ವಿಜಯಪುರ-ಮಂಗಳೂರು ಸೇರಿ ಹಲವು ರೈಲು ಸೇವೆ ವಿಸ್ತರಣೆ, ಪಟ್ಟಿ | Vijayapura Mangaluru And Other Train Service Extended List

Travel

oi-Gururaj S

|

Google Oneindia Kannada News

ಬೆಂಗಳೂರು, ಜೂನ್ 21; ಪ್ರಯಾಣಿಕರ ಬೇಡಿಕೆ ಹಿನ್ನಲೆಯಲ್ಲಿ ನೈಋತ್ಯ ರೈಲ್ವೆ ಹಲವು ವಿಶೇಷ ರೈಲು ಸೇವೆಯ ಅವಧಿ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಕರಾವಳಿ ಮತ್ತು ಉತ್ತರ ಕರ್ನಾಟಕ ಸಂಪರ್ಕಿಸುವ ವಿಜಯಪುರ-ಮಂಗಳೂರು ಪ್ರತಿದಿನದ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ವಿಸ್ತರಣೆ ಮಾಡಲಾಗಿದೆ.

ನೈಋತ್ಯ ರೈಲ್ವೆ ಈ ಕುರಿತು ಆದೇಶ ಹೊರಡಿಸಿದೆ. ವಿಶೇಷ ಎಕ್ಸ್‌ಪ್ರೆಸ್‌ ರೈಲುಗಳ ಸಂಚಾರ ಅವಧಿಯನ್ನು ಕೆಲ ದಿನಗಳ ಕಾಲ ವಿಸ್ತರಣೆ ಮಾಡಲು ನೈರುತ್ಯ ರೈಲ್ವೆ ವಲಯ ನಿರ್ಧರಿಸಿದೆ ಎಂದು ಆದೇಶದಲ್ಲಿ ಹೇಳಿದೆ.

Vande Bharat express; ಬೆಂಗಳೂರು-ಧಾರವಾಡ ದರ ಪಟ್ಟಿ Vande Bharat express; ಬೆಂಗಳೂರು-ಧಾರವಾಡ ದರ ಪಟ್ಟಿ

Vijayapura Mangaluru And Other Train Service Extended List

ಕರ್ನಾಟಕದ ವಿವಿಧ ಜಿಲ್ಲೆಗಳ ನಡುವೆ ಸಂಪರ್ಕಿಸುವ ಮತ್ತು ಕರ್ನಾಟಕ ಮತ್ತು ಅಕ್ಕಪಕ್ಕದ ರಾಜ್ಯಗಳಿಗೆ ಸಂಚಾರ ನಡೆಸುವ ರೈಲುಗಳು ಸಹ ಇದರಲ್ಲಿ ಸೇರಿವೆ. ಮುಂದಿನ ಆದೇಶದ ತನಕ ಈ ವಿಶೇಷ ರೈಲುಗಳು ಸಂಚಾರ ನಡೆಸಲಿವೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

Vande Bharat; ಮುಂಬೈ-ಗೋವಾ ರೈಲು ಉಡುಪಿ, ಮಂಗಳೂರಿಗೆ ವಿಸ್ತರಿಸಿ Vande Bharat; ಮುಂಬೈ-ಗೋವಾ ರೈಲು ಉಡುಪಿ, ಮಂಗಳೂರಿಗೆ ವಿಸ್ತರಿಸಿ

ವಿಸ್ತರಣೆಯಾಗಿರುವ ರೈಲುಗಳು

* ರೈಲು ಸಂಖ್ಯೆ 07355 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ರಾಮೇಶ್ವರಂ ನಿಲ್ದಾಣಗಳ ನಡುವೆ ಪ್ರತಿ ಶನಿವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 1 ರಿಂದ ಸೆಪ್ಟೆಂಬರ್ 30ರ ತನಕ ವಿಸ್ತರಣೆ ಮಾಡಲಾಗಿದೆ. ಈ ಮೊದಲು ಜೂನ್ 24ರ ತನಕ ಈ ರೈಲು ಓಡಿಸಲು ಸೂಚಿಸಲಾಗಿತ್ತು.

ಮಂಗಳೂರು-ಯಶವಂತಪುರ ರೈಲು ಅರಸೀಕೆರೆ ಮೂಲಕ ಸಾಗಲಿ ಮಂಗಳೂರು-ಯಶವಂತಪುರ ರೈಲು ಅರಸೀಕೆರೆ ಮೂಲಕ ಸಾಗಲಿ

* ರೈಲು ಸಂಖ್ಯೆ 07356 ರಾಮೇಶ್ವರಂ ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಭಾನುವಾರ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯನ್ನು ಜುಲೈ 2ರಿಂದ ಅಕ್ಟೋಬರ್ 1ರ ತನಕ ವಿಸ್ತರಿಸಲಾಗಿದೆ. ಈ ಮೊದಲು ಜೂನ್ 25 ರವರೆಗೆ ಓಡಿಸಲು ಆದೇಶಿಸಲಾಗಿತ್ತು.

* ರೈಲು ಸಂಖ್ಯೆ 07377 ವಿಜಯಪುರ ಮತ್ತು ಮಂಗಳೂರು ಜಂಕ್ಷನ್‌ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಜುಲೈ 1ರಿಂದ ಆಗಸ್ಟ್ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.

* ರೈಲು ಸಂಖ್ಯೆ 07378ಮಂಗಳೂರು ಜಂಕ್ಷನ್ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಜುಲೈ 2ರಿಂದ ಸೆಪ್ಟೆಂಬರ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಆದೇಶ ನೀಡಲಾಗಿತ್ತು.

* ರೈಲು ಸಂಖ್ಯೆ 07325 ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ತಂಜಾವೂರು ನಿಲ್ದಾಣಗಳ ನಡುವೆ ಪ್ರತಿ ಸೋಮವಾರ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಜುಲೈ 3 ರಿಂದ 31 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 26 ರವರೆಗೆ ಓಡಿಸಲು ಸೂಚಿಸಲಾಗಿತ್ತು.

* ರೈಲು ಸಂಖ್ಯೆ 07326 ತಂಜಾವೂರು ಮತ್ತು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ನಿಲ್ದಾಣಗಳ ನಡುವೆ ಪ್ರತಿ ಮಂಗಳವಾರ ಸಂಚರಿಸುವ ಎಕ್ಸ್‌ಪ್ರೆಸ್‌ ರೈಲು ಸೇವೆಯನ್ನು ಜುಲೈ 4 ರಿಂದ ಆಗಸ್ಟ್ 1 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 27 ರವರೆಗೆ ಓಡಿಸಲು ಆದೇಶಿಸಲಾಗಿತ್ತು.

* ರೈಲು ಸಂಖ್ಯೆ 06545 ಯಶವಂತಪುರ ಮತ್ತು ವಿಜಯಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆಯ ಅವಧಿಯನ್ನು ಸೆಪ್ಟೆಂಬರ್ 29 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜೂನ್ 30 ರವರೆಗೆ ಓಡಿಸಲು ಸೂಚಿಸಲಾಗಿತ್ತು.

* ರೈಲು ಸಂಖ್ಯೆ 06546 ವಿಜಯಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆಯ ಅವಧಿಯನ್ನು ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗುತ್ತಿದೆ. ಈ ಮೊದಲು ಜುಲೈ 1 ರವರೆಗೆ ಓಡಿಸಲು ಆದೇಶಿಸಲಾಗಿತ್ತು.

English summary

South western railway extended Vijayapura Mangaluru daily express train and train services. Here are the list.

Source link