಕೆ ಶಿವಕುಮಾರ್ ಹೇಳಿದ್ಯಾಕೆ?
ಅರ್ಜಿ ಸಲ್ಲಿಕೆ ಮಾಡುವುದು ಹೇಗೆ?
ಅಂದಹಾಗೆ ನಿಮ್ಮ ಬಳಿ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಆಧಾರ್ ಕಾರ್ಡ್ ಜೊತೆ ವೋಟರ್ ಐಡಿ ಇರಬೇಕು. ಗೃಹಲಕ್ಷ್ಮೀ ಯೋಜನೆಗೆ ಸರ್ಕಾರದ ಸೇವಾಸಿಂಧು ಪೋರ್ಟಲ್‌ನ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಬಹುದು. ಇಲ್ಲ ಎಂದರೆ ಗ್ರಾಮ ಒನ್ & ಕರ್ನಾಟಕ ಒನ್, ಬೆಂಗಳೂರು ಒನ್ ಕೇಂದ್ರಗಳಲ್ಲೂ ಭೌತಿಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಗಾದ್ರೆ ಯಾರಿಗೆಲ್ಲಾ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಸೌಲಭ್ಯ ಸಿಗಲಿದೆ? ಅದರ ಬಗ್ಗೆ ಮಾಹಿತಿ ಮುಂದೆ ತಿಳಿಯಿರಿ.
ಅಂದಹಾಗೆ ಗೃಹಲಕ್ಷ್ಮಿ ಯೋಜನೆಯಡಿ 2,000 ರೂಪಾಯಿ ಪಡೆಯಲು ಎಪಿಎಲ್ ಅಥವಾ ಬಿಪಿಎಲ್ ಇಲ್ಲ ಅಂತ್ಯೋದಯ ಕಾರ್ಡ್ ಸೇರಿ ಯಾವುದಾದರೂ ಒಂದು ದಾಖಲೆ ಕಡ್ಡಾಯ. ಇನ್ನು ಯೋಜನೆಗೆ ಅರ್ಜಿ ಸಲ್ಲಿಸಲು ಮನೆಯೊಡತಿಯ ಬ್ಯಾಂಕ್ ಹಾಗೂ ಆಧಾರ್ ಕಾರ್ಡ್ ಜೋಡಣೆ ಮಾಡಿರಲೇಬೇಕು. ಯೋಜನೆ ಲಾಭ ಪಡೆಯಲು ತಪ್ಪು ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಈಗಾಗಲೇ ಎಚ್ಚರಿಕೆ ನೀಡಿದೆ. ಈ ಮೂಲಕ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ತನ್ನ ಮತ್ತೊಂದು ಮಹತ್ವದ ಗ್ಯಾರಂಟಿ ಯೋಜನೆ ಜಾರಿಗೆ ಮುಂದಾಗಿದೆ. ಹಾಗೇ ಇದಕ್ಕೆ ಬೇಕಿರುವ ಪೂರ್ವ ಸಿದ್ಧತೆಗಳು ಈಗಾಗಲೇ ಬಹುತೇಕ ಪೂರ್ಣಗೊಂಡಿವೆ.
English summary
Gruha Lakshmi scheme application date announced by Karnataka government.
Story first published: Saturday, June 24, 2023, 19:29 [IST]