Mangaluru
lekhaka-Kishan Kumar
ಮಂಗಳೂರು, ಜೂನ್, 25: ಕ್ರಿಕೇಟಿಗ ಕೆ.ಎಲ್.ರಾಹುಲ್ ಅವರು ಭಾನುವಾರ (ಜೂನ್ 25) ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮುಂಜುನಾಥ್ ಸ್ವಾಮಿ ದರ್ಶನ ಪಡೆದರು.
ಕೆ.ಎಲ್.ರಾಹುಲ್ ಇಂದು ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿ ದರ್ಶನ ಪಡೆದರು.
ಇದೇ ವೇಳೆ ಅವರು ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸುವ ಮೂಲಕ ಗಮನ ಸೆಳೆದರು. ಬಳಿಕ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. ಅಲ್ಲದೆ ಹೆಗ್ಗಡೆ ಕುಟುಂಬಸ್ಥರ ಜೊತೆ ಕೂಡ ಆತ್ಮೀಯವಾಗಿ ಚರ್ಚೆ ನಡೆಸಿದರು.
ಹಾಗೆಯೇ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಹುಲ್‌ಗೆ ಶಾಲು ಹೊದಿಸಿ ಬೆಳ್ಳಿ ನಾಣ್ಯ ನೀಡಿದ್ದಲ್ಲದೆ, ಗೋವಿನ ಕಂಚಿನ ಪ್ರತಿಮೆಯನ್ನು ನೀಡಿ ಗೌರವಿಸಿದರು.
ಮಂಜುನಾಥ ಸ್ವಾಮಿ ದರ್ಶನ ಪಡೆದ ರೆಡ್ಡ
ಇತ್ತೀಚೆಗಷ್ಟೇ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರು ಕುಟುಂಬ ಸಮೇತ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದಿದ್ದರು.ಪತ್ನಿ ಅರುಣಾ ಲಕ್ಷ್ಮಿ, ಮಗಳು ರಮಿಣಿ, ಆಳಿಯ ರಾಜೀವ್ ಜೊತೆ ಜನಾರ್ದನ ರೆಡ್ಡಿ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ನಂತರ ಕುಟುಂಬ ಸಮೇತ ಧರ್ಮಸ್ಥಳದಿಂದ ನೇರವಾಗಿ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ತೆರಳಿದ್ದರು.
ಕನ್ನಡ ಶಾಲೆಗೆ ವರ್ಣಮಾಲೆ ಗೊತ್ತಿಲ್ಲದ ಮಲಯಾಳಿ ಶಿಕ್ಷಕಿ: ಸರ್ಕಾರದ ವಿರುದ್ಧ ಸಿಡಿದೆದ್ದ ಮಕ್ಕಳು
ಇನ್ನು ಇದೇ ವೇಳೆ ಜನಾರ್ದನ್ ರೆಡ್ಡಿ ದಂಪತಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಿಬಿಐ ವಿಶೇಷ ಕೋರ್ಟ್ ಆದೇಶ ನೀಡಿತ್ತು. ಈ ಬಗ್ಗೆ ಧರ್ಮಸ್ಥಳದಲ್ಲಿ ಪ್ರತಿಕ್ರಿಯಿದ ಜನಾರ್ದನ್ ರೆಡ್ಡಿ ಅವರು, ನನ್ನ 150 ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು. ಅದರಲ್ಲಿ 80ಕ್ಕೂ ಹೆಚ್ಚು ಆಸ್ತಿಗಳನ್ನು ಕೋರ್ಟ್ ನಿನ್ನೆ ಬಿಡುಗಡೆ ಮಾಡಿದೆ. ಉಳಿದ 72 ಆಸ್ತಿಗಳು ಕೇಸ್ ಇತ್ಯರ್ಥ ಆದ ಮೇಲೆ ಪರಿಹಾರ ಆಗುತ್ತದೆ ಎಂದಿದ್ದರು.
ನನಗೆ ನ್ಯಾಯ ವ್ಯವಸ್ಥೆ ಮೇಲೆ ಮೊದಲಿನಿಂದಲೂ ನಂಬಿಕೆ ಇತ್ತು. ನಿನ್ನೆ 80ಕ್ಕೂ ಹೆಚ್ಚು ಆಸ್ತಿಗಳ ಬಿಡುಗಡೆ ಮಾಡಲಾಗಿದೆ. 2009ರ ಪೂರ್ವದ ಆಸ್ತಿಯನ್ನು ಸಿಬಿಐ ಮುಟ್ಟುಗೋಲು ಹಾಕಿತ್ತು, ಅದನ್ನೇ ಕೋರ್ಟ್ ಬಿಡುಗಡೆ ಮಾಡಿದೆ ಎಂದಿದ್ದರು. ಅಲ್ಲದೆ ಮೊಮ್ಮಗಳ ಅಕ್ಷರಾಭ್ಯಾಸಕ್ಕೆ ಶೃಂಗೇರಿಗೆ ಬಂದಿದ್ದೆ, ನಂತರ ಧರ್ಮಸ್ಥಳಕ್ಕೂ ಬಂದು ಮಂಜುನಾಥನ ಆಶೀರ್ವಾದ ಮತ್ತು ತಾಯಿಯ ಆಶೀರ್ವಾದ ಪಡೆದಿದ್ದೇನೆ ಎಂದಿದ್ದರು.
ನಾನು ನ್ಯಾಯವಾಗಿ ಬದುಕಿದ್ದೇನೆ
ನಾನು ನ್ಯಾಯವಾಗಿ ಬದುಕಿದ್ದೇನೆ, ಹಾಗಾಗಿ ಮಂಜುನಾಥ ನ್ಯಾಯ ಕೊಡುತ್ತಾನೆ. ಆರು ವರ್ಷಗಳಿಂದ ಧರ್ಮಸ್ಥಳಕ್ಕೆ ಬರಲು ಆಗಿರಲಿಲ್ಲ, ಈಗ ಕುಟುಂಬ ಸಮೇತ ಬಂದಿದ್ದೇನೆ ಎಂದು ಶಾಸಕ ಜನಾರ್ದನ ರೆಡ್ಡಿ ಹೇಳಿದ್ದರು.
ಕುಟುಂಬ ಸಮೇತರಾಗಿ ಶೃಂಗೇರಿಗೆ ತೆರಳಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನ ಪಡೆದು ಪುನೀತನಾದೆ. ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದು ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನ ಅಕ್ಷರಾಭ್ಯಾಸ ಮಾಡಿಸಿದ್ದು ವಿಶೇಷವಾಗಿತ್ತು. ಶೃಂಗೇರಿಯ ನರಸಿಂಹವನದಲ್ಲಿ ಸನ್ನಿಧಾನ ಶ್ರೀ ಜಗದ್ಗುರು ವಿಧುಶೇಖರ ಭಾರತಿಗಳ ದರ್ಶನ ಪಡೆದು, ಹಲವಾರು ವಿಚಾರಗಳನ್ನು ಚರ್ಚಿಸಿ ಆಶೀರ್ವಾದ ಪಡೆದಿದ್ದು ನನ್ನ ಪೂರ್ವಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ ಎಂದಿದ್ದರು.
ಹಾಗೆಯೇ ಶೃಂಗೇರಿ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಗೌರಿ ಶಂಕರ್ ಅವರನ್ನು ಈ ಸಂದರ್ಭದಲ್ಲಿ ನೆನೆಯುತ್ತಿದ್ದೇನೆ. ಶೃಂಗೇರಿ ಮಠದ ಬಳ್ಳಾರಿ ಶಾಖೆಯ ಮಠಾಧಿಕಾರಿ ಶ್ರೀ ಬಿ.ಕೆ.ಬಿ.ಎನ್.ಮೂರ್ತಿ ಹಾಗೂ ಶ್ರೀ ಮೋಹನ್ ಶಾಸ್ತ್ರಿ ಅವರ ಸಹಕಾರಕ್ಕಾಗಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ. ಎಂದಿನಂತೆ ನಿಮ್ಮೆಲ್ಲರ ಪ್ರೀತಿ, ವಿಶ್ವಾಸ ಆಶೀರ್ವಾದ ಸದಾ ನನ್ನ ಕುಟುಂಬದ ಮೇಲಿರಲಿ ಎಂದು ಪ್ರಾರ್ಥಿಸುತ್ತಿದ್ದೇನೆ ಎಂದಿದ್ದರು.
English summary
KL Rahul Visits Sri Kshetra Dharmasthala Manjunatha Swamy Temple today,
Story first published: Sunday, June 25, 2023, 12:24 [IST]