Mangaluru
lekhaka-Kishan Kumar

ಮಂಗಳೂರು: ಮಂಗಳೂರಿನಲ್ಲಿ ನಡೆದ ಎರಡು ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.
ಬಾಲು ಅತ್ತಾವರ, ಗಣೇಶ್ ಅತ್ತಾವರ, ಜಯಪ್ರಶಾಂತ್ ಶಕ್ತಿನಗರ ಎಂಬ ಮೂವರು ಭಜರಂಗದಳ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ನೀಡಲಾಗಿದೆ.

ನಗರದ ಸುಲ್ತಾನ್ ಜ್ಯುವೆಲರಿ ಹಾಗೂ ಹೋಳಿ ಆಚರಣೆ ವೇಳೆ ನಡೆದ ನೈತಿಕ ಪೊಲೀಸ್ಗಿರಿಯಲ್ಲಿ ಭಾಗಿಯಾಗಿದ್ದ ಭಜರಂಗದಳದ ಮೂವರನ್ನು ಗಡಿಪಾರು ಮಾಡಲು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆ ನಿರ್ಧರಿಸಿದೆ. ಇದೀಗ ಈ ಪ್ರಕ್ರಿಯೆ ಆರಂಭವಾಗಿದೆ. ಹೀಗಾಗಿ ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು? ಎಂದು ಕಾರಣ ಕೇಳಿ ನೋಟಿಸ್ ನೀಡಿದೆ. ಇಂದು ಮೂವರು ಬಜರಂಗದಳ ಕಾರ್ಯಕರ್ತರಿಗೆ ಕಾನೂನು ಸುವ್ಯವಸ್ಥೆ ಖಾತ್ರಿ ಪಡಿಸಲು ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ಬಳಿಕ ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡಿಪಾರು ಮಾಡುವ ಸಾಧ್ಯತೆ ಇದೆ. ಹೀಗಾಗಿ ಸ್ಥಳೀಯ ಠಾಣೆಗಳ ಇನ್ಸ್ಪೆಕ್ಟರ್ಗಳಿಂದ ಗಡಿಪಾರಿಗೆ ವರದಿಯನ್ನು ಕೇಳಲಾಗಿದೆ. ಈ ವಿಚಾರವಾಗಿ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾತನಾಡಿ, ನಮ್ಮ ನಗರದಲ್ಲಿ ಪದೇ ಪದೇ ಕ್ರೈಂನಲ್ಲಿ ಭಾಗಿಯಾದವರ ಮೇಲೆ ಕ್ರಮ ಆಗಿದೆ. ಮತ್ತೆ ಮತ್ತೆ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸ ಆಗುತ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನುವುದು ನಮಗೆ ಬೇಡ. ಮೂವರು ಮಾತ್ರ ಅಲ್ಲ, ಅದಕ್ಕೂ ಹೆಚ್ಚು ಜನರಿಗೆ ನೋಟಿಸ್ ನೀಡಲಾಗಿದೆ ಎಂದರು.
ನೈತಿಕ ಪೊಲೀಸ್‌ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನು ಗಡಿಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟಿಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ. ರೌಡಿಶೀಟ್ ತೆರೆಯೋದು ಅಥವಾ ಗೂಂಡಾ ಕಾಯ್ದೆ ಹಾಕುವ ಕೆಲಸವೂ ಆಗುತ್ತಿದೆ. ನಿರಂತರ ಸಮಾಜ ವಿರೋಧಿ ಚಟುವಟಿಕೆಗಳನ್ನು ನಡೆಸುವರನ್ನು ಗುರುತಿಸಿದ್ದೇವೆ ಎಂದು ತಿಳಿಸಿದರು.
English summary
Moral policing Case: Exile notice for 3 Bajrang Dal workers in Mangaluru, here see details,
Story first published: Friday, July 21, 2023, 15:21 [IST]