ರಾಜ್ಯದಲ್ಲಿ ಮುಟ್ಟಿನ ರಜೆ ಬೇಡಿಕೆ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? | CM Siddaramaiah React On Menstrual Leave In The State

Karnataka

oi-Mallika P

|

Google Oneindia Kannada News

ಬೆಂಗಳೂರು, ಜುಲೈ 08: ರಾಜ್ಯದಲ್ಲಿ ಮುಟ್ಟಿನ ರಜೆ ಬೇಡಿಕೆ ಬಗ್ಗೆ ಪರಿಶೀಲನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಜನಮನ ಪ್ರತಿಷ್ಠಾನ ಮತ್ತು ಸಮತಾ ಅಧ್ಯಯನ ಕೇಂದ್ರ ದೇವರಾಜ ಅರಸು ಭವನದಲ್ಲಿ ಹಮ್ಮಿಕೊಂಡಿದ್ದ ಪ್ರಬುದ್ಧ ಕರ್ನಾಟಕ ಜನಮನ ಸಮಾವೇಶದ ಸಂವಾದದಲ್ಲಿ ಸಭಿಕರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಮಹಿಳಾ ಉದ್ಯೋಗಿ ಹಾಗೂ ವಿದ್ಯಾರ್ಥಿನಿಯರಿಗೆ ರಜೆ ಘೋಷಿಸಬೇಕು ಎನ್ನುವ ಬೇಡಿಕೆ ಬಗ್ಗೆ ಪರಿಶೀಲಿಸಿ ಯೋಗ್ಯ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

CM Siddaramaiah React On Menstrual Leave In The State

ಮಕ್ಕಳು ವಿಶ್ವಪ್ರಜ್ಞೆ ಬೆಳೆಸಿಕೊಂಡು ವೈಚಾರಿಕವಾಗಿ ಸನ್ನದ್ಧಗೊಳ್ಳುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೆಲಸ ಮಾಡಲಿದೆ. ಬೋಧಕರು ಜಾತ್ಯತೀತವಾಗಿಲ್ಲದಿದ್ದರೆ, ಶಿಕ್ಷಕರಲ್ಲೇ ವೈಚಾರಿಕತೆ ಇಲ್ಲದಿದ್ದರೆ ಮಕ್ಕಳಲ್ಲಿ ಜ್ಞಾನದ ವಿಕಾಸ ಸಾಧ್ಯವಾಗುವುದಿಲ್ಲ. ಜಾಗತಿಕ ಮಟ್ಟದ ಬಂಡವಾಳವನ್ನು ಆಕರ್ಷಿಕಸಬೇಕು ಎಂದು ಶಾಂತಿ, ಸುವ್ಯವಸ್ಥೆ ಮತ್ತು ಉದ್ಯಮ ಸ್ನೇಹಿ ವಾತಾವರಣ ಇರಬೇಕು. ಬಂಡವಾಳ ಹೂಡಿಕೆಯಿಂದ ಉದ್ಯೋಗ ಸೃಷ್ಟಿಯಾಗಿ ಜಿಡಿಪಿ ಹೆಚ್ಚುತ್ತದೆ. ಹೀಗಾಗಿ ಜಾತಿ-ಧರ್ಮದ ಸಂಘರ್ಷ ಇಲ್ಲದ ಶಾಂತಿಯುತ ಸಮಾಜ ಇರಬೇಕು ಎಂದರು.

ನಮ್ಮ ಯುವ ಸಮೂಹದ ಶಕ್ತಿ ಮತ್ತು ಚೈತನ್ಯ ದುರುಪಯೋಗ ಆಗಬಾರದು, ಜಾತಿ-ಧರ್ಮದ ಹೆಸರಲ್ಲಿ ಗಲಭೆಗಳಿಗೆ ಯುವ ಸಮೂಹ ದುರ್ಬಳಕೆ ಆಗುವುದನ್ನು ತಪ್ಪಿಸುವ ರೀತಿಯಲ್ಲಿ ನಮ್ಮ ಸರ್ಕಾರ ನೀತಿ ರೂಪಿಸಿದೆ. ಇದಕ್ಕಾಗಿ ಕೌಶಲ್ಯ ತರಬೇತಿ ಜತೆಗೆ ನಿರುದ್ಯೋಗಿ ಯುವ ಸಮೂಹಕ್ಕೆ 24 ತಿಂಗಳ ಕಾಲ ಯುವನಿಧಿ ನೀಡಲು ನಿರ್ಧರಿಸಿದ್ದೇವೆ. ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ನಾವು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದರಂತೆ ಹಂತ ಹಂತವಾಗಿ ಭರ್ತಿ ಮಾಡಿಕೊಳ್ಳುತ್ತೇವೆ. ಅಲ್ಲಿಯವರೆಗೂ ಹೊರ ಗುತ್ತಿಗೆ ನೇಮಕಾತಿಗಳಲ್ಲೂ ಮೀಸಲಾತಿ ತರುವ ಉದ್ದೇಶ ಹೊಂದಿದ್ದೇವೆ ಎಂದು ಹೇಳಿದರು.

CM Siddaramaiah React On Menstrual Leave In The State

ಶರಾವತಿ ಸಂತ್ರಸ್ಥರಿಗೆ ಶಾಶ್ವತ ಪರಿಹಾರದ ಬಗ್ಗೆ ಮಾತನಾಡಿದ ಅವರು, ಮಲೆನಾಡಿನ ಜಿಲ್ಲೆಗಳಲ್ಲಿ ಹಲವು ವರ್ಷಗಳಿಂದ ಇರುವ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ಹಿಂದಿನ ಸರ್ಕಾರದಲ್ಲಿ ಅನೈತಿಕ ಪೊಲೀಸ್ ಗಿರಿ ಅತ್ಯಂತ ನಿರ್ಲಜ್ಜತನದಿಂದ ಆಚರಿಸಲ್ಪಡುತ್ತಿತ್ತು. ನಾವು ಅಧಿಕಾರಕ್ಕೆ ಬರುತ್ತಿದ್ದಂತೆ ಅನೈತಿಕ ಪೊಲೀಸ್ ಗಿರಿಗೆ ಬರೆ ಎಳೆದಿದ್ದೇವೆ. ಸಮ ಸಮಾಜ ನಿರ್ಮಾಣ ಆಗದ ಹೊರತು ದಲಿತರ, ಅಲ್ಪ ಸಂಖ್ಯಾತರ, ಹಿಂದುಳಿದವರ ಮೇಲೆ ದೌರ್ಜನ್ಯ ಹೋಗುವುದಿಲ್ಲ. ಹೀಗಾಗಿ ಕುವೆಂಪು ಅವರ ಮಾತಿನಂತೆ ರಾಜ್ಯವನ್ನು ಶಾಂತಿಯ ತೋಟ ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಪ್ರಯತ್ನಿಸುತ್ತಿದೆ ಎಂದರು.

English summary

CM Siddaramaiah said that he will review the demand for menstrual leave in the state. Know more,

Story first published: Saturday, July 8, 2023, 17:45 [IST]

Source link