ಪಾಕಿಸ್ತಾನದ (Pakistan) ವಿರುದ್ಧ ಹ್ಯಾಟ್ರಿಕ್ ಗೋಲು ದಾಖಲಿಸುವ ಮೂಲಕ ಪರಾಕ್ರಮ ಮರೆದಿರುವ ಭಾರತದ ಫುಟ್ಬಾಲ್ ದಂತಕಥೆ ಸುನಿಲ್ ಛೆಟ್ರಿ (Sunil Chhetri), ಚರಿತ್ರೆ ಸೃಷ್ಟಿಸಿದ್ದಾರೆ. ಸಾರ್ವಕಾಲಿಕ ಅತಿ ಹೆಚ್ಚು ಅಂತಾರಾಷ್ಟ್ರೀಯ ಗೋಲು ಗಳಿಸಿದ 4ನೇ ಆಟಗಾರ ಎಂಬ ದಾಖಲೆ ಬರೆದಿದ್ದಾರೆ. ತಮ್ಮ ಅಸಾಧಾರಣ ಪ್ರದರ್ಶನದ ಮೂಲಕ ದಿಗ್ಗಜರ ಸಾಲಿಗೆ ಸೇರಿದ್ದು, ಕ್ರಿಸ್ಟಿಯಾನೋ ರೊನಾಲ್ಡೋ (Cristiano Ronaldo), ಅಲಿ ದಾಯಿ (Ali Daei) ಲಿಯೊನೆಲ್ ಮೆಸ್ಸಿ (Lionel Messi) ನಂತರ ಸ್ಥಾನ ಪಡೆದಿದ್ದಾರೆ.