ಪಾಟ್ನಾದಲ್ಲಿ ಪ್ರತಿಪಕ್ಷಗಳ ಫೋಟೋ ಸೆಷನ್; 2024 ರಲ್ಲಿಯೂ ನರೇಂದ್ರ ಮೋದಿಯವರೇ ಪ್ರಧಾನಿ! ಅಮಿತ್ ಶಾ ವಿಶ್ವಾಸ | Amit Shah says Modi will return as PM in 2024 with over 300 seats

India

oi-Reshma P

|

Google Oneindia Kannada News

ನವದೆಹಲಿ, ಜೂನ್‌ 23: ನರೇಂದ್ರ ಮೋದಿಯವರು ಮತ್ತೊಮ್ಮೆ ದೇಶದ ಪ್ರಧಾನಿಯಾಗುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸವನ್ನ ವ್ಯಕ್ತಪಸಿದ್ದಾರೆ. ಬಿಜೆಪಿಯ 2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದ್ದಾರೆ.

2024ರಲ್ಲಿ ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ ಮತ್ತು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಇಡೀ ದೇಶವು ಸಿದ್ಧವಾಗಿದೆ ಎಂದು ಹೇಳಿದ ಅವರು, ಪಾಟ್ನಾದಲ್ಲಿ ಪ್ರತಿಪಕ್ಷಗಳ ಸಭೆಯನ್ನು ‘ಫೋಟೋ ಸೆಷನ್’ ಎಂದು ವ್ಯಂಗ್ಯವಾಡಿದ್ದಾರೆ.
2024 ರ ಲೋಕಸಭಾ ಚುನಾವಣೆಯಲ್ಲಿ 300 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದಾರೆ. ಇಂದು ಪಾಟ್ನಾದಲ್ಲಿ ಫೋಟೋ ಸೆಷನ್ ನಡೆಯುತ್ತಿದೆ. ಪ್ರತಿಪಕ್ಷಗಳು ಬಿಜೆಪಿ, ಪ್ರಧಾನಿ ಮೋದಿ ಮತ್ತು ಎನ್‌ಡಿಎಗೆ ಸವಾಲು ಹಾಕಲು ಬಯಸುತ್ತಾರೆ. ಎಷ್ಟೇ ಪ್ರಯತ್ನಿಸಿದರೂ ಪ್ರತಿಪಕ್ಷಗಳು ಒಂದಾಗಲು ಸಾಧ್ಯವಾಗುತ್ತಿಲ್ಲ. ಮತ್ತು ಅವರು ಒಗ್ಗೂಡಿದರೂ, ದೇಶದ ಜನರು 300 ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗುವುದನ್ನು ಖಚಿತ ಎಂದು ಅಮಿತ್‌ ಶಾ ಹೇಳಿದ್ದಾರೆ.

Amit Shah says Modi will return as PM in 2024 with over 300 seats

ಇನ್ನೂ 2024 ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಜಂಟಿ ಕಾರ್ಯತಂತ್ರವನ್ನು ರೂಪಿಸಲು 15 ಕ್ಕೂ ಹೆಚ್ಚು ವಿರೋಧ ಪಕ್ಷಗಳು ಇಂದು ಪಾಟ್ನಾದಲ್ಲಿ ಸಭೆ ನಡೆಸುತ್ತಿವೆ ಎಂದು ವಿಪಕ್ಷಗಳ ವಿರುದ್ದ ಕಿಡಿಕಾರಿದರು. ಹಿಂದಿನ ಯುಪಿಎ ಸರಕಾರ 12 ಲಕ್ಷ ಕೋಟಿ ರೂ.ಗಳ ಹಗರಣಗಳಲ್ಲಿ ಭಾಗಿಯಾಗಿದ್ದರೆ, ಪ್ರಧಾನಿ ನರೇಂದ್ರ ಮೋದಿ ಸರಕಾರ ದೇಶದಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಭದ್ರ ಬುನಾದಿ ಹಾಕಿದೆ ಎಂದು ತಿಳಿಸಿದರು.

ಮೋದಿ ನೇತೃತ್ವದಲ್ಲಿ ಭಯೋತ್ಪಾದನೆಗೆ ಕಡಿವಾಣ ಹಾಕಲಾಗಿದ್ದು, ಈ ಹಿಂದೆ ಎನ್‌ಸಿ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಅಧಿಕಾರದಲ್ಲಿದ್ದ ಕಾರಣ 42,000 ಜನರ ಸಾವಿಗೆ ಯಾರು ಹೊಣೆ ಎಂದು ಗೃಹ ಸಚಿವರು ಪ್ರಶ್ನಿಸಿದರು.

ಈ ಬಾರಿ 2024 ರ ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವನ್ನು ಎದುರಿಸಲು ಒಗ್ಗಟ್ಟಿನ ಪ್ರತಿಪಕ್ಷಗಳ ಮೈತ್ರಿಕೂಟ ರೂಪಿಸುವ ಉದ್ದೇಶದಿಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಯೋಜಿಸಿದ್ದ ವಿರೋಧ ಪಕ್ಷದ ನಾಯಕರ ಸಭೆ ಶುಕ್ರವಾರ ಪಾಟ್ನಾದಲ್ಲಿ ನಡೆಯುತ್ತಿದ್ದು, 15ಕ್ಕೂ ಹೆಚ್ಚು ವಿರೋಧ ಪಕ್ಷಗಳು ಭಾಗವಹಿಸಿದ್ದು, ಪ್ರತಿಪಕ್ಷಗಳ ಸಭೆಯನ್ನ ಅಮಿತ್‌ ಶಾ ಫೋಟೋ ಸೆಷನ್‌ ಎಂದು ವ್ಯಂಗ್ಯವಾಡಿದ್ದಾರೆ.

English summary

Lok Sabha Elections 2024; Union Home Minister Amit Shah Said that Modi will return as PM in 2024 with over 300 seats,

Story first published: Friday, June 23, 2023, 17:18 [IST]

Source link