ಇಂಡಿಯನ್ ಪ್ರೀಮಿಯರ್ ಲೀಗ್ನ 63ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 59 ರನ್ಗಳ ಅಂತರದಿಂದ ಜಯಿಸಿದ ಮುಂಬೈ ಇಂಡಿಯನ್ಸ್ ಪ್ಲೇಆಫ್ಗೆ ಲಗ್ಗೆ ಇಟ್ಟಿದೆ.
ಡೆಲ್ಲಿ ಕ್ಯಾಪಿಟಲ್ಸ್ ಮಣಿಸಿ 11ನೇ ಬಾರಿಗೆ ಐಪಿಎಲ್ ಪ್ಲೇಆಫ್ ಪ್ರವೇಶಿಸಿದ ಮುಂಬೈ ಇಂಡಿಯನ್ಸ್ (PTI)
ನಾಕೌಟ್ ಎಂದೇ ಹೇಳಲಾಗಿದ್ದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ 59 ರನ್ಗಳ ಭರ್ಜರಿ ಗೆಲುವಿನೊಂದಿಗೆ 18ನೇ ಆವೃತ್ತಿಯ ಐಪಿಎಲ್ನಲ್ಲಿ ನಾಲ್ಕನೇ ತಂಡವಾಗಿ ಪ್ಲೇಆಫ್ಗೆ ಲಗ್ಗೆ ಇಟ್ಟಿದೆ. ಕಳೆದ ವರ್ಷ ನಾಯಕತ್ವ ಬದಲಾವಣೆ ಹಿನ್ನೆಲೆ ಭಾರೀ ಟೀಕೆಗೆ ಗುರಿಯಾಗಿದ್ದ ಮುಂಬೈ ಇದೀಗ ಆರನೇ ಟ್ರೋಫಿ ಲೋಡಿಂಗ್ನಲ್ಲಿ ಇಟ್ಟಿದೆ. ಐಪಿಎಲ್ ಇತಿಹಾಸದಲ್ಲಿ 11ನೇ ಸಲ ಪ್ಲೇಆಫ್ ಪ್ರವೇಶಿಸಿದಂತಾಗಿದೆ. ಪ್ರಸಕ್ತ ಆವೃತ್ತಿಯಲ್ಲಿ ಮುಂಬೈಗೂ ಮುನ್ನ ಗುಜರಾತ್ ಟೈಟಾನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ಸ್ ಪ್ಲೇಆಫ್ಗೆ ಲಗ್ಗೆ ಇಟ್ಟಿದ್ದವು. ಆದರೆ ಈಗ ಡೆಲ್ಲಿ ಮತ್ತೊಮ್ಮೆ ಅಗ್ರ-4ರೊಳಗೆ ಪ್ರವೇಶಿಸಲು ವಿಫಲವಾಯಿತು. ಇದರೊಂದಿಗೆ ತನ್ನ ಚೊಚ್ಚಲ ಟ್ರೋಫಿ ಕನಸೂ ಭಗ್ನವಾಯಿತು.
ಮುಂಬೈನ ವಾಂಖೆಡೆ ಕ್ರಿಕೆಟ್ ಮೈದಾನದಲ್ಲಿ ಜರುಗಿದ ಮೊದಲ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಮುಂಬೈ ತಂಡವು ಸೂರ್ಯಕುಮಾರ್ ಯಾದವ್ ಅವರ ಅಜೇಯ 73 ರನ್ಗಳ ಆರ್ಭಟದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 5 ವಿಕೆಟ್ ನಷ್ಟಕ್ಕೆ 180 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಡೆಲ್ಲಿಗೆ ಹಾರ್ದಿಕ್ ಪಡೆ ಶಾಕ್ ನೀಡಿತು. ಮಿಚೆಲ್ ಸ್ಯಾಂಟ್ನರ್ ಮತ್ತು ಜಸ್ಪ್ರೀತ್ ಬುಮ್ರಾ ಅವರು ತಲಾ 3 ವಿಕೆಟ್ ಉರುಳಿಸಿ ಪಂದ್ಯದ ಚಿತ್ರಣವನ್ನೇ ಬದಲಿಸಿದರು. 18.2 ಓವರ್ಗಳಲ್ಲಿ 121 ರನ್ಗೆ ಡೆಲ್ಲಿ ಆಲೌಟ್ ಆಯಿತು. ಇದರೊಂದಿಗೆ 59 ರನ್ಗಳಿಂದ ಶರಣಾಯಿತು.