India
oi-Mamatha M
ಮುಂಬೈ, ಜುಲೈ. 02: ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ‘ಡಬಲ್ ಇಂಜಿನ್’ ಸರ್ಕಾರವು ಈಗ ‘ಟ್ರಿಪಲ್ ಇಂಜಿನ್’ ಸರ್ಕಾರವನ್ನು ಸ್ವೀಕರಿಸಿದೆ’ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಭಾನುವಾರ ಹೇಳಿದ್ದಾರೆ. ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಅಜಿತ್ ಪವಾರ್ ಸರ್ಕಾರಕ್ಕೆ ಬೆಂಬಲ ಸೂಚಿಸಿದ್ದು ರಾಜ್ಯದ ನೂತನ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ ಮುಂಬೈನ ರಾಜಭವನದಿಂದ ಹೊರಬಂದ ನಂತರ ಮಹಾರಾಷ್ಟ್ರ ಸಿಎಂ ಅವರು ರಾಜ್ಯದ ಅಭಿವೃದ್ಧಿಗಾಗಿ ಅಜಿತ್ ಪವಾರ್ ಮತ್ತು ಅವರ ಪಕ್ಷದ ನಾಯಕರನ್ನು ಸ್ವಾಗತಿಸುವುದಾಗಿ ಹೇಳಿದರು. ಎನ್‌ಸಿಪಿ ನಾಯಕರ ಅನುಭವವು ರಾಜ್ಯವನ್ನು ಬಲಪಡಿಸಲು ಸಹಾಯ ಮಾಡುತ್ತದೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ಸಚಿವ ಸಂಪುಟದಲ್ಲಿ ಸ್ಥಾನ ಹಂಚಿಕೆ ಕುರಿತು ಮಾತನಾಡಿದ ಸಿಎಂ ಏಕನಾಥ್ ಶಿಂಧೆ, ಆ ಬಗ್ಗೆ ನಿರ್ಧರಿಸಲು ಸಾಕಷ್ಟು ಸಮಯವಿದೆ. ಈ ರಾಜ್ಯದಿಂದ ಲೋಕಸಭೆಯಲ್ಲಿ ನಾಲ್ಕು ಅಥವಾ ಐದು ಸ್ಥಾನಗಳನ್ನು ಪಡೆಯುವಲ್ಲಿ ಪ್ರತಿಪಕ್ಷಗಳು ಯಶಸ್ವಿಯಾದವು, ಈ ಬಾರಿ ಅಷ್ಟು ಸ್ಥಾನಗಳನ್ನು ಪಡೆಯಲು ಅವರು ಯಶಸ್ವಿಯಾಗುವುದಿಲ್ಲ ಎಂದು ವಿಪಕ್ಷಗಳಿಗೆ ಸವಾಲು ಹಾಕಿದ್ದಾರೆ.
#WATCH | Maharashtra CM Eknath Shinde says “Now we have 1 Chief Minister and 2 Deputy Chief Ministers. The double-engine government has now become triple engine. For the development of Maharashtra, I welcome Ajit Pawar and his leaders. Ajit Pawar’s experience will help strengthen… pic.twitter.com/B5ZFBDX7Yb
— ANI (@ANI) July 2, 2023
ಭಾನುವಾರ ಬೆಳಗಿನ ಜಾವದವರೆಗೂ ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಯಾವುದೇ ಸುನಾಮಿಯ ಮುನ್ಸೂಚನೆ ಇರಲಿಲ್ಲ. ಆದರೆ, ಹಠಾತ್ ಬೆಳವಣಿಗೆಯಲ್ಲಿ, ಅಜಿತ್ ಪವಾರ್ ಅವರು ತಮ್ಮ ಬೆಂಬಲಿಗರ ‘ಅಜಿತ್ ದಾದಾ, ಹಮ್ ತುಮ್ಹಾರೆ ಸಾಥ್ ಹೈ’ ಘೋಷಣೆಗಳ ಜೊತೆಗೆ ರಾಜ್ಯ ವಿಧಾನಸಭೆಯಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣವಚನ ಸ್ವೀಕರಿಸಿದರು.
ಪ್ರಮಾಣ ವಚನ ಸ್ವೀಕಾರ ಸಮಾರಂಭದ ಮೊದಲು, ಕೆಲವು ಎನ್‌ಸಿಪಿ ಶಾಸಕರು ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರ ‘ಏಕಪಕ್ಷೀಯ’ ನಿರ್ಧಾರದಿಂದ ಬೇಸರಗೊಂಡಿದ್ದಾರೆ ಎಂಬ ಸುಳಿವು ನೀಡಿದ್ದರಯ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಪಾಟ್ನಾದಲ್ಲಿ ಕಳೆದ ತಿಂಗಳು ನಡೆದ ಪ್ರತಿಪಕ್ಷಗಳ ಏಕತಾ ಸಭೆಯೊಂದಿಗೆ ವೇದಿಕೆ ಹಂಚಿಕೊಳ್ಳುವ ಮತ್ತು ಮೈತ್ರಿ ಮಾಡಿಕೊಳ್ಳುವ ‘ಏಕಪಕ್ಷೀಯ’ ನಿರ್ಧಾರದಿಂದ ಅಸಮಾಧಾನಗೊಂಡಿದ್ದಾರೆ ಎಂದು ಹೇಳಿದ್ದಾರೆ.
English summary
Ajit Pawar : Double engine government, which was being run under the leadership of PM Narendra Modi, has received a triple-engine government says Maharashtra chief minster Eknath Shinde after Ajit Pawar sworn. know more.
Story first published: Sunday, July 2, 2023, 16:54 [IST]