India
oi-Punith BU
ನವದೆಹಲಿ, ಜೂನ್ 26: ನೈಋತ್ಯ ಮಾನ್ಸೂನ್ ಮಾರುತಗಳು ದಶಕಗಳ ನಂತರ ಮೊದಲ ಬಾರಿಗೆ ಮುಂಬೈ ಮತ್ತು ದೆಹಲಿ ನಗರಗಳ ಮೇಲೆ ಒಟ್ಟಿಗೆ ಅಪ್ಪಳಿಸಿದೆ. ಎರಡು ನಗರಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಭಾರೀ ಮಳೆಯಾಗಿ ಜನಜೀವನ ಅಸ್ತವ್ಯವಾಗಿದೆ.
ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಮಳೆಯು ಎರಡು ದಿನಗಳ ಮುಂಚಿತವಾಗಿ ದೆಹಲಿಯಲ್ಲಿ ಶಾಖದ ವಾತಾವರಣದಿಂದ ವಿರಾಮ ನೀಡಲಿದೆ ಎಂದಿದೆ. ಕಳೆದ 24 ಗಂಟೆಗಳಲ್ಲಿ ಮುಂಬೈ ನಗರದಲ್ಲಿ 104 ಮಿಮೀ ಮಳೆ ಮತ್ತು ಪೂರ್ವ ಉಪನಗರಗಳು ಮತ್ತು ಪಶ್ಚಿಮ ಉಪನಗರಗಳಲ್ಲಿ ಕ್ರಮವಾಗಿ 123 ಮಿಮೀ ಮತ್ತು 139 ಮಿಮೀ ಮಳೆಯಾಗಿದೆ. ದೆಹಲಿಯ ಸಫ್ದರ್ಜಂಗ್ನಲ್ಲಿರುವ ಪ್ರಾಥಮಿಕ ಹವಾಮಾನ ಕೇಂದ್ರವು ಭಾನುವಾರ ಬೆಳಿಗ್ಗೆ 8.30 ಕ್ಕೆ 24 ಗಂಟೆಗಳಲ್ಲಿ 48.3 ಮಿಮೀ ಮಳೆಯಾಗಿದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರ ತಿಳಿಸಿದೆ.
ದೆಹಲಿಯ ಎನ್ಸಿಆರ್ (ರಾಷ್ಟ್ರೀಯ ರಾಜಧಾನಿ ಪ್ರದೇಶ) ನೋಯ್ಡಾ, ಗುರುಗ್ರಾಮ್, ಫರಿದಾಬಾದ್ ಮತ್ತು ಗಾಜಿಯಾಬಾದ್ನಲ್ಲಿಯೂ ಭಾರಿ ಮಳೆಯಾಗಿದೆ. ಮುಂದಿನ 4-5 ದಿನಗಳಲ್ಲಿ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆಯ ತೀವ್ರತೆಯು ಕ್ರಮೇಣ ಹೆಚ್ಚಾಗುವ ಸಾಧ್ಯತೆಯಿದೆ. ಮುಂದಿನ 5 ದಿನಗಳಲ್ಲಿ ನಿರೀಕ್ಷಿತ ತೀವ್ರ ಹವಾಮಾನದ ಸೂಚನೆ ಇದೆ ಎಂದು ಪ್ರಾದೇಶಿಕ ಹವಾಮಾನ ಕೇಂದ್ರವು ಮುನ್ಸೂಚನೆ ನೀಡಿದೆ.
ನೈಋತ್ಯ ಮಾನ್ಸೂನ್ ಕೂಡ ಛತ್ತೀಸ್ಗಢದ ಮೇಲೆ ದಾಳಿ ಮಾಡಿದೆ. ಮುಂಬರುವ ಮೂರು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಛತ್ತೀಸ್ಗಢದಲ್ಲಿ ಮಾನ್ಸೂನ್ ಆರಂಭವಾಗಿದ್ದು, ರಾಜ್ಯದ ಮಧ್ಯದಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಸಹ ನೀಡಲಾಗಿದೆ.
ಕರ್ನಾಟಕ; ಜೂನ್ನಲ್ಲಿ ಶೇ 61ರಷ್ಟು ಮಳೆ ಕೊರತೆ, ಜುಲೈನಲ್ಲಿ?
ಸಹಾಯಕ ಹವಾಮಾನ ತಜ್ಞ ಸಂಜಯ ಬೈರಾಗಿ ಮಾತನಾಡಿ, ಈ ವರ್ಷದ ಮುನ್ಸೂಚನೆಯಂತೆ ಉತ್ತಮ ಮಳೆಯಾಗಲಿದ್ದು, ಮುಂಗಾರು ವಿಳಂಬದಿಂದ ಕೃಷಿ ಕಾರ್ಯ 15 ದಿನ ಕುಂಠಿತವಾಗಿರಬಹುದು, ಆದರೆ ಈಗ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಶೇ. ರೈತರಿಗೆ ಒಳ್ಳೆಯ ಸುದ್ದಿ, ಅವರು ಬಿತ್ತನೆ ಪ್ರಾರಂಭಿಸಬಹುದು ಎಂದು ತಿಳಿಸಿದ್ದಾರೆ.
ಭಾನುವಾರ ಒಡಿಶಾದ 13 ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳ ಕಾಲ ಆರೆಂಜ್ ಎಚ್ಚರಿಕೆಯನ್ನು ನೀಡಲಾಗಿತ್ತು. ಮುಂದಿನ 48 ಗಂಟೆಗಳಲ್ಲಿ ರಾಜ್ಯವು ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ರಚನೆಯಾದ ವಾಯು ಒತ್ತಡ ಪರಿಣಾಮ ಬೀರಲಿದೆ ಎಂದು ತಿಳಿಸಿತ್ತು.ಒಡಿಶಾದಲ್ಲಿ 10 ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಮೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಮತ್ತು ಅದೇ ದೃಷ್ಟಿಯಿಂದ ಐಎಂಡಿ ಆರೆಂಜ್ ಅಲರ್ಟ್ ನೀಡಿದೆ.
ಕಳೆದ 24 ಗಂಟೆಗಳಲ್ಲಿ ನಿರಂತರ ಮಳೆ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯ ಹಲವಾರು ಭಾಗಗಳಲ್ಲಿ ವ್ಯಾಪಕ ಹಾನಿ ಉಂಟು ಮಾಡಿದೆ. ಅದೇ ಸಮಯದಲ್ಲಿ, ಅನೇಕ ಪ್ರದೇಶಗಳಲ್ಲಿ ರಸ್ತೆಗಳನ್ನು ಮುಚ್ಚಲಾಗಿದೆ. ಮಂಡಿ ಜಿಲ್ಲೆಯ ಜಂಜೆಹ್ಲಿ ಎಂಬಲ್ಲಿನ ಹಳ್ಳದಲ್ಲಿ ಹಠಾತ್ ಪ್ರವಾಹದಿಂದಾಗಿ ಹಲವಾರು ವಾಹನಗಳು ಕೊಚ್ಚಿಹೋಗಿವೆ. ನದಿಯ ಕೆಳಭಾಗದಲ್ಲಿರುವ ಅನೇಕ ಮನೆಗಳು ಅಪಾಯವನ್ನು ಎದುರಿಸುತ್ತಿವೆ ಮತ್ತು ಜಿಲ್ಲೆಯಾದ್ಯಂತ ಅನೇಕ ಸ್ಥಳಗಳಲ್ಲಿ ಭೂಕುಸಿತದ ಘಟನೆಗಳು ವರದಿಯಾಗಿವೆ. ಕಳೆದ 24 ಗಂಟೆಗಳಲ್ಲಿ ಮಂಡಿಯಲ್ಲಿ 64.4 ಮಿ.ಮೀ ಮಳೆಯಾಗಿದೆ.
ರಾಜ್ಯದ ಇತರ ಭಾಗಗಳಲ್ಲಿಯೂ ಭಾರೀ ಮಳೆಯಿಂದಾಗಿ ಹಾನಿ ವರದಿಯಾಗಿದೆ. ಕುಲು ಜಿಲ್ಲೆಯಲ್ಲಿ ಹಲವಾರು ವಾಹನಗಳು ಕೊಚ್ಚಿ ಹೋಗಿವೆ. ಕುಲು ಪಟ್ಟಣದ ಬಳಿಯ ಮೊಹಲ್ ನದಿಯಲ್ಲಿ ಎಂಟು ವಾಹನಗಳು ಕೊಚ್ಚಿ ಹೋಗಿವೆ. ಉತ್ತರಾಖಂಡದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ರುದ್ರಪ್ರಯಾಗದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರು ಕೇದಾರನಾಥ ಯಾತ್ರೆಯನ್ನು ಸೋನ್ಪ್ರಯಾಗದಲ್ಲಿ ನಿಲ್ಲಿಸಲಾಗಿದೆ ಎಂದು ತಿಳಿಸಲಾಗಿದೆ.
English summary
Southwest Monsoon winds hit Mumbai and Delhi together for the first time in decades. Heavy rains accompanied by lightning and thunder disrupted life in the two cities.