ಜೂನ್ 27ರ ತನಕ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ | IMD Issued Yellow Alert In Karnataka Karavali Till June 27

Karnataka

oi-Gururaj S

|

Google Oneindia Kannada News

ಬೆಂಗಳೂರು, ಜೂನ್ 27; ಜೂನ್ ತಿಂಗಳ ಅಂತ್ಯದ ವೇಳೆಗೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಮಳೆಯ ಕೊರತೆಯ ಕಾರಣ ರಾಜ್ಯದ ಜಲಾಶಯಗಳ ನೀರಿನ ಮಟ್ಟ ಕುಸಿತ ಕಂಡಿದ್ದು, ಮಳೆ ಬಾರದಿದ್ದರೆ ಕುಡಿಯುವ ನೀರಿನ ಕೊರತೆಯೂ ಉಂಟಾಗುವ ಭೀತಿ ಎದುರಾಗಿದೆ.

ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರ ತನಕ ಭಾರೀ ಮಳೆಯಾಗಲಿದೆ. ಇದಕ್ಕಾಗಿ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ.

 Monsoon 2023: ಕರ್ನಾಟಕ ಕರಾವಳಿಯಲ್ಲಿ ಜೂನ್ 28 ರ ವರೆಗೆ ಭಾರೀ ಮಳೆ, ಬಿರುಸಿನ ಗಾಳಿ, ಮೀನುಗಾರರಿಗೆ ಎಚ್ಚರಿಕೆ Monsoon 2023: ಕರ್ನಾಟಕ ಕರಾವಳಿಯಲ್ಲಿ ಜೂನ್ 28 ರ ವರೆಗೆ ಭಾರೀ ಮಳೆ, ಬಿರುಸಿನ ಗಾಳಿ, ಮೀನುಗಾರರಿಗೆ ಎಚ್ಚರಿಕೆ

ಈಗಾಗಲೇ ಮಲೆನಾಡು ಮತ್ತು ಕರಾವಳಿ ಭಾಗದ ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಹಲವು ಜಿಲ್ಲೆಗಳಲ್ಲಿ ದಿನವಿಡೀ ಜಿಟಿಜಿಟಿ ಮಳೆಯಾಗಿದ್ದು, ಜನರು ಮುಂಗಾರು ಮಳೆ ಆರಂಭವಾಯಿತು ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಇಡೀ ಕರ್ನಾಟಕ ಆವರಿಸಿದ ಮಾನ್ಸೂನ್, ಇಂದು ಹಲವೆಡೆ ಮಳೆ ಇಡೀ ಕರ್ನಾಟಕ ಆವರಿಸಿದ ಮಾನ್ಸೂನ್, ಇಂದು ಹಲವೆಡೆ ಮಳೆ

karavali-rain

ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆ; ಹವಾಮಾನ ಇಲಾಖೆ ಮಾಹಿತಿ ಪ್ರಕಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಆದರೆ ದಿನವಿಡೀ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರು ನಗರದಲ್ಲಿ ಶನಿವಾರ ಮೋಡ ಕವಿದ ವಾತಾವರಣ ಇತ್ತು, ಸಂಜೆಯ ವೇಳೆಗೆ ಕೆಲವು ಪ್ರದೇಶಗಳಲ್ಲಿ ತುಂತುರು ಮಳೆಯಾಗಿದೆ.

 Karnataka Rain: ರೈತರಲ್ಲಿ ಹರ್ಷ ತಂದ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ Karnataka Rain: ರೈತರಲ್ಲಿ ಹರ್ಷ ತಂದ ಮಳೆ: ಇಂದು ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಇನ್ನೂ ಬಿರುಸುಗೊಂಡಿಲ್ಲ. ಆದ್ದರಿಂದ ಮಳೆಗಾಗಿ ಜನರು ಕೆಲವು ದಿನಗಳ ಕಾಲ ಕಾಯಬೇಕಿದೆ. ಸೋಮವಾರ ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.

ಭಾನುವಾರ ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಬೆಂಗಳೂರು ನಗರದಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಅಂದಾಜಿಸಲಾಗಿದೆ.

ತಡವಾಗಿ ಆದರೂ ನೈಋತ್ಯ ಮುಂಗಾರು ಮಳೆ ಆರಂಭವಾಯಿತು ಎಂದು ಜನರು ಸಂತಸಗೊಂಡಿದ್ದಾರೆ. ಮಳೆ ಸುರಿದ ಕಾರಣ ಕೃಷಿ ಚಟುವಟಿಕೆಗಳಿಗೆ ರೈತರು ಸಿದ್ಧತೆ ಪ್ರಾರಂಭಿಸಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿಯೂ ಮಳೆಯಾಗಿ ಕೃಷಿ ಚಟುವಟಿಕೆ ಬಿರುಸಾಗಲಿ, ಜಲಾಶಯಗಳು ಭರ್ತಿಯಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಿರಲಿ ಎಂದು ಜನರು ಪ್ರಾರ್ಥಿಸುತ್ತಿದ್ದಾರೆ.

19 ಕುರಿಗಳು ಸಾವು; ಯಾದಗಿರಿ ಜಿಲ್ಲೆಯಲ್ಲಿ ಗುಡುಗು, ಸಿಡಿಲು ಸಹಿತವಾಗಿ ಗಾಳಿಯೊಂದಿಗೆ ಮಳೆ ಸುರಿದಿದೆ. ಶಹಾಪುರದ ಹಳಿಪೇಟೆಯ ಬೆಟ್ಟದಲ್ಲಿ ಸಿಡಿಲು ಬಡಿದು 19 ಕುರಿಗಳು ಮೃತಪಟ್ಟಿವೆ. ಈ ಕುರಿಗಳು ಸಂಗಪ್ಪ ಮತ್ತು ದೇವಪ್ಪ ಎಂಬುವವರಿಗೆ ಸೇರಿದವು. ಕುರಿಗಳನ್ನು ಮೇಯಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದಾಗ ಸಿಡಿಲು ಬಡಿದಿದೆ. ಸುಮಾರು 2 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದ್ದು, ಕಂದಾಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದರು.

ಶನಿವಾರ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಸುಮಾರು ಒಂದು ಗಂಟೆಗಳ ಕಾಲ ಮಳೆಯಾಗಿದೆ. ಬಿರುಬಿಸಿಲಿನಿಂದ ಕಂಗೆಟ್ಟಿದ್ದ ಜನರು ಮಳೆ ಸುರಿದಿದ್ದರಿಂದ ಸಂತಸಗೊಂಡರು. ಪಟ್ಟಣದ ಪ್ರಮುಖ ರಸ್ತೆಗಳು ಭಾರೀ ಮಳೆಯ ಕಾರಣ ಜಲಾವೃತಗೊಂಡಿದ್ದವು.

ಉತ್ತರ ಕನ್ನಡ ಜಿಲ್ಲೆಯ ಬೈತ್‌ಕೋಲ್ ಗುಡ್ಡ ಕುಸಿದು ಮನೆಗಳಿಗೆ ನೀರು ನುಗ್ಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಜೆಸಿಬಿಗಳ ಮೂಲಕ ರಸ್ತೆಗಳ ಮೇಲೆ ಕುಸಿದಿರುವ ಕಲ್ಲುಗಳನ್ನು ತೆರವು ಮಾಡುತ್ತಿದ್ದಾರೆ. ಗುಡ್ಡ ಕಡಿದು ರಸ್ತೆ ಮಾಡಿರುವುದೇ ಘಟನೆಗೆ ಕಾರಣ ಎಂದು ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

English summary

The India Meteorological Department (IMD) has predicted heavy rain and Yellow alert has also been issued in Karnataka Karavali districts till June 27, 2023.

Source link