1961-62ರಲ್ಲಿ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ಹಮೀದ್, ತಮ್ಮ ವೃತ್ತಿಜೀವನದ ಆರಂಭದಲ್ಲಿತನ್ನ ಪ್ರತಿಭೆ ಜಗತ್ತಿನ ಮುಂದೆ ಅನಾವರಣಗೊಳಿಸಿದ್ದರು. ಹಮೀದ್ 1963ರಲ್ಲಿ ಪಾಕಿಸ್ತಾನ ಈಗಲ್ಸ್ ಪರ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದರು. ಅದೇ ವರ್ಷ ಕಾಮನ್ವೆಲ್ತ್ ತಂಡಕ್ಕೆ ಆಯ್ಕೆಯಾದರು. ತನ್ನ ಅದ್ಭುತ ಸಾಮರ್ಥ್ಯದ ಹೊರತಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಿದ್ದು ಒಂದೇ ಪಂದ್ಯ. 1964-65ರಲ್ಲಿ ಪಾಕಿಸ್ತಾನ ತಂಡದೊಂದಿಗೆ ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ಪ್ರವಾಸಕ್ಕೆ ಹೋಗಿದ್ದ ಹಮೀದ್, ಮೆಲ್ಬೋರ್ನ್ ಟೆಸ್ಟ್‌ನಲ್ಲಿ ಆಡುವ ಅವಕಾಶ ಪಡೆದಿದ್ದರು. ಇದು ಅವರ ಮೊದಲ ಮತ್ತು ಕೊನೆಯ ಟೆಸ್ಟ್ ಪಂದ್ಯ. ಒಂದು ವಿಕೆಟ್ ಮಾತ್ರ ಪಡೆದಿದ್ದರು. ಆದರೆ, ಆ ನಂತರ ಅವರಿಗೆ ಪಾಕಿಸ್ತಾನ ತಂಡದಲ್ಲಿ ಅವಕಾಶವೇ ಸಿಗಲಿಲ್ಲ.