ವಿದ್ಯುತ್ ದರ ಏರಿಸಿದ್ದು ನಾವಲ್ಲ ಬಿಜೆಪಿಯವರು, ಸುಮ್ನೆ ಏನೇನೋ ಮಾತಾಡ್ಬೇಡಿ: DCM ಡಿಕೆಶಿ ಹೀಗೆ ಹೇಳಿದ್ದು ಯಾರಿಗೆ? | BJP has increased electricity price says DK Shivakumar

Bengaluru

oi-Madhusudhan KR

By ಒನ್‌ ಇಂಡಿಯಾ ಪ್ರತಿನಿಧಿ

|

Google Oneindia Kannada News

ಬೆಂಗಳೂರು, ಜೂನ್‌, 23: ವಿದ್ಯುತ್‌ ದರ ಏರಿಕೆ ಖಂಡಿಸಿ ಈಗಾಗಲೇ ರಾಜ್ಯದ ಸರ್ಕಾರ ಹಾಗೂ ವಿದ್ಯುತ್‌ ನಿಗಮಗಳ ವಿರುದ್ಧ ಹಲವು ಜಿಲ್ಲೆಗಳಲ್ಲಿ ಕೈಗಾರಿಕೆಗಳು, ಸಂಘ ಸಂಸ್ಥೆಗಳಿಂದ ಪ್ರತಿಭಟನೆ ಶುರು ಮಾಡಿದ್ದಾರೆ. ಇನ್ನು ಈ ಕುರಿತು ಬೆಂಗಳೂರಿನಲ್ಲಿ ಡಿ.ಸಿ.ಎಂ. ಡಿ.ಕೆ.ಶಿವಕುಮಾರ್‌ ಅವರು ಏನು ಹೇಳಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ವಿದ್ಯುತ್ ಬೆಲೆ ಏರಿಕೆ ವಿರುದ್ಧ ಹೋರಾಟದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ವಿದ್ಯುತ್ ಬೆಲೆ ಏರಿಕೆ ಮಾಡಿದ್ದು ನಾವಲ್ಲ. ಬಿಜೆಪಿಯವರದ್ದೇ ಸರ್ಕಾರ ಇದ್ದಾಗ ವಿದ್ಯುತ್ ಬೆಲೆ ಏರಿಕೆ ಆಗಿದೆ. ಚುನಾವಣೆ ಫಲಿತಾಂಶ ಬರುವುದಕ್ಕೂ ಮುನ್ನವೇ ಅವರು ವಿದ್ಯುತ್ ಬೆಲೆಯನ್ನು ಏರಿಕೆ ಮಾಡಿದ್ದಾರೆ. ಹಾಗೆಯೇ ವಿದ್ಯುತ್ ದರ ಪರಿಷ್ಕರಣ ಸಮಿತಿ ಬೆಲೆ ನಿಗದಿಯಲ್ಲಿ ಸ್ವಂತ ಅಧಿಕಾರ ಹೊಂದಿದೆ ಎಂದರು.

BJP has increased electricity price says DK Shivakumar

ಬಿಜೆಪಿಯವರು ಎಷ್ಟು ಹೊಸ ಬಿಲ್‌ಗಳನ್ನು ಸೃಷ್ಟಿಸಿ ಹಣ ನೀಡಿದ್ದಾರೆ ಎಂದು ಹೇಳಿದರೆ ಎಷ್ಟು ಜನ ಮನೆಗೆ ಹೋಗುತ್ತಾರೆ ಗೊತ್ತಿದೆಯೇ? ಹೊಸ ಬಿಲ್‌ಗಳನ್ನು ಸೃಷ್ಟಿಸಿ ಸಾವಿರಾರು ಕೋಟಿ ರೂಪಾಯಿಗಳನ್ನು ನೀಡಲಾಗಿದೆ. ಈ ವಿಚಾರಗಳು ಬಸವರಾಜ ಬೊಮ್ಮಾಯಿ ಹಾಗೂ ಯಡಿಯೂರಪ್ಪ ಅವರಿಗೆ ತಿಳಿದಿದೆ ಎಂದರು.

ರಾಜ್ಯದಲ್ಲಿ ವಿದ್ಯುತ್‌ಗೆ ಎಷ್ಟು ಖರ್ಚಾಗುತ್ತದೆ ಎಂದು ನನಗೆ ಗೊತ್ತಿದೆ. ನನ್ನ ಅವಧಿಯಲ್ಲಿ ರಾಜ್ಯದಲ್ಲಿ ಹೆಚ್ಚುವರಿ ವಿದ್ಯುತ್ ಉತ್ಪಾದನೆ ಮಾಡಿ ಅದನ್ನು ಬೇರೆ ರಾಜ್ಯಗಳಿಗೆ ನೀಡಿರುವ ಬಗ್ಗೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಹೇಳಿದ್ದಾರೆ. ಆದರೆ ವಿದ್ಯುತ್ ಉತ್ಪಾದನೆ ಇಲ್ಲದೆ 3500 ಕೋಟಿ ಮೊತ್ತದ ವಿದ್ಯುತ್ ಹೇಗೆ ಮಾರಲಾಯಿತು? ಎಂದು ಬಿಜೆಪಿ ನಾಯಕರಿಗೆ ಪ್ರಶ್ನಿಸಿದರು.

ಅನ್ನಭಾಗ್ಯ ಸಂಘರ್ಷ; ಸ್ಟಾಕ್ ಇದ್ರೂ ಕೂಡ ಅಕ್ಕಿ ಕೊಡಲ್ಲ ಎಂದು ಗೋಯಲ್‌ ಹೇಳಿದ್ದಾರೆ: ಕೆ ಹೆಚ್‌ ಮುನಿಯಪ್ಪ ಕಿಡಿಅನ್ನಭಾಗ್ಯ ಸಂಘರ್ಷ; ಸ್ಟಾಕ್ ಇದ್ರೂ ಕೂಡ ಅಕ್ಕಿ ಕೊಡಲ್ಲ ಎಂದು ಗೋಯಲ್‌ ಹೇಳಿದ್ದಾರೆ: ಕೆ ಹೆಚ್‌ ಮುನಿಯಪ್ಪ ಕಿಡಿ

ವಿದ್ಯುತ್ ನಿಗಮದವರು ಜನವರಿಯಿಂದ ಈ ನಿಯಮನ್ನು ಜಾರಿ ಮಾಡಿದ್ದು, ಇದರಿಂದ ವಿದ್ಯುತ್ ಬಿಲ್ ಹೆಚ್ಚಾಗಿ ಬಂದಿದೆ. ಈ ಬಗ್ಗೆ ಮುಖ್ಯಮಂತ್ರಿಗಳು, ಸಚಿವರು ಸೇರಿ ಚರ್ಚೆ ಸೂಕ್ತ ತೀರ್ಮಾನಕ್ಕೆ ಬರುತ್ತಾರೆ. ಹಾಗೆಯೇ ನಾವು ಕೊಟ್ಟ ಮಾತಿನಂತೆ ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡುತ್ತೇವೆ ಎಂದು ತಿಳಿಸಿದರು.

ಅನ್ನಭಾಗ್ಯ ಯೋಜನೆ ಜಾರಿ ಬಗ್ಗೆ ಮಾತನಾಡಿದ ಅವರು, ತಡವಾದರೂ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡುತ್ತೇವೆ. ಈ ಯೋಜನೆಯ ಜಾರಿ ವಿಚಾರವಾಗಿ ಬಡವರು, ಫಲಾನುಭವಿಗಳು ಹೋರಾಟ ಮಾಡುತ್ತಿಲ್ಲ. ಬದಲಿಗೆ ಹೊಟ್ಟಿ ತುಂಬಿರುವ ಕೆಲವರು ಹೋರಾಟ ಮಾಡುತ್ತೇವೆ ಎನ್ನುತ್ತಿದ್ದಾರೆ. ಈ ಸರ್ಕಾರದಿಂದ ನಮಗೆ ಸಹಾಯ ಆಗುತ್ತಿದೆ ಎಂದು ಬಡವರು ಹೇಳುತ್ತಿದ್ದಾರೆ. ಅಲ್ಲದೆ ನಮ್ಮ ಶಕ್ತಿ ಯೋಜನೆಯಿಂದ ನಮ್ಮ ಅಕ್ಕ, ತಂಗಿಯರು ದೇವಸ್ಥಾನಗಳಿಗೆ ಭೇಟಿ ನೀಡಿ ಧರ್ಮಯಾತ್ರೆ ಮಾಡುತ್ತಿದ್ದಾರೆ ಎಂದರು.

ಅವರ ಖುಷಿ ನೋಡಲಾಗದೇ ಕೆಲವರು ಒಂದು ಕಾಳು ಅಕ್ಕಿ ಕಡಿಮೆ ಕೊಟ್ಟರೂ ಹೋರಾಟ ಮಾಡುತ್ತೇನೆ ಎಂದು ಸಂಕಟಪಡುತ್ತಿದ್ದಾರೆ. ಯಡಿಯೂರಪ್ಪನವರು ಧರಣಿ ಮಾಡುವುದರಲ್ಲಿ ಸಮರ್ಥರು. ಈಗಲೂ ಅವರು ವಿಧಾನಸಭೆಗೆ ಬಂದು ಹೋರಾಟ ಮಾಡಲಿ ಎಂದು ಆಹ್ವಾನ ಕೊಟ್ಟರು. ಇನ್ನು ಅನ್ನಭಾಗ್ಯ ಯೋಜನೆ ಜಾರಿ ವಿಚಾರವಾಗಿ ಮುನಿಯಪ್ಪ ಕೇಂದ್ರ ಸಚಿವ ಪಿಯೂಶ್ ಗೋಯಲ್ ಜೊತೆ ಮಾತನಾಡಲಿದ್ದಾರೆ. ಮತ್ತೊಂದೆಡೆ ಈಗಾಗಲೇ ಮುಖ್ಯಮಂತ್ರಿಗಳು ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ ಎಂದರು.

ಅರ್ಜಿ ಸಲ್ಲಿಕೆ ವೇಳೆ ಸರ್ವರ್‌ ಸಮಸ್ಯೆ

ಗೃಹಲಕ್ಷ್ಮಿ ಯೋಜನೆ ಆರಂಭವಾಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುಖ್ಯಮಂತ್ರಿಗಳ ಮಾತನಾಡಿ ಗೃಹಲಕ್ಷ್ಮಿ ಯೋಜನೆ ಜಾರಿಯನ್ನು ನಾನೇ ಸದ್ಯಕ್ಕೆ ತಡೆದಿದ್ದೇನೆ. ಗೃಹಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ವೇಳೆ ಸರ್ವರ್‌ ಸಮಸ್ಯೆ ಆಗುತ್ತಲೇ ಇದೆ. ಆದ್ದರಿಂದ ಮನೆಯೊಡತಿಯೇ ಸ್ವಯಂ ಅರ್ಜಿ ಸಲ್ಲಿಸುವಂತೆ ಸರಳೀಕರಣ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಕೆಗೆ ಆನ್‌ಲೈನ್ ಹಾಗೂ ಆಫ್ ಲೈನ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಎಂದರು.

ಹಣ ವಸೂಲಿ ಮಾಡಿದ್ರೆ ಕ್ರಮ

ಗೃಹಲಕ್ಷ್ಮಿ ಯೋಜನೆ ವಿಚಾರವಾಗಿ ಇಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರು ಹಾಗೂ ಅಧಿಕಾರಿಗಳ ಜೊತೆ ಸಭೆ ಮಾಡಲಾಗುವುದು. ಈ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೆಲವರು 200-300 ರೂಪಾಯಿ ಹಣ ವಸೂಲಿ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರು ಬಂದಿದೆ. ಈ ಅರ್ಜಿ ತುಂಬಲು ಏಜೆನ್ಸಿಗಳಾಗಲಿ ಅಥವಾ ಯಾರೇ ಲಂಚ ಪಡೆದರೆ ಅವರ ಪರವಾನಿಗೆ ರದ್ದಾಗುತ್ತದೆ. ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಯೋಜನೆಯನ್ನು ನೋಂದಣಿ ಮಾಡಿಕೊಳ್ಳಲು ಹೋಗುವವರು ಯಾರಿಗೂ ಲಂಚ ನೀಡುವ ಅಗತ್ಯವಿಲ್ಲ. ಯಾರಾದರೂ ಲಂಚ ಕೇಳಿದರೆ ಟೋಲ್ ಫ್ರೀ ಸಂಖ್ಯೆಗೆ ಕರೆ ಮಾಡಿ ದೂರು ನೀಡಿ. ನಾವು ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಲಂಚ ಮುಕ್ತ ರಾಜ್ಯ ನಮ್ಮ ಗುರಿಯಾಗಿದೆ ಎಂದು ತಿಳಿಸಿದರು.

ಇನ್ನು ಬಸವರಾಜ ಬೊಮ್ಮಾಯಿ ಅವರು 2 ವರ್ಷಗಳ ಕಾಲ ರಾಜ್ಯದ ಮುಖ್ಯಮಂತ್ರಿಗಳಾಗಿ ಬೆಂಗಳೂರಿನ ಅಭಿವೃದ್ಧಿಗೆ ಕೆಲವು ಉತ್ತಮ ಯೋಜನೆಗಳನ್ನು ಹಾಕಿಕೊಂಡಿದ್ದರು. ಆದರೆ ಅವರದ್ದು ಸಮ್ಮಿಶ್ರ ಸರ್ಕಾರವಾಗಿದ್ದ ಕಾರಣ ಆ ಯೋಜನೆಗಳನ್ನು ಜಾರಿ ಮಾಡಲು ಬಿಡಲಿಲ್ಲ. ಹೀಗಾಗಿ ಇದೀಗ ಅವರನ್ನು ಭೇಟಿ ಮಾಡಿ ಸಲಹೆ ಪಡೆಯಲಿದ್ದೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಬೆಂಗಳೂರಿನಲ್ಲಿ ಹೇಳಿದರು.

ನಾನು ಈ ಹಿಂದೆ ಜಗದೀಶ್ ಶೆಟ್ಟರ್, ದೇವೇಗೌಡರು, ಎಸ್.ಎಂ.ಕೃಷ್ಣ, ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಮಾಜಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದೇನೆ. ಆಗ ಕುಮಾರಸ್ವಾಮಿ ಅವರು ಸಿಗಲಿಲ್ಲ. ಸಾಧ್ಯವಾದರೆ ಅವರನ್ನೂ ಭೇಟಿ ಮಾಡಿ ಅಭಿಪ್ರಾಯಗಳನ್ನು ಸಂಗ್ರಹಿಸುತ್ತೇನೆ. ಇದರಲ್ಲಿ ರಾಜಕಾರಣದ ಪ್ರಶ್ನೆಯೇ ಇಲ್ಲ ಎಂದರು.

English summary

BJP government has increased electricity price says DCM DK Shivakumar in Bengaluru.

Source link