ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಖಾಲಿ ಇಲ್ಲ- ಮಾಜಿ ಸಚಿವ ಆರ್.ಅಶೋಕ್ | R Ashok Reacts On BJP State President Change

Chikkamagaluru

lekhaka-Veeresha H G

By ಹಾಸನ ಪ್ರತಿನಿಧಿ

|

Google Oneindia Kannada News

ಚಿಕ್ಕಮಗಳೂರು, ಜೂನ್‌ 24: ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಈಗ ಕಟೀಲ್ ಇದ್ದಾರೆ. ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ. ಪಾರ್ಲಿಮೆಂಟ್ ಚುನಾವಣೆ ಇದೆ, ರಾಷ್ಟ್ರಾಧ್ಯಕ್ಷರ ತೀರ್ಮಾನ ಗೊತ್ತಿಲ್ಲ ಎಂದು ಮಾಜಿ ಸಚಿವ ಆರ್.ಅಶೋಕ್ ತಿಳಿಸಿದರು.

ಚಿಕ್ಕಮಗಳೂರಿನಲ್ಲಿ ಮಾತಾನಾಡಿದ ಆರ್.ಅಶೋಕ್, ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ನನ್ನ ಬಳಿ ಯಾವ ಮಾಹಿತಿ ಇಲ್ಲ, ಬಳ್ಳಾರಿಯಲ್ಲಿ ಕಟೀಲ್ ರಾಜೀನಾಮೆ ನೀಡುತ್ತೇನೆ ಎಂದು ಹೇಳಿರುವುದು ನನಗೆ ಗೊತ್ತಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ, ರಾಜೀನಾಮೆಯನ್ನು ದೆಹಲಿಯವರು ಅಂಗೀಕಾರ ಮಾಡಬೇಕಲ್ವಾ ಎಂದು ಪ್ರಶ್ನಿಸಿದರು.

R Ashok Reacts On BJP President Change

ಇನ್ನು ಸದ್ಯದಲ್ಲೇ ಪಾರ್ಲಿಮೆಂಟ್ ಚುನಾವಣೆ ಇದೆ. ಈಗ ಬದಲಾವಣೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರು ಚರ್ಚಿಸುತ್ತಾರೆ. ಅಲ್ಲಿವರೆಗೆ ರಾಜ್ಯಾಧ್ಯಕ್ಷರ ಪದವಿ ಖಾಲಿ ಇಲ್ಲ. ಸೋಮಣ್ಣ ಹೇಳಿಕೆ ನನಗೆ ಗೊತ್ತಿಲ್ಲ, ರಾಜ್ಯಾಧ್ಯಕ್ಷರ ಸೀಟ್ ಖಾಲಿ ಇಲ್ಲ, ಸದ್ಯಕ್ಕೆ ಅವರನ್ನು ತೆಗೆಯುವ ಸಂದರ್ಭ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಬಗ್ಗೆ ಸ್ಪಷ್ಟ ಪಡಿಸಿದರು.

ಮಾತು ಮುಂದುವರಿಸಿದ ಅವರು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಿಎಂ ಅಲ್ಲ, ಸಿಎಂ ರೀತಿ ಆಕ್ಟಿಂಗ್ ಮಾಡುತ್ತಿದ್ದಾರೆ. ಡಿಕೆಶಿ ಅವರದ್ದು ಒಂದು ರೀತಿ ಅತಿರೇಕದ ನಡೆ ಎಂದು ಮಾಜಿ ಸಚಿವ ಆರ್.ಅಶೋಕ್ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಟ್ಟುಕೊಡಲ್ಲ, ನಂಗೆ ಸಿಎಂ ಸ್ಥಾನ ಸಿಗಲ್ಲ ಅನ್ನೋ ಗ್ಯಾರಂಟಿ ಇದೆ. ನಾನೇ ಸಿಎಂ ಎಂದು ಸಿದ್ದರಾಮಯ್ಯ ದೆಹಲಿಯಲ್ಲಿ ಹೇಳಿದ್ದಾರ. ಇದೇನು ಸಮ್ಮಿಶ್ರ ಸರ್ಕಾರವ ಎಂದು ಯಾರಿಗೆ ಹೇಳಿದ್ದಾರೆ, ಡಿಕೆಶಿಗೆ ಹೇಳಿದ್ದು, ಜಗಜ್ಜಾಹೀರು ಆಗಿದೆ. ಶಿವಕುಮಾರ್ ಈಗಿನಿಂದಲೇ ಓವರ್ಟೇಕ್ ಮಾಡಿ ಏನಾದರೂ ಕಿರಿಕಿರಿ ಮಾಡಲು ಹೊರಟಿದ್ದಾರೆ. ಕಿರಿಕಿರಿ ಬೀದಿಗೆ ಬಂದರೆ ಈ ಸರ್ಕಾರ ಬಿದ್ದು ಹೋಗುತ್ತದೆ ಎಂದು ಕಾಂಗ್ರೆಸ್‌ ಸರ್ಕಾರದ ವಿರುದ್ಧ ಲೇವಡಿ ಮಾಡಿದರು.

Nalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್‌ ಕುಮಾರ್‌ ಕಟೀಲ್‌ ರಾಜೀನಾಮೆNalin Kumar Kateel: ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳೀನ್‌ ಕುಮಾರ್‌ ಕಟೀಲ್‌ ರಾಜೀನಾಮೆ

ಮುಖ್ಯಮಂತ್ರಿ ಆದವರು ಹಿಂದಿನ ಸಿಎಂ ಅವರನ್ನು ಭೇಟಿ ಮಾಡೋದು ಮಾಮೂಲಿ, ನಾನು ಡಿಸಿಎಂ ಆಗಿದ್ದೆ, ನಿವೃತ್ತ ಮುಖ್ಯಮಂತ್ರಿಯನ್ನು ಭೇಟಿ ಮಾಡಿಲ್ಲ ಎಂದು ಡಿ.ಕೆ.ಶಿವಕುಮಾರ್ ವಿರುದ್ಧ ಅಶೋಕ್ ವ್ಯಂಗ್ಯವಾಡಿದರು.

ಇನ್ನು 3ನೇ ತಾರೀಖು ವಿಪಕ್ಷ ನಾಯಕನನ್ನು ಘೋಷಣೆ ಮಾಡುತ್ತಾರೆ. ನಾನು ಎರಡು ಕಡೆ ನಿಂತಿರುವುದು ಸರಿಯೋ ತಪ್ಪೋ ಗೊತ್ತಿಲ್ಲ. ಪಕ್ಷ ನಿಲ್ಲಲು ಹೇಳಿತ್ತು, ನಾನು ಪಕ್ಷದ ಶಿಸ್ತಿನ ಸಿಪಾಯಿ, ಹಾಗಾಗಿ ನಿಂತೆ. ಕನಕಪುರದಲ್ಲಿ ಬಿಜೆಪಿಗೆ ಬೂತ್ ಏಜೆಂಟ್ ಕೂಡ ಇಲ್ಲ, ಕನಕಪುರದಲ್ಲಿ 75 ವರ್ಷದಲ್ಲಿ 5000 ಮತ ದಾಟಿಲ್ಲ, ನಾನು ಹೋರಾಟ ಮಾಡಿ 19,500 ಮತ ತೆಗೆದುಕೊಂಡಿದ್ದೇನೆ ಎಂದರು.

ಇನ್ನು ಈ ಸೋಲು ಬಿಜೆಪಿಗೆ ಸಾಂದರ್ಭಿಕ ಸೋಲು ಅಷ್ಟೇ, ಒಳಮೀಸಲಾತಿ, ಎಸ್ಟಿಗಳಿಗೆ 5% ಮೀಸಲಾತಿ ಜಾಸ್ತಿ ಮಾಡಿದ್ದು, ಯಾರಿಗೆ ಸೌಲಭ್ಯ ಸಿಕ್ಕಿದ್ಯೋ ಅವರು ನಮ್ಮ ಜೊತೆ ನಿಂತರೋ ಇಲ್ವೋ ಗೊತ್ತಿಲ್ಲ, ಯಾರಿಗೆ ಸೌಲಭ್ಯ ಸಿಕ್ಕಿಲ್ಲ ಅವರು ನಮ್ಮ ವಿರುದ್ಧ ಇರೋದು ಕಾಣುತ್ತಿದೆ. ಮೀಸಲಾತಿ ಹೊಡೆತ ಬಿದ್ದಿದೆ ಎಂದು ಎಲ್ಲರೂ ಹೇಳುತ್ತಿದ್ದಾರೆ. ಪಕ್ಷದ ವೇದಿಕೆಯಲ್ಲಿ ಇದನ್ನೆಲ್ಲಾ ಚರ್ಚೆ ಮಾಡುತ್ತೇವೆ ಎಂದರು.

English summary

There is no BJP state president vacancy in the state, Former minister R Ashok reacts on BJP state president change.

Story first published: Saturday, June 24, 2023, 15:58 [IST]

Source link