ಪಹಲ್ಗಾಮ್ ಉಗ್ರ ದಾಳಿ ಬೆನ್ನಲ್ಲೇ ಭಾರತದಲ್ಲಿ ಪಿಎಸ್ಎಲ್ ಪ್ರಸಾರ ನಿಲ್ಲಿಸಿದ ಫ್ಯಾನ್‌ಕೋಡ್;‌ ಎಲ್ಲಾ ಕಂಟೆಂಟ್‌ ಡಿಲೀಟ್

ಭಾರತದಲ್ಲಿ ಐಪಿಎಲ್‌ ಟೂರ್ನಿ ನಡೆಯುತ್ತಿರುವಾಗಲೇ ಪಾಕಿಸ್ತಾನದಲ್ಲಿ ಐಪಿಎಲ್‌ನಂತೆಯೇ ಪಿಎಸ್‌ಎಲ್‌ ಟೂರ್ನಿ ನಡೆಯುತ್ತಿದೆ. ಭಾರತದಲ್ಲಿ ಈ ಟೂರ್ನಿಯು ಫ್ಯಾನ್‌ಕೋಡ್ ಮೂಲಕ ಲೈವ್‌ ಸ್ಟ್ರೀಮಿಂಗ್‌ ಆಗುತ್ತಿತ್ತು. ಇದೀಗ ಭಾರತೀಯ ಲೈವ್ ಸ್ಟ್ರೀಮಿಂಗ್ ವೇದಿಕೆಯು, ಮುಂಬರುವ ಪಾಕಿಸ್ತಾನ ಸೂಪರ್ ಲೀಗ್ ಪಂದ್ಯಗಳನ್ನು ಪ್ರಸಾರ ಮಾಡುವುದಿಲ್ಲ. ಇದಕ್ಕೆ ಕಾರಣ ಪಹಲ್ಗಾಮ್‌ ಭಯೋತ್ಪಾದಕ ದಾಳಿ. ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗಷ್ಟೇ 26 ಜನರನ್ನು ಬಲಿ ತೆಗೆದುಕೊಂಡ ಮಾರಣಾಂತಿಕ ಉಗ್ರ ದಾಳಿಯ ಬೆನ್ನಲ್ಲೇ, ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

Source link