ನಿವೃತ್ತಿ ದಿನಾಂಕ ಬಹಿರಂಗಪಡಿಸಿದ ವಿರಾಟ್ ಕೊಹ್ಲಿ; 16 ವರ್ಷಗಳ ನಂತರ ಈ ಐಸಿಸಿ ಟ್ರೋಫಿ ಗೆದ್ದುಕೊಡಲು ಕಾತರ

ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಯಾವಾಗ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಗೊಂದಲಕ್ಕೆ ತೆರೆ ಎಳೆದಿದ್ದಾರೆ. ಏಪ್ರಿಲ್ 2ರಂದು ಗುಜರಾತ್ ಟೈಟಾನ್ಸ್-ಆರ್​ಸಿಬಿ ನಡುವಿನ ಐಪಿಎಲ್ ಪಂದ್ಯಕ್ಕೂ ಮುನ್ನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವಿರಾಟ್, ತನ್ನ ನಿವೃತ್ತಿಯ ದಿನಾಂಕ ಖಚಿತಪಡಿಸಿದ್ದಾರೆ. ತನ್ನ ಭವಿಷ್ಯದ ಯೋಜನೆಗಳನ್ನು ಸ್ಪಷ್ಟಪಡಿಸಿರುವ ವಿರಾಟ್ ಕೊಹ್ಲಿ, 2027ರಲ್ಲಿ ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ನಡೆಯುವ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕೊನೆಯದಾಗಿ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. 16 ವರ್ಷಗಳ (2027) ನಂತರ ಏಕದಿನ ವಿಶ್ವಕಪ್ ಗೆದ್ದುಕೊಡಲು ಕಾತರರಾಗಿದ್ದಾರೆ.

Source link