ಜೈನ ಮುನಿ ಹಂತಕರ ವಿರುದ್ಧ ಕಠಿಣ ಕ್ರಮ: ಡಿಸಿಎಂ ಡಿ.ಕೆ ಶಿವಕುಮಾರ್ | DCM DK Shivakumar Vows to Take Strict Action Against Jain Monk Murderers

Bengaluru

oi-Naveen Kumar N

|

Google Oneindia Kannada News

ಬೆಂಗಳೂರು, ಜುಲೈ 9: ಬೆಳಗಾವಿಯಲ್ಲಿ ಜೈನ ಮುನಿಗಳಾದ ಕಾಮಕುಮಾರನಂದಿ ಮಹಾರಾಜರ ಹತ್ಯೆ ಮಾಡಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.

ಭಾನುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, “ಜೈನ ಮುನಿಗಳ ಹತ್ಯೆ ಖಂಡನೀಯ. ಇದನ್ನು ಸರ್ಕಾರ ಸಹಿಸುವುದಿಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನಿನ ಕಠಿಣ ಕ್ರಮ ಕೈಗೊಳ್ಳಲಾಗುವುದು.” ಎಂದು ಹೇಳಿದರು.

ಯಾರೊಬ್ಬರೂ ಪ್ರಚೋದನೆಗೆ ಒಳಗಾಗಬಾರದು, ಬೇರೆಯವರನ್ನು ಪ್ರಚೋದಿಸಬಾರದು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ರಾಜ್ಯದ ಜನತೆಗೆ ಮನವಿ ಮಾಡಿದರು.

DCM DK Shivakumar

ಭದ್ರತೆ ನೀಡುವ ಬಗ್ಗೆ ಪರಿಶೀಲನೆ

“ಹುಬ್ಬಳ್ಳಿ ಬಳಿಯ ವರೂರು ಶ್ರೀ ಗುಣಧರ ನಂದಿ ಮಹಾರಾಜರು ಸ್ವಾಮೀಜಿಗಳು, ಎಲ್ಲಾ ಸ್ವಾಮೀಜಿಗಳಿಗೆ ಭದ್ರತೆ ನೀಡಬೇಕು ಎಂದು ಅನ್ನ, ನೀರು ತ್ಯಜಿಸಿ ಪ್ರತಿಭಟನೆಗೆ ಮುಂದಾಗಿರುವ ಮಾಹಿತಿ ಬಂದಿದೆ. ಸ್ವಾಮೀಜಿಗಳಿಗೆ ಭದ್ರತೆ ನೀಡುವ ಕೆಲಸ ಮಾಡುತ್ತೇವೆ. ಕೂಡಲೇ ಅವರು ತಮ್ಮ ಪ್ರತಿಭಟನೆ ಕೈಬಿಡಬೇಕು. ನಾನು ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಲು ಪ್ರಯತ್ನಿಸುತ್ತಿದ್ದೇನೆ. ಆದರೆ ಸಂಪರ್ಕ ಸಾಧ್ಯವಾಗಿಲ್ಲ. ಹೀಗಾಗಿ ಸ್ಥಳೀಯ ಶಾಸಕರು, ಮಂತ್ರಿಗಳ ಜೊತೆ ಈ ವಿಚಾರವಾಗಿ ಮಾತನಾಡಿದ್ದೇನೆ” ಎಂದು ತಿಳಿಸಿದರು.

ಟ್ವೀಟ್ ಮೂಲಕ ಮನವಿ ಮಾಡಿದ ಡಿಕೆಶಿ

ಡಿ.ಕೆ ಶಿವಕುಮಾರ್ ಟ್ವೀಟ್ ಮಾಡಿದ್ದು ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ. “ಚಿಕ್ಕೋಡಿಯ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ನಿಧನದ ಸುದ್ದಿ ಆಘಾತವನ್ನುಂಟುಮಾಡಿದೆ. ಹತ್ಯೆಯ ಹಿಂದೆ ಯಾರೇ ಇದ್ದರೂ ಸರ್ಕಾರ ಸೂಕ್ತ ತನಿಖೆ ನಡೆಸಿ ಕೊಲೆಗಾರರಿಗೆ ತಕ್ಕ ಶಿಕ್ಷೆಯಾಗುವಂತೆ ನೋಡಿಕೊಳ್ಳಲಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ವರೂರ ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜ ಅವರು ಆರಂಭಿಸಿರುವ ಸಲ್ಲೇಖನ ವ್ರತವನ್ನು ಕೈಬಿಡುವಂತೆ ಹಾಗೂ ಸಾರ್ವಜನಿಕರು ಶಾಂತಿ ಕಾಪಾಡಬೇಕೆಂದು ಮನವಿ ಮಾಡುತ್ತೇನೆ.” ಎಂದು ಹೇಳಿದ್ದಾರೆ.

 ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಪವರ್‌ ಗೇಮ್‌: ಸಿಎಂ ಕಚೇರಿ ಪಕ್ಕದಲ್ಲೇ ತಮಗೂ ಕಚೇರಿ ಬೇಕೆಂದ ಡಿಸಿಎಂ ವಿಧಾನಸೌಧದಲ್ಲಿ ಡಿಕೆ ಶಿವಕುಮಾರ್ ಪವರ್‌ ಗೇಮ್‌: ಸಿಎಂ ಕಚೇರಿ ಪಕ್ಕದಲ್ಲೇ ತಮಗೂ ಕಚೇರಿ ಬೇಕೆಂದ ಡಿಸಿಎಂ

ಜೈನಮುನಿ ಅಂತ್ಯಸಂಸ್ಕಾರ

ಬಿಗಿ ಭದ್ರತೆ ನಡುವೆ ಜೈನ ಮುನಿ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಅಂತ್ಯ ಸಂಸ್ಕಾರ ನಡೆಸಲಾಗಿದೆ. ಚಿಕ್ಕೋಡಿಯ ಹಿರೇಕೊಡಿ ಗ್ರಾಮದ ನಂದಿ ಪರ್ವತ ಆಶ್ರಮದ ಬದಿಯ ಕೃಷಿ ಭೂಮಿಯಲ್ಲಿ ಅಂತ್ಯ ಸಂಸ್ಕಾರ ನಡೆಸಲಾಗಿದೆ.

ಜೈನ ಧರ್ಮದ ಸಂಪ್ರದಾಯದಂತೆ ಮುನಿ ಮಹಾರಾಜರ ಸಹೋದರನ ಮಗ ಭೀಮಗೌಂಡ ಉಗಾರೆ ಮುನಿಗಳಿಗೆ ಅಗ್ನಿಸ್ಪರ್ಶ ನೀಡಿದರು. ಬೆಳಗಾವಿ ಎಸ್‌ಪಿ ಸಂಜೀವ ಪಾಟೀಲ್ ನೇತೃತ್ವದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

English summary

During a media interaction, DCM DK Shivakumar vowed to take strict action against the murderers of Jain Monk Muni Kamkumar Nandi Maharaj, stating that our government will not tolerate such acts and will ensure justice is served.

Story first published: Sunday, July 9, 2023, 15:48 [IST]

Source link