ಮಣಿಪುರ ಹಿಂಸಾಚಾರ ಕೊನೆಗೊಳಿಸಿ ಮೋದಿ: ಮೀರಾಬಾಯಿ ಚಾನು ಉಮ್ಮಳಿಕೆ | Mirabai Chanu appeals to prime minister narendra Modi to End the violence in Manipur

India

oi-Punith BU

|

Google Oneindia Kannada News

ನವದೆಹಲಿ, ಜುಲೈ 18: ಒಲಿಂಪಿಕ್ ಬೆಳ್ಳಿ ಪದಕ ವಿಜೇತೆ ವೇಟ್‌ಲಿಫ್ಟರ್ ಮೀರಾಬಾಯಿ ಚಾನು ಸೋಮವಾರ ತಮ್ಮ ತವರು ರಾಜ್ಯ ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಸಂಘರ್ಷವನ್ನು ಆದಷ್ಟು ಬೇಗ ಕೊನೆಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.

ಮಣಿಪುರವು ಮೇ 3 ರಿಂದ ಮೇಟಿ ಮತ್ತು ಕುಕಿ ಸಮುದಾಯಗಳ ನಡುವೆ ಜನಾಂಗೀಯ ಘರ್ಷಣೆ ನಡೆಯುತ್ತಿದೆ. ಈ ಹಿಂಸಾಚಾರದಿಂದ ಇದುವರೆಗೆ 150 ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಪ್ರಸ್ತುತ ಯುಎಸ್‌ಎಯಲ್ಲಿ ತರಬೇತಿ ಪಡೆಯುತ್ತಿರುವ ಚಾನು, ಈಶಾನ್ಯ ರಾಜ್ಯದ ಕ್ರೀಡಾಪಟುಗಳು ತಮ್ಮ ರಾಜ್ಯದ ಪರಿಸ್ಥಿತಿಯಿಂದ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

Mirabai Chanu appeals to prime minister narendra Modi to End the violence in Manipur

ಮಣಿಪುರದ ಸಂಘರ್ಷವು ಮೂರು ತಿಂಗಳು ಪೂರ್ಣಗೊಳ್ಳಲಿದೆ ಆದರೆ ಶಾಂತಿ ಇನ್ನೂ ಮರಳಿಲ್ಲ. ಈ ಸಂಘರ್ಷದಿಂದಾಗಿ ಅನೇಕ ಆಟಗಾರರು ತರಬೇತಿ ಪಡೆಯಲು ಸಾಧ್ಯವಾಗುತ್ತಿಲ್ಲ. ಅಲ್ಲದೆ ಇದು ವಿದ್ಯಾರ್ಥಿಗಳ ಅಧ್ಯಯನಕ್ಕೆ ಅಡಚಣೆ ಉಂಟಾಗಿದೆ. ಹಿಂಸಾಚಾರದಿಂದ ಅನೇಕ ಜೀವಗಳು ಬಲಿಯಾಗಿದ್ದು, ಅನೇಕ ಮನೆಗಳು ಸುಟ್ಟು ಕರಕಲಾಗಿದೆ ಎಂದು ಚಾನು ತನ್ನ ಟ್ವಿಟ್ಟರ್‌ ಖಾತೆಯಲ್ಲಿ ಅಪ್‌ಲೋಡ್ ಮಾಡಿರುವ ವಿಡಿಯೋದಲ್ಲಿ ತಿಳಿಸಿದ್ದಾರೆ.

ಈ ಸಂಘರ್ಷವನ್ನು ಆದಷ್ಟು ಬೇಗ ಅಂತ್ಯಗೊಳಿಸಲು ಮತ್ತು ಮಣಿಪುರದ ಎಲ್ಲಾ ಜನರನ್ನು ಉಳಿಸಲು ಹಿಂದೆ ಇದ್ದ ರಾಜ್ಯ ಶಾಂತಿಯನ್ನು ಮರಳಿ ತರಲು ನಾನು ಪ್ರಧಾನಿ ಮತ್ತು ಗೃಹ ಸಚಿವರಿಗೆ ಮನವಿ ಮಾಡಲು ಬಯಸುತ್ತೇನೆ ಎಂದು ಅವರು ಕೋರಿಕೆ ವ್ಯಕ್ತಪಡಿಸಿದ್ದಾರೆ. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 49 ಕೆಜಿ ತೂಕದ ವಿಭಾಗದಲ್ಲಿ ಬೆಳ್ಳಿ ಪದಕ ಗೆದ್ದ ಚಾನು, ರಾಜ್ಯದಿಂದ ತಾನು ದೂರವಿದ್ದರೂ ತನ್ನ ತವರು ನೆಲದ ಪರಿಸ್ಥಿತಿಯ ಬಗ್ಗೆ ಯೋಚಿಸುವುದನ್ನು ಬಿಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಮುಂಬರುವ ವಿಶ್ವ ಚಾಂಪಿಯನ್‌ಶಿಪ್ ಮತ್ತು ಏಷ್ಯನ್ ಗೇಮ್ಸ್‌ಗೆ ತಯಾರಿ ನಡೆಸಲು ನಾನು ಪ್ರಸ್ತುತ ಯುಎಸ್‌ಎಯಲ್ಲಿ ತರಬೇತಿ ಪಡೆಯುತ್ತಿದ್ದರೂ ಮಣಿಪುರದಲ್ಲಿ ನನ್ನ ಮನೆ ಇದೆ. ನಾನು ಮಣಿಪುರದಲ್ಲಿ ಇಲ್ಲದಿದ್ದರೂ, ಈ ಸಂಘರ್ಷ ಯಾವಾಗ ಕೊನೆಗೊಳ್ಳುತ್ತದೆ ಎಂದು ನಾನು ಯಾವಾಗಲೂ ಯೋಚಿಸುತ್ತೇನೆ ಎಂದು ಅವರು ಹೇಳಿದರು.

ಪರಿಶಿಷ್ಟ ಪಂಗಡ (ಎಸ್‌ಟಿ) ಸ್ಥಾನಮಾನಕ್ಕಾಗಿ ಮೇಟಿ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಲು ಮಣಿಪುರ ಬೆಟ್ಟದ ಜಿಲ್ಲೆಗಳಲ್ಲಿ ‘ಬುಡಕಟ್ಟು ಒಗ್ಗಟ್ಟಿನ ಮೆರವಣಿಗೆ’ ಆಯೋಜಿಸಿದ ನಂತರ ಮೇ 3 ರಂದು ರಾಜ್ಯದಲ್ಲಿ ಜನಾಂಗೀಯ ಘರ್ಷಣೆಗಳು ನಡೆದವು. ಮಣಿಪುರದ ಜನಸಂಖ್ಯೆಯ ಸುಮಾರು 53 ಪ್ರತಿಶತದಷ್ಟು ಮೈಟಿಗಳು ಇಂಫಾಲ್ ಕಣಿವೆಯಲ್ಲಿ ವಾಸಿಸುತ್ತಿದ್ದಾರೆ. ಆದರೆ ನಾಗಾಗಳು ಮತ್ತು ಕುಕಿಗಳು ಸೇರಿದಂತೆ ಬುಡಕಟ್ಟು ಜನಾಂಗದವರು ಶೇಕಡಾ 40 ರಷ್ಟಿದ್ದಾರೆ ಮತ್ತು ಹೆಚ್ಚಾಗಿ ಗುಡ್ಡಗಾಡು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

English summary

Olympic silver medalist weightlifter Mirabai Chanu on Monday appealed to Prime Minister Narendra Modi to end the ongoing conflict between two communities in her home state of Manipur as soon as possible.

Story first published: Tuesday, July 18, 2023, 11:47 [IST]

Source link