23 ಗ್ರ್ಯಾಂಡ್ ಸ್ಲಾಮ್ಗಳ ಒಡೆಯ, ಟೆನಿಸ್ ಲೋಕದ ದಿಗ್ಗಜ ಸರ್ಬಿಯಾದ ನೋವಾಕ್ ಜೋಕೋವಿಕ್ (Novak Djokovic), ಯುಎಸ್ ಓಪನ್ ಟೆನಿಸ್ ಟೂರ್ನಿಯಲ್ಲಿ (US Open 2023) ಅದ್ಭುತ ಗೆಲುವಿನೊಂದಿಗೆ ಶುಭಾರಂಭ ಮಾಡಿದ್ದಾರೆ. ಮಂಗಳವಾರ ರಾತ್ರಿ ನಡೆದ ಪುರುಷರ ಸಿಂಗಲ್ಸ್ ಮೊದಲ ಸುತ್ತಿನಲ್ಲಿ ಫ್ರಾನ್ಸ್ನ ಅಲೆಕ್ಸಾಂಡರ್ ಮುಲ್ಲರ್ (Alexandre Muller) ವಿರುದ್ಧ 6-0, 6-2, 6-3 ಸೆಟ್‌ಗಳಲ್ಲಿ ಗೆದ್ದಿದ್ದಾರೆ. ಅಲ್ಲದೆ, ವಿಶ್ವ ಶ್ರೇಯಾಂಕದಲ್ಲಿ ಮತ್ತೆ ನಂಬರ್ 1 ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.