Agriculture
oi-Gururaj S
ಉಡುಪಿ, ಜೂನ್ 25; ನೈಋತ್ಯ ಮುಂಗಾರು ಆರಂಭವಾಗಿದೆ. ಮಳೆಯೂ ಶುರುವಾಗಿದ್ದು, ಕೃಷಿ ಚಟುವಟಿಕೆಗಳಿಗೆ ಚಾಲನೆ ಸಿಕ್ಕಿದೆ. ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ರೈತರಿಂದಲೇ ಬೆಳೆ ಸಮೀಕ್ಷೆ ಕೈಗೊಳ್ಳಲು ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿಪಡಿಸಲಾಗಿದೆ.
ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದ ಎಫ್ಐಡಿ ಸಂಖ್ಯೆಯನ್ನು ಹೊಂದಿರುವ ರೈತರು ಗೂಗಲ್ ಪ್ಲೇ ಸ್ಟೋರ್‌ನಲ್ಲಿ ‘ಮುಂಗಾರು ರೈತರ ಬೆಳೆ ಸಮೀಕ್ಷೆ 2023’ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಂಡು, ಇ-ಕೆವೈಸಿ ಮೂಲಕ ಆಧಾರ್ ದೃಢೀಕರಿಸಿ ಆಯ್ಕೆ ಮಾಡಿ ಆಧಾರ್ ಸಂಖ್ಯೆಯನ್ನು ದಾಖಲಿಸಬೇಕು.
ರಾಜ್ಯದಲ್ಲಿ ಮುಂಗಾರು ದುರ್ಬಲ; ಬರಪೀಡಿತ ಎಂದು ಘೋಷಿಸಲು ಸಜ್ಜಾದ ಸರ್ಕಾರ!?
ನಂತರದಲ್ಲಿ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗೆ ಸ್ವೀಕೃತವಾಗುವ ಓಟಿಪಿಯನ್ನು ದಾಖಲಿಸಿದಾಗ, ರೈತರ ಎಫ್ಐಡಿ ಸಂಖ್ಯೆಗೆ ಜೋಡಣೆಯಾಗಿರುವ ಎಲ್ಲಾ ಜಮೀನುಗಳ ಮಾಹಿತಿಯು ಡೌನ್ ಲೋಡ್ ಆಗುತ್ತದೆ. ಎಫ್ಐಡಿ ಸಂಖ್ಯೆಗೆ ಯಾವುದಾದರೂ ಸರ್ವೆ ನಂಬರ್‌ಗಳು ಜೋಡಣೆಯಾಗದಿದ್ದಲ್ಲಿ ಸೇರಿಸಿಕೊಳ್ಳಲು ಸಹ ಮೊಬೈಲ್ ಅಪ್ಲಿಕೇಶನ್‌ನಲ್ಲಿ ಅವಕಾಶ ಕಲ್ಪಿಸಲಾಗಿದೆ.
ಮಳೆ ಆರಂಭ; ಬೆಳೆ ವಿಮೆ ಪಡೆಯಲು ರೈತರಿಗೆ ಕೃಷಿ ಇಲಾಖೆ ಕರೆ
ಬೆಳೆ ವಿವರ ದಾಖಲು ಮಾಡಿ; ರೈತರು ಸರ್ವೆ ನಂಬರ್, ಹಿಸ್ಸಾ, ಮಾಲೀಕನ ಹೆಸರು, ಆಯ್ಕೆ ಮಾಡಿ ಕ್ಷೇತ್ರವನ್ನು ನಮೂದಿಸಿ, ಸರ್ವೆ ನಂಬರ್‌ಗಳ ಗಡಿ ರೇಖೆಯೊಳಗೆ ನಿಂತು ಬೆಳೆ ವಿವರವನ್ನು ದಾಖಲಿಸಿ ಫೋಟೋ ತೆಗೆದು ಮಾಹಿತಿಯನ್ನು ಅಪ್‌ಲೋಡ್ ಮಾಡಬೇಕು. ರೈತರು ಎಫ್ಐಡಿ ಸಂಖ್ಯೆಯನ್ನು ಹೊಂದಿಲ್ಲವಾದರೆ ಹತ್ತಿರದ ಕೃಷಿ ಅಥವಾ ತೋಟಗಾರಿಕ ಇಲಾಖೆಗಳ ಕಛೇರಿಗಳನ್ನು ಸಂಖ್ಯೆಯನ್ನು ಮಾಡಿಸಿಕೊಳ್ಳಬಹುದು.
ಹತ್ತಿಬೆಳೆಗೆ ಕೆಂಪು ರೋಗ; ರಾಯಚೂರು ಕೃಷಿ ವಿವಿ ತಜ್ಞರ ಪರಿಶೀಲನೆ
ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಂಬಲ ಬೆಲೆ ಯೋಜನೆಯ ಅರ್ಹ ಫಲಾನುಭವಿಗಳ ಗುರುತಿಸುವಿಕೆ, ಬೆಳೆ ವಿಮೆ ಯೋಜನೆ ಅನುಷ್ಠಾನ, ಋತುಮಾನವಾರು ವಿವಿಧ ಬೆಳೆಗಳ ವಿಸ್ತೀರ್ಣ ವರದಿ ಕಾರ್ಯ, ಬೆಳೆ ಕಟಾವು ಪ್ರಯೋಗ ಅನುಷ್ಠಾನ, ಕೃಷಿ, ತೋಟಗಾರಿಕೆ ಹಾಗೂ ರೇಷ್ಮೆ ಇಲಾಖೆಗಳ ಫಲಾನುಭವಿ ಆಧಾರಿತ ಯೋಜನೆಗಳ ಅನುಷ್ಠಾನ ಹಾಗೂ ಪಹಣಿಯಲ್ಲಿ ಬೆಳೆ ವಿವರ ದಾಖಲಿಸಲು ಬಳಸಲಾಗುತ್ತದೆ.
ರೈತರು ತಮ್ಮ ಜಮೀನಿನ ಬೆಳೆ ವಿವರವನ್ನು ಯಾವುದೇ ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ತಾವೇ ದಾಖಲಿಸಲು ಮೊಬೈಲ್ ಅಪ್ಲಕೇಶನ್ ಮೂಲಕ ಅವಕಾಶ ಕಲ್ಪಿಸಿದ್ದು, ಇದರ ಸಂಪೂರ್ಣ ಪ್ರಯೋಜನವನ್ನು ಪಡೆಯುವಂತೆ ಹಾಗೂ ನಿಗದಿತ ಅವಧಿಯೊಳಗೆ ಮೊಬೈಲ್ ಅಪ್ಲಿಕೇಶನ್ ಮೂಲಕ ತಮ್ಮ ಜಮೀನಿನ ಸರ್ವೆ ನಂಬರ್‌ವಾರು ಬೆಳೆ ವಿವರವನ್ನು ನಿಖರವಾಗಿ ದಾಖಲಿಸಿ ಮುಂಗಾರು-2023ರ ಬೆಳೆ ಸಮೀಕ್ಷೆ ಕಾರ್ಯವನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವಂತೆ ಕೃಷಿ ಇಲಾಖೆ ಮನವಿ ಮಾಡಿದೆ.
English summary
Agriculture department allowed farmers for the 2023 monsoon season crop survey by using mobile application.