India
oi-Ravindra Gangal

ನವದೆಹಲಿ, ಜುಲೈ 13: ಸ್ನಾತಕೋತ್ತರ ಪದವಿ ವಿಚಾರವಾಗಿ ಪ್ರಧಾನಿ ಮೋದಿ ಅವರನ್ನು ಗುರಿಯಾಗಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಮೋದಿಯವರ ವ್ಯಾಸಂಗದ ಕುರಿತು ಹಿರಿಯ ಪತ್ರಕರ್ತೆಯೊಬ್ಬರು ‘ಎಎನ್‌ಐ’ ಸಂಸ್ಥೆಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿದ್ದಾರೆ. ಇದು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
1981ರಲ್ಲಿ ಸ್ನಾತಕೋತ್ತರ ಪದವಿಯನ್ನು (ಎಂಎ) ವ್ಯಾಸಂಗ ಮಾಡುತ್ತಿದ್ದಾಗ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೊದಲ ಬಾರಿಗೆ ಭೇಟಿಯಾಗಿದ್ದೆ ಎಂದು ಹಿರಿಯ ಪತ್ರಕರ್ತೆ ಶೀಲಾ ಭಟ್ ಹೇಳಿದ್ದಾರೆ.

‘1981 ರಲ್ಲಿ ನರೇಂದ್ರ ಮೋದಿ ಅವರು ಎಂಎ ಮಾಡುತ್ತಿದ್ದರು. ಆಗ ನಾನು ಅವರನ್ನು ಮೊದಲ ಬಾರಿಗೆ ಭೇಟಿ ಮಾಡಿದ್ದೇನೆ. ಅವರ ಮಾರ್ಗದರ್ಶಕರಾಗಿದ್ದ ಪ್ರೊ. ಪ್ರವೀಣ್ ಶೇಠ್ ಅವರು ನನ್ನ ಮಾರ್ಗದರ್ಶಕರಾಗಿದ್ದರು. ಮೋದಿಯವರು ತುಂಬಾ ಅಧ್ಯಯನಶೀಲರಾಗಿದ್ದರು’ ಎಂದು ತಿಳಿಸಿದ್ದಾರೆ.
‘ಕೆಲ ಸಮಯದ ಹಿಂದೆ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯನ್ನು ಅನಕ್ಷರಸ್ಥ ಎಂದು ಕರೆದಿದ್ದರು. ಆಗ ನಾನು ಅವರಿಗೆ ಕರೆ ಮಾಡಿದೆ. ಈ ಕುರಿತು ಮಾತನಾಡಿದೆ. ಆದರೆ, ಅವರು ಮೌನವಾಗಿರಲು ನಿರ್ಧರಿಸಿದರು’ ಎಂದು ಹೇಳಿದ್ದಾರೆ.
ದಕ್ಷಿಣದಲ್ಲಿ ಕಮಲ ಅರಳಿಸಲು ಬಿಜೆಪಿ ಪ್ಲ್ಯಾನ್: ತಮಿಳುನಾಡಿನ ಈ ಪುಣ್ಯ ಕ್ಷೇತ್ರದಿಂದ ಮೋದಿ ಸ್ಪರ್ಧೆ? ಏನಿದರ ಮಹತ್ವ?
ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ಮೋದಿಯವರ ಪದವಿಯ ವಿಷಯವನ್ನು ಪದೇ ಪದೇ ಪ್ರಸ್ತಾಪಿಸುತ್ತಿದ್ದಾರೆ. ಅವರ ಶೈಕ್ಷಣಿಕ ಅರ್ಹತೆಯ ಬಗ್ಗೆ ವಿವರಗಳನ್ನು ಕೇಳಿದ್ದಾರೆ. ಪ್ರಧಾನಿ ಮೋದಿಯವರ ಪದವಿಯ ವಿವರಗಳನ್ನು ಕೋರಿ ಅವರು ಅರ್ಜಿ ಸಲ್ಲಿಸಿದ್ದರು.

ಈ ವರ್ಷದ ಮಾರ್ಚ್‌ನಲ್ಲಿ, ಕೇಜ್ರಿವಾಲ್‌ಗೆ ಪ್ರಧಾನಿ ಮೋದಿ ಅವರ ಎಂಎ ಪದವಿಯ ಮಾಹಿತಿಯನ್ನು ನೀಡುವಂತೆ ಗುಜರಾತ್ ವಿಶ್ವವಿದ್ಯಾಲಯಕ್ಕೆ ಗುಜರಾತ್ ಹೈಕೋರ್ಟ್ ನಿರ್ದೇಶನ ನೀಡಿತ್ತು. ಕೇಜ್ರಿವಾಲ್ ಅವರಿಗೆ 25,000 ರೂಪಾಯಿಗಳ ದಂಡವನ್ನು ವಿಧಿಸಿ ಆದೇಶ ಹೊರಡಿಸಿತ್ತು.
ಗುಜರಾತ್ ಹೈಕೋರ್ಟ್‌ನ ಆದೇಶವು ಜನರ ಮನಸ್ಸಿನಲ್ಲಿ ಬಹಳಷ್ಟು ಪ್ರಶ್ನೆಗಳನ್ನು ಹುಟ್ಟುಹಾಕಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಕಳೆದ ತಿಂಗಳು, ತನ್ನ ಆದೇಶವನ್ನು ಮರುಪರಿಶೀಲಿಸುವಂತೆ ಕೋರಿ ಗುಜರಾತ್ ಹೈಕೋರ್ಟ್‌ಗೆ ಕೇಜ್ರಿವಾಲ್ ಮನವಿ ಮಾಡಿದ್ದಾರೆ.
ಪಿಎಂ ಮೋದಿ ಅವರ ಪದವಿಯ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಿದೆ ಎಂದು ಗುಜರಾತ್ ವಿಶ್ವವಿದ್ಯಾಲಯ ಹೇಳಿಕೆ ನೀಡಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಕೇಜ್ರಿವಾಲ್ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಅಂತಹ ಯಾವುದೇ ಪದವಿ ಲಭ್ಯವಿಲ್ಲ ಎಂದು ತಿಳಿಸಿದ್ದಾರೆ.
English summary
Veteran journalist Sheela Bhatt said that she met Prime Minister Narendra Modi for the first time in 1981 when she was pursuing her Masters degree (MA)
Story first published: Thursday, July 13, 2023, 22:54 [IST]