ರಾಜ್ಯದಲ್ಲಿ ವಿದ್ಯುತ್‌ ಬಿಲ್‌ ಹೆಚ್ಚಳದ ಶಾಕ್‌ ; ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ: ಸಿದ್ದರಾಮಯ್ಯ | Allegation that the burden of Griha Jyothi is put on Industrialists is false Says CM Siddaramaiah

Karnataka

oi-Reshma P

|

Google Oneindia Kannada News

ಬೆಂಗಳೂರು, ಜೂನ್ 23: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್‌ ಬಿಲ್‌ ಹೆಚ್ಚಾಳವಾಗತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜ್ಯೋತಿ ಯೋಜನೆಗೂ ವಿದ್ಯುತ್ ದರ ಏರಿಕೆಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷ ಬಿ.ವಿ.ಗೋಪಾಲ ರೆಡ್ಡಿ ಅವರ ನೇತೃತ್ವದ ನಿಯೋಗವು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿದ ಸಂದರ್ಭದಲ್ಲಿ ಹಿಂದಿನ ಸರ್ಕಾರದ ಅವಧಿಯಲ್ಲಿ ಆಗಿದ್ದನ್ನು ಮನವರಿಕೆ ಮಾಡಿಸಿದರು. ಗೃಹಜ್ಯೋತಿ ಯೋಜನೆಯ ಹೊರೆಯನ್ನು ಯಾರ ಮೇಲೂ ಹಾಕುತ್ತಿಲ್ಲ. ಇದೊಂದು ತಪ್ಪು ಅಭಿಪ್ರಾಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

Allegation that the burden of Griha Jyothi is put on Industrialists is false Says CM Siddaramaiah

ನಮ್ಮ ಸರ್ಕಾರ ವಿದ್ಯುತ್ ಶುಲ್ಕವನ್ನು ಏರಿಸುವ ನಿರ್ಧಾರ ಮಾಡಿಲ್ಲ. ಕೆ.ಇ. ಆರ್.ಸಿಯು ಬೆಲೆ ಹೆಚ್ಚಳದ ನಿರ್ಧಾರವನ್ನು ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೈಗೊಂಡಿತ್ತು. ನಿಯೋಗವು ಮಾಡಿರುವ ಮನವಿಯ ಕುರಿತು ಆರ್ಥಿಕ, ಇಂಧನ ಇಲಾಖೆ , ಕಾಸಿಯಾ, ಎಫ್.ಕೆ.ಸಿ.ಸಿ ಐ ಅವರೊಂದಿಗೆ ಪ್ರತ್ಯೇಕ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯುತ್ ದರ ಏರಿಸಿದ್ದು ನಾವಲ್ಲ ಅಂತ ಅವರು, ಅವರೇ ಅಂತ ಇವರು! ಮಧ್ಯದಲ್ಲಿ ರುಬ್ಬಿಸಿಕೊಂಡಿದ್ದು ರಾಜ್ಯದ 'ಆಮ್ ಆದ್ಮಿ’ವಿದ್ಯುತ್ ದರ ಏರಿಸಿದ್ದು ನಾವಲ್ಲ ಅಂತ ಅವರು, ಅವರೇ ಅಂತ ಇವರು! ಮಧ್ಯದಲ್ಲಿ ರುಬ್ಬಿಸಿಕೊಂಡಿದ್ದು ರಾಜ್ಯದ ‘ಆಮ್ ಆದ್ಮಿ’

ಕೆ.ಇ.ಆರ್.ಸಿ ತನ್ನ ಸುಂಕದ ಆದೇಶದಲ್ಲಿ ಉದ್ಯಮ ವಲಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸಿದ್ದು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಹಾಗೂ ಹೆಚ್.ಟಿ ಕೈಗಾರಿಕೆಗಳ ಮೇಲೆ ವಿಧಿಸುವ ಶೇ 9 ರಷ್ಟು ವಿದ್ಯುತ್ ತೆರಿಗೆಯನ್ನು ಶೇ 3 ರಷ್ಟು ಇಳಿಸಬೇಕು ಎಂದು ಮನವಿ ಮಾಡಿದರು.

ಇಂಧನ ಶುಲ್ಕ (Fuel Escalation charges) ನಲ್ಲಿ ರಿಯಾಯಿತಿ ನೀಡಲು ಹಾಗೂ ಇತರೆ ರಾಜ್ಯಗಳಲ್ಲಿ ಎಂ.ಎಸ್.ಎಂ.ಇ ನೀತಿ ಹಾಗೂ ಕಾಯ್ದೆ ಇರುವಂತೆ ರಾಜ್ಯದಲ್ಲಿಯೂ ಕಾಯ್ದೆ ರಚನೆ ಮಾಡುವಂತೆ ಮನವಿ ಮಾಡಿದರು.

Allegation that the burden of Griha Jyothi is put on Industrialists is false Says CM Siddaramaiah

ಬಿಜೆಪಿ ಸರ್ಕಾರ ಎಸ್ಕಾಂಗಳಿಗೆ 11 ಸಾವಿರ ಕೋಟಿ ಬಾಕಿ ಉಳಿಸಿ ಹೋಗಿದೆ

ಸಣ್ಣ-ಮಧ್ಯಮ ಹಾಗೂ ಸೂಕ್ಷ್ಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜೊತೆಗೆ ಪ್ರತ್ಯೇಕವಾಗಿ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್.ನರಸಿಂಹಮೂರ್ತಿ ಅವರ ನೇತೃತ್ವದ ನಿಯೋಗದ ಜತೆಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ಕೆ.ಇ. ಆರ್.ಸಿ ವಿದ್ಯುತ್ ಬೆಲೆ ಏರಿಸಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಸರ್ಕಾರದ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ ಎಂದು ಮುಖ್ಯ ಮಂತ್ರಿ ಗಳು ಸ್ಪಷ್ಟಪಡಿಸಿದರು.

ಹಿಂದಿನ ಸರ್ಕಾರ 11000 ಕೋಟಿ ರೂ.ಗಳ ಮೊತ್ತವನ್ನು ಎಸ್ಕಾಂ ಗಳಿಗೆ ಬಾಕಿ ಉಳಿಸಿದೆ. ಅವರು ಉಳಿಸಿ ಹೋದ ಹೊರೆಯನ್ನು ನಾವು ಭರಿಸಬೇಕಿದೆ. ಹಿಂದಿನ ಬಿಜೆಪಿ ಸರ್ಕಾರದ ಆರ್ಥಿಕ ಅಶಿಸ್ತಿನಿಂದ ಆಗಿರುವ ಅನಾಹುತಗಳನ್ನು ನಾವು ಸರಿಪಡಿಸಬೇಕಿದೆ ಎಂದು ಹೇಳಿದರು.

ವಿದ್ಯುತ್ ದರ ಏರಿಸಿದ ಕೆ.ಇ.ಆರ್.ಸಿ ಶಿಫಾರಸ್ಸನ್ನು ಮರುಪರಿಶೀಲಿಸುವಂತೆ ಮನವಿ ಮಾಡಲು ನಿಮಗೆ ಅವಕಾಶ ಇದೆ. ನೀವೊಮ್ಮೆ ನಿಮಗಾಗುತ್ತಿರುವ ಸಮಸ್ಯೆಗಳ ಕುರಿತು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣಾ ಆಯೋಗಕ್ಕೆ ಮನವಿ ಮಾಡಿಕೊಳ್ಳಬಹುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ನಿಯೋಗಕ್ಕೆ ಸೂಚಿಸಿದರು.

English summary

Congress Government: Chief Minister Siddaramaiah said that Allegation that the burden of Griha Jyothi is put on Industrialists is false

Source link