ಬೆಂಗಳೂರು; ಶಂಕಿತ ಉಗ್ರರು 7 ದಿನಗಳ ಕಾಲ ಸಿಸಿಬಿ ವಶಕ್ಕೆ | Seven Days CCB Custody For Five Suspected Terrorists Arrested In Bengaluru

Bengaluru

oi-Gururaj S

|

Google Oneindia Kannada News

ಬೆಂಗಳೂರು, ಜುಲೈ 19; ಬೆಂಗಳೂರು ನಗರದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಐವರು ಶಂಕಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಸಿಸಿಬಿ ವಶಕ್ಕೆ ಕೋರ್ಟ್‌ ನೀಡಿದೆ. ಬೆಂಗಳೂರಿನಲ್ಲಿ ಐವರು ಶಂಕಿತ ಉಗ್ರರನ್ನು ಬಂಧಿಸಿರುವ ಪೊಲೀಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ.

ಬುಧವಾರ ಮಧ್ಯಾಹ್ನ ಬಿಗಿ ಬಂದೋಬಸ್ತ್‌ನಲ್ಲಿ ಬಂಧಿಸಲಾದ ಶಂಕಿತ ಉಗ್ರರಾದ ಸುಹೇಲ್,​ ಉಮರ್, ಜಾಹಿದ್​, ಮುದಾಸಿರ್ ಮತ್ತು​ಫೈಜರ್​ನನ್ನು ಎನ್‌ಐಎ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು.

Terrorists Arrested In Bengaluru

ಸಿಸಿಬಿ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಶಂಕಿತ ಉಗ್ರರನ್ನು ವಶಕ್ಕೆ ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದರು. ಪೊಲೀಸರು ಮನವಿ ಪರಿಗಣಿಸಿದ ಕೋರ್ಟ್ ಐವರು ಶಂಕಿತ ಉಗ್ರರನ್ನು 7 ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿತು. ರಹಸ್ಯ ಸ್ಥಳದಲ್ಲಿ ಪೊಲೀಸರು ವಿಚಾರಣೆ ಮುಂದುವರೆಸುವ ನಿರೀಕ್ಷೆ ಇದೆ.

English summary

Bengaluru CCB police arrested 5 suspected terrorists. NIA special court ordered 7 days CCB custody for accused.

Story first published: Wednesday, July 19, 2023, 17:04 [IST]

Source link