ಯುಪಿಎ ಸರ್ಕಾರ 12 ಲಕ್ಷ ಕೋಟಿ ಹಗರಣದಲ್ಲಿ ಭಾಗಿಯಾಗಿದೆ: ಅಮಿತ್ ಶಾ ಗಂಭೀರ ಆರೋಪ | UPA government involved in scams worth rs 12 lakh crore: Amit Shah

India

oi-Mamatha M

|

Google Oneindia Kannada News

ನವದೆಹಲಿ, ಜೂನ್. 23: ಈ ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ 12 ಲಕ್ಷ ಕೋಟಿ ರೂಪಾಯಿ ಮೊತ್ತದ ಹಗರಣಗಳಲ್ಲಿ ಭಾಗಿಯಾಗಿದ್ದರೆ, ದೇಶದಿಂದ ಭ್ರಷ್ಟಾಚಾರ ನಿರ್ಮೂಲನೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಲವಾದ ಅಡಿಪಾಯ ಹಾಕಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ.

ನ್ಯಾಷನಲ್ ಕಾನ್ಫರೆನ್ಸ್, ಪಿಡಿಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಅಮಿತ್ ಶಾ, ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆಯಿಂದಾಗಿ 42,000 ಜನರ ಸಾವಿಗೆ ಯಾರು ಹೊಣೆಗಾರಿಕೆ ತೆಗೆದುಕೊಳ್ಳುತ್ತಾರೆ..? ಎಂದು ಕಟುವಾಗಿ ಪ್ರಶ್ನಿಸಿದ್ದಾರೆ. 12 ಲಕ್ಷ ಕೋಟಿ ರೂಪಾಯಿ ಹಗರಣಗಳಲ್ಲಿ ಭಾಗಿಯಾಗಿದ್ದ ಯುಪಿಎ ಸರಕಾರವನ್ನು ಮೋದಿಯವರು ಬದಲಾಯಿಸಿದ್ದಾರೆ ಎಂದು ಹೇಳಿದ್ದಾರೆ.

UPA government involved in scams worth rs 12 lakh crore: Amit Shah

“ಭ್ರಷ್ಟಾಚಾರ ಮುಕ್ತ ಭಾರತಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಭದ್ರ ಬುನಾದಿ ಹಾಕಿದ್ದಾರೆ” ಎಂದು ಜಮ್ಮುವಿನಲ್ಲಿ ಸಾರ್ವಜನಿಕ ಸಬೆಯನ್ನುದ್ದೇಶಿಸಿ ಅಮಿತ್ ಶಾ ಹೇಳಿದ್ದಾರೆ. “ಮೂರು ಕುಟುಂಬಗಳು ಒಟ್ಟಾಗಿ ದಶಕಗಳ ಕಾಲ ಜಮ್ಮು ಮತ್ತು ಕಾಶ್ಮೀರವನ್ನು ಆಳಿದವು. 370 ನೇ ವಿಧಿಯಿಂದಾಗಿ ಯಾವುದೇ ಅಭಿವೃದ್ಧಿ ಕಂಡುಬಂದಿಲ್ಲ. ಭಯೋತ್ಪಾದನೆಯಿಂದಾಗಿ 42,000 ಜನರು ಸಾವನ್ನಪ್ಪಿದ್ದಾರೆ ಮತ್ತು ನಾವು ಆರ್ಟಿಕಲ್ 370 ಅನ್ನು ರಕ್ಷಿಸಬೇಕು ಎಂದು ಅವರು ಹೇಳುತ್ತಿದ್ದಾರೆ” ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮಧ್ಯಪ್ರದೇಶ ಚುನಾವಣೆ 2023: ಬುಡಕಟ್ಟು ಮತಗಳನ್ನು ಸೆಳೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿಮಧ್ಯಪ್ರದೇಶ ಚುನಾವಣೆ 2023: ಬುಡಕಟ್ಟು ಮತಗಳನ್ನು ಸೆಳೆಯಲು ಬಿಜೆಪಿ ಮತ್ತು ಕಾಂಗ್ರೆಸ್ ಪೈಪೋಟಿ

ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಮತ್ತು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಆ ಸಮಯದಲ್ಲಿ ಅಧಿಕಾರದಲ್ಲಿದ್ದ ಕಾರಣ 42,000 ಜನರ ಸಾವಿಗೆ ಯಾರು ಹೊಣೆ ಎಂದು ಕೇಳಲು ಬಯಸುವುದಾಗಿ ಗೃಹ ಸಚಿವರು ಪ್ರಶ್ನಿಸಿದ್ದಾರೆ. ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಯೋತ್ಪಾದನೆಯ ಸುತ್ತಲಿನ ಕುಣಿಕೆಯನ್ನು ಬಿಗಿಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

English summary

UPA government was involved in scams worth rs 12 lakh crore: alleges Union Home Minister Amit Shah in Jammu and Kashmir. know more.

Story first published: Friday, June 23, 2023, 15:53 [IST]

Source link