ಭಾರತದ ಜುಲೈ 30ರ ಸಂಪೂರ್ಣ ವೇಳಾಪಟ್ಟಿ, 2ನೇ ಪದಕದ ನಿರೀಕ್ಷೆ ಹೆಚ್ಚಿಸಿದ ಮನು ಭಾಕರ್-india full schedule and fixtures with medal events on july 30 tuesday at paris olympics 2024 manu bhaker air pistol jra ,ಕ್ರೀಡೆ ಸುದ್ದಿ

ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಪದಕ ಗೆದ್ದುಕೊಟ್ಟ ಪದಕದ ಬೆಡಗಿ ಮನು ಭಾಕರ್, ಎರಡನೇ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. ಈಗಾಗಲೇ ಪ್ಯಾರಿಸ್‌ನಲ್ಲಿ ಮೂರು ದಿನಗಳ ಕ್ರೀಡೆಗಳು ಮುಗಿದಿದ್ದು, ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ನಾಲ್ಕನೇ ದಿನವಾದ ಜುಲೈ 30ರ ಮಂಗಳವಾರ ಭಾರತಕ್ಕೆ ಮತ್ತೆ ಪದಕ ಗೆಲ್ಲುವ ಅವಕಾಶವಿದೆ. ಈಗಾಗಲೇ ವನಿತೆಯರ 10 ಮೀಟರ್ ಏರ್‌ ಪಿಸ್ತೂಲ್‌ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ಪ್ಯಾರಿಸ್‌ನಲ್ಲಿ ಪದಕಬೇಟೆಯ ಶುಭಾರಂಭ ಮಾಡಿದ ಮನು, ಇದೀಗ ಏರ್ ಪಿಸ್ತೂಲ್ ಮಿಶ್ರ ತಂಡ ಈವೆಂಟ್‌ನಲ್ಲಿ ಕಂಚಿನ ಪದಕದ ಪಂದ್ಯದಲ್ಲಿ ಆಡಲಿದ್ದಾರೆ. ತಮ್ಮ ಪಾಲುದಾರ ಸರಬ್ಜೋತ್ ಸಿಂಗ್ ಅವರೊಂದಿಗೆ ಪದಕ ಗೆಲ್ಲುವ ನಿರೀಕ್ಷೆ ಮೂಡಿಸಿದ್ದಾರೆ. ಸೋಮವಾರ ನಡೆದ ಪಂದ್ಯದಲ್ಲಿ ಮನು ಮತ್ತು ಸರಬ್ಜೋತ್ 580 ಅಂಕಗಳೊಂದಿಗೆ ಮೂರನೇ ಸ್ಥಾನ ಗಳಿಸಿದ್ದರು. ಹೀಗಾಗಿ ಕಂಚಿನ ಪದಕ ಸುತ್ತಿನಲ್ಲಿ ಮಂಗಳವಾರ ದಕ್ಷಿಣ ಕೊರಿಯಾವನ್ನು ಎದುರಿಸಲಿದ್ದಾರೆ.

Source link