ಬೆಳ್ಳಂಬೆಳಗ್ಗೆ ಚಿಕ್ಕಮಗಳೂರು ಜಿಲ್ಲೆ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕನ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿ | Lokayukta Raid on Chikkamagaluru district building center project manager’s house

Chikkamagaluru

lekhaka-Veeresha H G

By ಚಿಕ್ಕಮಗಳೂರು ಪ್ರತಿನಿಧಿ

|

Google Oneindia Kannada News

ಚಿಕ್ಕಮಗಳೂರು, ಜೂನ್‌, 28: ಅಕ್ರಮ ಆಸ್ತಿ ಸಂಪಾದನೆ ಆರೋಪ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಅಕ್ರಮ ಆಸ್ತಿ ಸಂಪಾದನೆ ಆರೋಪದ ಮೇರೆಗೆ ಚಿಕ್ಕಮಗಳೂರಿನ ನಿರ್ಮಿತಿ ಕೇಂದ್ರದ ಯೋಜನಾ ವ್ಯವಸ್ಥಾಪಕರಾದ ಗಂಗಾಧರ್ ಮನೆ ಸೇರಿ ಮೂರು ಕಡೆಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರಿನ ಜಯನಗರ ಬಡಾವಣೆಯಲ್ಲಿರುವ ಮನೆ, ರಾಮನಹಳ್ಳಿಯಲ್ಲಿರುವ ಪೆಟ್ರೋಲ್‌ ಬಂಕ್‌, ನಿರ್ಮಾಣ ಹಂತದ ರೆಸಾರ್ಟ್ ಹಾಗೂ ಗಂಗಾಧರ್ ಕೆಲಸ ನಿರ್ವಹಿಸುತ್ತಿರುವ ನಿರ್ಮಿತಿ ಕೇಂದ್ರದ ಕಚೇರಿ ಮೇಲೆ ಏಕಕಾಲದಲ್ಲಿ ದಾಳಿ ಮಾಡಿದ್ದಾರೆ.

Lokayukta Raid on Chikkamagaluru district building center project managers house

ಇನ್ನು ಡಿವೈಎಸ್ಪಿ ತಿರುಮಲೇಶ್ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಅಧಿಕಾರಿಗಳ ತಂಡ ಗಂಗಾಧರ್‌ಗೆ ಸಂಬಂಧಿಸಿದ ಕಚೇರಿ, ಮನೆ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿ ದಾಖಲೆ ಪರಿಶೀಲನೆ ಮಾಡಿದೆ ಎಂದು ತಿಳಿದುಬಂದಿದೆ.

ನಗರಸಭೆಯ ಕಂದಾಯ ನಿರೀಕ್ಷಕನಿಗೆ ಲೋಕಾಯುಕ್ತ ಶಾಕ್‌

ಇ-ಸ್ವತ್ತು ಮಾಡಿಕೊಡಲು 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ನಗರಸಭೆ ಆರ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಮಂಗಳವಾರ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರ ನಗರಸಭೆಯ ಕಂದಾಯ ನಿರೀಕ್ಷಕ ನಾರಾಯಣ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಅಧಿಕಾರಿ ಆಗಿದ್ದಾರೆ. ಇವರು ಮಾದೇಶ್ ಎಂಬುವವರ ನಿವೇಶನದ ಇ-ಸ್ವತ್ತು ಮಾಡಿಕೊಡಲು 1 ಲಕ್ಷ ರೂಪಾಯಿ ಬೇಡಿಕೆ ಇಟ್ಟಿದ್ದರು‌.

Lokayukta Raid on Chikkamagaluru district building center project managers house

ಮಾದೇಶ್ ಬಳಿ 20 ಸಾವಿರ ರೂಪಾಯಿ ಹಣ ಪಡೆಯುವಾಗ ಲೋಕಾಯುಕ್ತ ಪೊಲೀಸರು ನಾರಾಯಣ್‌ನನ್ನು ರೆಡ್ ಹ್ಯಾಂಡಾಗಿ ಅವರನ್ನು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ ಎಂದು ತಿಳಿದುಬಂದಿತ್ತು.

English summary

Lokayukta Raid on district building center project manager Gangadhar’s house in Chikkamagaluru.

Story first published: Wednesday, June 28, 2023, 9:16 [IST]

Source link