ಡಿಪ್ಲೊಮಾದವರಿಗೆ ಇಂಜಿನಿಯರಿಂಗ್ ಕಾಲೇಜು ಪ್ರವೇಶ ಪರೀಕ್ಷೆ, ವೇಳಾಪಟ್ಟಿ | Engineering Admission For Diploma Holders Entrance Exam Schedule

Karnataka

oi-Gururaj S

|

Google Oneindia Kannada News

ಬೆಂಗಳೂರು, ಜುಲೈ 30; ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಡಿಪ್ಲೊಮಾ ಪದವಿ ಪಡೆದವರಿಗೆ ಹಗಲು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಇಂಜಿನಿಯರಿಂಗ್‌ ಕೋರ್ಸ್‌ಗಳಿಗೆ ಪ್ರವೇಶಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ-2023ರ ವೇಳಾಪಟ್ಟಿಯನ್ನು ಪ್ರಕಟಿಸಿದೆ.

ಸರ್ಕಾರದ ಆದೇಶ ದಿನಾಂಕ 14/07/2022ರ ಅನ್ವಯ ಮೂರು ವರ್ಷಗಳ ಡಿಪ್ಲೊಮ ಇಂಜಿನಿಯರಿಂಗ್ ಕೋರ್ಸುಗಳಲ್ಲಿ ವ್ಯಾಸಂಗ ಮಾಡಿ ಅರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಇಂಜಿನಿಯರಿಂಗ್‌ ಕೋರ್ಸ್‌ಗಳಿಗೆ ನೇರವಾಗಿ ಯಾವುದೇ ಇಂಜಿನಿಯರಿಂಗ್‌ ಕೋರ್ಸ್‌ಗಳನ್ನು ಆಯ್ಕೆ ಮಾಡಿಕೊಳ್ಳಲು ಆದೇಶಿಸಿದೆ.

Engineering Admission For Diploma Holders Entrance Exam Schedule

ಸರ್ಕಾರದ ಆದೇಶದ ಅನ್ವಯ 2023-24ನೇ ಸಾಲಿಗೆ ಪ್ರಾಧಿಕಾರವು ಲ್ಯಾಟರಲ್ ಎಂಟ್ರಿ ಮೂಲಕ 2ನೇ ವರ್ಷದ ಅಥವಾ 3ನೇ ಸೆಮಿಸ್ಟರ್‌ನ ಹಗಲು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಾತಿಗೆ ಅರ್ಹ ಡಿಪ್ಲೊಮಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಿ; ಅಭ್ಯರ್ಥಿಗಳು, ಲ್ಯಾಟರಲ್ ಎಂಟ್ರಿ ಮೂಲಕ ಈ ಕೋರ್ಸ್‌ಗಳ ಪ್ರವೇಶಕ್ಕೆ ಅರ್ಹತೆ ಪಡೆಯಲು, ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನಡೆಸುವ 2023ರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ಹಾಜರಾಗಬೇಕು. ಆರ್ಕಿಟೆಕ್ಟರ್ ಪ್ರವೇಶಕ್ಕೆ ಕೌನ್ಸಿಲ್ ಆಫ್ ಆರ್ಕಿಟೆಕ್ಟರ್‌ನವರು ನಡೆಸಿದ NATA-2023 ಪರೀಕ್ಷೆಗೆ ಹಾಜರಾಗಿ valid NATA score ಅನ್ನು ಹೊಂದಿರಬೇಕು ಮತ್ತು ಕಡ್ಡಾಯವಾಗಿ ಆನ್‌ಲೈನ್ ಮೂಲಕ ನೋಂದಣಿ ಮಾಡಿ ಅರ್ಜಿ ಸಲ್ಲಿಸಿ ಶುಲ್ಕವನ್ನು ಪಾವತಿಸಬೇಕು.

ಎಲ್ಲಾ ಕೋರ್ಸ್‌ಗಳ ಪ್ರವೇಶಕ್ಕೆ ವಿವರವಾದ ಅರ್ಹತೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ http://kea.kar.nic.in ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು, ಯಾವುದೇ ಕೋರ್ಸಿಗೆ ಅರ್ಜಿ ಸಲ್ಲಿಸುವ ಮೊದಲು ಅರ್ಹತಾ ವಿವರವನ್ನು ಪರಿಶೀಲಿಸಲು ಮನವಿ ಮಾಡಲಾಗಿದೆ. ಪರಿಷ್ಕೃತ ಪಠ್ಯಕ್ರಮ: ಕಾಲೇಜು ಶಿಕ್ಷಣ ಮತ್ತು ತಾಂತ್ರಿಕ ಶಿಕ್ಷಣ ನಿರ್ದೇಶನಾಲಯದಿಂದ ನೀಡಿರುವ ಡಿಸಿಇಟಿ- 2023ರ ಪರೀಕ್ಷೆಯ ಪರಿಷ್ಕೃತ ಪಠ್ಯಕ್ರಮಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ.

ನೋಂದಣಿ ಹಾಗೂ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 31/7/2023 ಬೆಳಗ್ಗೆ 11ರಿಂದ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 13/8/2023ರ ರಾತ್ರಿ 11.59ರ ತನಕ. ಶುಲ್ಕವನ್ನು ಪಾವತಿ ಮಾಡಲು ಕೊನೆಯ ದಿನಾಂಕ 14/8/2023ರ ಸಂಜೆ 6 ಗಂಟೆ. ಡಿಸಿಇಟಿ-2023ಕ್ಕೆ ಪ್ರವೇಶ ಪತ್ರವನ್ನು ಪ್ರಾಧಿಕಾರದ ವೆಬ್‌ಸೈಟಿನಿಂದ ಡೌನ್‌ ಮಾಡುವ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ.

ಸೂಚನೆಗಳು

* ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಡಿಪ್ಲೊಮಾ ಸಿಇಟಿ-2023ಕ್ಕೆ ದಾಖಲಿಸಿದ ಎಲ್ಲಾ ಮಾಹಿತಿಗಳನ್ನು ಅಂತಿಮ ಎಂದು ಪರಿಗಣಿಸಲಾಗುತ್ತದೆ ಮತ್ತು ಈ ಮಾಹಿತಿಯೇ ಮುಂದಿನ ಎಲ್ಲಾ ಪ್ರಕ್ರಿಯೆಗಳಿಗೆ ಆಧಾರವಾಗಿರುತ್ತದೆ ಹಾಗೂ ಯಾವುದೇ ಕಾರಣಕ್ಕೂ ದಾಖಲಿಸಿದ ಮಾಹಿತಿಯನ್ನು ಬದಲಾಯಿಸಲು ಅವಕಾಶವಿರುವುದಿಲ್ಲ.

* ಡಿಪ್ಲೊಮಾ ಸಿಇಟಿ-2023ರ ಅರ್ಜಿ ನಮೂನೆಯಲ್ಲಿ ಜಾತಿ/ ವರ್ಗ ಮತ್ತು ವಾರ್ಷಿಕ ಆದಾಯದ ಬಗ್ಗೆ ಒದಗಿಸಿರುವ ಮಾಹಿತಿಯು ವಿದ್ಯಾರ್ಥಿಗಳಿಗೆ ಬ್ಯಾಂಕ್ ನೀಡುವುದಕ್ಕೆ/ ಸೀಟು ಆಯ್ಕೆ ಮಾಡುವುದಕ್ಕೆ ಪರಿಗಣಿಸಲಾಗುವುದು ಮತ್ತು ಯಾವುದೇ ಕಾರಣಕ್ಕೂ ಬದಲಾಯಿಸಲು ಅವಕಾಶವಿರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್‌ಸೈಟ್‌ಗೆ ಭೇಟಿ ನೀಡಬಹುದು.

English summary

Karnataka examination authority (KEA) announced schedule for the entrance exam date for the engineering admission for diploma holders.

Story first published: Sunday, July 30, 2023, 15:23 [IST]

Source link