ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ | Vidhan Parishad Elections: 3 Congress Candidates will win says CM Siddaramaiah

Karnataka

oi-Mamatha M

|

Google Oneindia Kannada News

ಬೆಂಗಳೂರು, ಜೂನ್ 20 : ವಿಧಾನಪರಿಷತ್ತಿನ ತೆರವಾದ ಸ್ಥಾನಗಳ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಎನ್.ಎಸ್.ಬೋಸರಾಜು, ತಿಪ್ಪಣ್ಣಪ್ಪ ಕಮಕನೂರು ನಾಮಪತ್ರ ಸಲ್ಲಿಸಿದ್ದಾರೆ. ಮಂಗಳವಾರ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಈ ಮೂರು ಸದಸ್ಯರು ಚುನಾವಣೆಯಲ್ಲಿ ಗೆಲ್ಲುವ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್‌ನ ಮೂವರು ಅಭ್ಯರ್ಥಿಗಳು ವಿಧಾನಪರಿಷತ್ ಚುನಾವಣೆಯಾದರೂ ಗೆಲ್ಲುತ್ತಾರೆ, ಆಗದಿದ್ದರೂ ಗೆಲ್ಲುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನ ಚುನಾವಣೆಗೆ ಅಭ್ಯರ್ಥಿಗಳೊಂದಿಗೆ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ತಮ್ಮ ದೆಹಲಿ ಪ್ರವಾಸ, ಅನ್ನಭಾಗ್ಯ ಉಓಜನೆಗೆ ಕೇಂದ್ರ ಅಕ್ಕಿ ಪೂರೈಸದೆ ಇರುವುದು ಸೇರಿದಂತೆ ಹಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ.

Vidhan Parishad Elections: 3 Congress Candidates will win says CM Siddaramaiah

ಬುಧವಾರ ನವದೆಹಲಿಯಲ್ಲಿ ರಾಷ್ಟ್ರಪತಿ ದ್ರೌಭಪದಿ ಮುರ್ಮು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡುತ್ತಿದ್ದು, ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಕೇಂದ್ರ ಆಹಾರ ಸಚಿವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಲಿದ್ದಾರೆ. ಮುಖ್ಯಮಂತ್ರಿಯಾದ ನಂತರ ಕೇಂದ್ರ ಸಚಿವರೊಂದಿಗೆ ಸೌಜನ್ಯದ ಭೇಟಿ ಮಾಡಲಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ: ಸಿದ್ದರಾಮಯ್ಯ ಸರ್ಕಾರದ ಸಹಾಯಕ್ಕೆ ನಿಂತ ಪಂಜಾಬ್ ಎಎಪಿ ಸರ್ಕಾರಅನ್ನಭಾಗ್ಯ ಯೋಜನೆ: ಸಿದ್ದರಾಮಯ್ಯ ಸರ್ಕಾರದ ಸಹಾಯಕ್ಕೆ ನಿಂತ ಪಂಜಾಬ್ ಎಎಪಿ ಸರ್ಕಾರ

ಅಕ್ಕಿ ಖರೀದಿಗೆ ಸತತ ಪ್ರಯತ್ನ

ಪಶ್ಚಿಮ ಬಂಗಾಳ, ಆಂಧ್ರಪ್ರದೇಶ, ತೆಲಂಗಾಣ ಛತ್ತೀಸಗಢ ರಾಜ್ಯದೊಂದಿಗೆ ಅಕ್ಕಿ ಖರೀದಿ ಬಗ್ಗೆ ಚರ್ಚಿಸಲಾಗಿದೆ. ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ದಾಸ್ತಾನು ಬೇಕಾಗಿದೆ. ಛತ್ತೀಸಗಢ ದಿಂದ ಅಕ್ಕಿ ಖರೀದಿಸಿದರೆ ಸಾಗಾಣಿಕೆಯೂ ಸೇರಿ, ಎಫ್‌ಸಿಐಗಿಂತ ದರ ಹೆಚ್ಚಾಗುತ್ತದೆ. ತೆಲಂಗಾಣದಲ್ಲಿ ಅಕ್ಕಿ ದಾಸ್ತಾನು ಲಭ್ಯವಿಲ್ಲವೆಂದು ತಿಳಿಸಿದ್ದು, ಆಂಧ್ರಪ್ರದೇಶದೊಂದಿಗೆ ನಮ್ಮ ರಾಜ್ಯದ ಅಧಿಕಾರಿಗಳು ಚರ್ಚಿಸುತ್ತಿದ್ದಾರೆ ಎಂದಿದ್ದಾರೆ.

ಭಾರತ ಸರ್ಕಾರದ ಮೂರು ಸಂಸ್ಥೆಗಳಾದ ಎನ್‌ಸಿಸಿಎಫ್, ನಾಫೆಡ್ ಹಾಗೂ ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಖರೀದಿಗೆ ದರಪಟ್ಟಿ ಕರೆಯಲಾಗಿದೆ. ಅಕ್ಕಿ ಖರೀದಿ ಬಗ್ಗೆ ಎಫ್‌ಸಿಐಗೆ ಜೂನ್ 9 ರಂದು ಪತ್ರ ಬರೆಯಲಾಗಿದ್ದು, ಎಫ್‌ಸಿಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯಕ್ಕೆ ಸರಬರಾಜು ಮಾಡಲಾಗುವುದು ಎಂದು ಜೂನ್ 12 ರಂದು ತಿಳಿಸಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಎಫ್.ಸಿ.ಐ ಉಪ ವ್ಯವಸ್ಥಾಪಕರೊಂದಿಗೂ ಮಾತನಾಡಿದ್ದು, ಅವರೂ ಅಕ್ಕಿ ನೀಡುವುದಾಗಿ ಹೇಳಿದ್ದರು. ಇದಾದ ನಂತರ ಕೇಂದ್ರ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯವರು ಹಸ್ತಕ್ಷೇಪ ಮಾಡಿ ಜೂನ್ 13 ರಂದು ಎಫ್‌ಸಿಐ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರು ಪತ್ರ ಬರೆದು ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ. ನಂತರ ನಮಗೆ ಪತ್ರ ಬರೆದು ಅಕ್ಕಿ ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದು ದ್ವೇಷದ ರಾಜಕಾರಣ, ಬಡವರ ವಿರೋಧಿ ಕ್ರಮವಲ್ಲವೇ ಎಂದು ಮುಖ್ಯಮಂತ್ರಿ ಪ್ರಶ್ನಿಸಿದ್ದಾರೆ.

ತಡವಾದರೂ ಅಕ್ಕಿ ಕೊಟ್ಟೇ ಕೊಡುತ್ತೇವೆ- ಸಿದ್ದರಾಮಯ್ಯ

“ದ್ವೇಷದ ರಾಜಕಾರಣ ಮಾಡುವ ಇವರಿಗೆ ಮಾನವೀಯತೆ ಇದೆಯೇ? ದ್ವೇಷದ ರಾಜಕೀಯ ಮಾಡುತ್ತಾರಲ್ಲ. ಕೇಂದ್ರದ ಈ ನಡೆಯನ್ನು ಖಂಡಿಸಿ ನಮ್ಮ ಪಕ್ಷದ ವತಿಯಿಂದ ಎಲ್ಲೆಡೆ ಪ್ರತಿಭಟನೆ ಮಾಡಲಾಗಿದೆ. ದುರುದ್ದೇಶದಿಂದ ಈ ಕೆಲಸ ಮಾಡಿದ್ದಾರೆ. ಹಣ ನೀಡಿ ಅಕ್ಕಿಯನ್ನು ಪಡೆಯುತ್ತೇವೆ. ನಾವು ಸಹಕಾರಿ ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಯಾವಾಗಲೂ ಹೇಳುತ್ತಾರೆ. ಇದೇ ಇವರ ಸಹಕಾರಿ ಒಕ್ಕೂಟ ವ್ಯವಸ್ಥೆಯೇ..? ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

“ಬಿಜೆಪಿ ಸರ್ಕಾರ ಸರ್ವಾಧಿಕಾರಿಯಲ್ಲ. ಇದೊಂದು ಪ್ರಜಾಪ್ರಭುತ್ವದ ವ್ಯವಸ್ಥೆ, ಒಕ್ಕೂಟ ರಚನೆಯನ್ನು ಹೊಂದಿದ್ದೇವೆ. ಕೇಂದ್ರ ಸರ್ಕಾರವೇ ಭತ್ತ ಬೆಳೆಯುತ್ತದೆಯೇ. ಎಲ್ಲೆಲ್ಲಿ ಭತ್ತ ಬೆಳೆಯುತ್ತಾರೋ ಅಲ್ಲಿಂದ ಅಕ್ಕಿಯನ್ನು ಪಡೆಯುತ್ತಾರೆ. ಮಾತೆತ್ತಿದರೆ ಆಹಾರ ಭದ್ರತಾ ಕಾಯ್ದೆ ಎನ್ನುವ ಕೇಂದ್ರ ಸರ್ಕಾರ, ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಯು.ಪಿ.ಎ ಸರ್ಕಾರದಲ್ಲಿ ಮನ್ ಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಎನ್ನುವುದನ್ನು ಮರೆಯುತ್ತಿದೆ” ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

“ಈ ಕಾಯ್ದೆ ಬದಿದ್ದರಿಂದ 5 ಕೆಜಿ ಅಕ್ಕಿ ಕೊಡುವುದು ಮುಂದುವರೆದಿದೆ. ಅಕ್ಕಿ ಕೊಡಿ ಎಂದು ಕೇಳಿದ್ದೇವೆ. ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದ್ದೇವೆ. ನಾವು ಕೊಟ್ಟೇ ಕೊಡುತ್ತೇವೆ. ಸ್ವಲ್ಪ ವಿಳಂಬವಾಗಬಹುದು ಅಷ್ಟೇ” ಎಂದು ಮಾಹಿತಿ ನೀಡಿದ್ದಾರೆ. ಇನ್ನು, ರಾಜ್ಯದ ಅನ್ನಭಾಗ್ಯ ಯೋಜನೆಗೆ ಪೂರೈಸಲು ಅಕ್ಕಿ ನೀಡುವುದಾಗಿ ಪಂಜಾಬ್ ಸರ್ಕಾರ ಒಪ್ಪಿಗೆ ನೀಡಿದೆ.

English summary

Vidhan Parishad Elections: 3 Congress Candidates will win in legislative council elections says Chief Minister Siddaramaiah. know more.

Story first published: Tuesday, June 20, 2023, 17:50 [IST]

Source link