India
oi-Mamatha M

ನವದೆಹಲಿ, ಜುಲೈ. 21: ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳ ಕುರಿತು ಮಣಿಪುರದ ಅಧಿಕಾರಿಗಳಿಗೆ ಕಳೆದ ಮೂರು ತಿಂಗಳಲ್ಲಿ ಮೂರು ಬಾರಿ ಸಂಪರ್ಕಿಸಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ರೇಖಾ ಶರ್ಮಾ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.
ಜನಾಂಗೀಯ ಹಿಂಸಾಚಾರ ಪೀಡಿತ ಈಶಾನ್ಯ ರಾಜ್ಯದಲ್ಲಿ ಮೇ 4 ರಂದು ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆಯ ಬಗ್ಗೆ ಮಹಿಳಾ ಆಯೋಗವು ಜೂನ್ 12 ರಂದು ದೂರು ಸ್ವೀಕರಿಸಿದೆ ಆದರೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಧ್ಯಮಗಳ ವರದಿಗಳ ಬೆನ್ನಲ್ಲೇ ಆರೋಪಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಮೇ 4 ರ ಅಮಾನವೀಯ ವಿಡಿಯೋ ಜುಲೈ 19 ರಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಇದಕ್ಕೆ ದೇಶಾದ್ಯಂತ ಖಂಡನೆ ವ್ಯಕ್ತವಾಗಿದೆ. ಆದರೆ, ಘಟನೆಯ ಯಾವುದೇ ವರದಿಯನ್ನು ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ ಸ್ವೀಕರಿಸಲಿಲ್ಲ ಎಂದು ಹೇಳಿದ್ದಾರೆ. ಆದರೂ, ಎನ್‌ಸಿಡಬ್ಲ್ಯೂ ಮುಖ್ಯಸ್ಥರು ಮಹಿಳೆಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಇತರ ದೂರುಗಳನ್ನು ಸ್ವೀಕರಿಸಿದ್ದು, ಮತ್ತು ಅದಕ್ಕಾಗಿ ಅವರು ಮಣಿಪುರದ ಅಧಿಕಾರಿಗಳಿಗೆ ಮೂರು ಬಾರಿ ಸಂಪರ್ಕಿಸಿದರೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದ್ದಾರೆ.
Manipur: ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ಕೇಸ್: ದೂರು ನಿರ್ಲಕ್ಷಿಸಿದ್ದ ರಾಷ್ಟ್ರೀಯ ಮಹಿಳಾ ಆಯೋಗ!
ಮಹಿಳೆಯರ ಸಮಸ್ಯೆಗಳಿಗೆ ಸಂಬಂಧಿಸಿದಂತೆ ರಾಜ್ಯದ ಅಧಿಕಾರಿಗಳಿಗೆ ಕಳುಹಿಸಲಾದ ಪತ್ರಗಳನ್ನು ಸಹ ಹಂಚಿಕೊಂಡಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯದ ಘಟನೆಗಳ ದೂರುಗಳ ಕುರಿತು ಎನ್‌ಸಿಡಬ್ಲ್ಯು ಅಧ್ಯಕ್ಷೆ ರೇಖಾ ಶರ್ಮಾ ಅಧಿಕಾರಿಗಳಿಗೆ ಪತ್ರ ಬರೆದಿದ್ದರು.

“ನಾವು ಸತ್ಯಾಸತ್ಯತೆಯನ್ನು ಪರಿಶೀಲಿಸಬೇಕಾಗಿತ್ತು. ಮತ್ತು ಈ ದೂರುಗಳು ಮಣಿಪುರದವರಲ್ಲ, ಭಾರತದಿಂದ ಕೂಡ ಬಂದಿರಲಿಲ್ಲ. ನಾವು ಅಧಿಕಾರಿಗಳನ್ನು ಸಂಪರ್ಕಿಸಿದ್ದೇವೆ ಆದರೆ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ನಿನ್ನೆ ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವೀಡಿಯೊ ವೈರಲ್ ಆದಾಗ ನಾವು ಸ್ವಯಂ ಪ್ರೇರಿತವಾಗಿ ಗಮನಹರಿಸಿದ್ದೇವೆ” ಎಂದು ರೇಖಾ ಶರ್ಮಾ ಹೇಳಿದ್ದಾರೆ.
ಮಹಿಳಾ ಆಯೋಗದಿಂದ ಮಣಿಪುರದ ಅಧಿಕಾರಿಗಳಿಗೆ ಮೇ 18, ಮೇ 29 ಮತ್ತು ಜೂನ್ 19 ರಂದು ಪತ್ರ ಬರೆಯಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೀಡಿಯೊ ಕಾಣಿಸಿಕೊಂಡ ನಂತರ ಶುಕ್ರವಾರ ನಡೆದ ಘಟನೆಯ ಬಗ್ಗೆ ಸ್ವಯಂ ಪ್ರೇರಿತವಾಗಿ ತಿಳಿದುಕೊಂಡಿದ್ದೇನೆ ಮತ್ತು ಈ ವಿಷಯದ ಬಗ್ಗೆ ಅಧಿಕಾರಿಗಳಿಂದ ವಿವರಣೆಯನ್ನು ಕೇಳಿದ್ದೇನೆ ಎಂದು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯು) ಅಧ್ಯಕ್ಷೆ ಹೇಳಿದ್ದಾರೆ.

ಮೇ 4 ರಂದು ಮಣಿಪುರದ ಬೆಟ್ಟಗಳಲ್ಲಿ ಹಿಂಸಾಚಾರ ಆರಂಭವಾಗಿದ್ದು, ಬುಧವಾರದಂದು ಒಂದು ಸಮುದಾಯದ ಇಬ್ಬರು ಮಹಿಳೆಯರನ್ನು ಇನ್ನೊಂದು ಸಮುದಾಯದ ಪುರುಷರ ಗುಂಪು ಬೆತ್ತಲೆಯಾಗಿ ಮೆರವಣಿಗೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ರಾಜಕೀಯ ನಾಯಕರು ಸೇರಿದಂತೆ ಗಣ್ಯರು ಘಟನೆಯನ್ನು ಖಂಡಿಸಿದ್ದಾರೆ.
English summary
Manipur viral video: No response from state authorities and cops despite reaching out thrice says National Commission for Women (NCW) Chairperson Rekha Sharma. know more.
Story first published: Friday, July 21, 2023, 15:02 [IST]